Primary School Repoen; 20 ತಿಂಗಳ ಬಳಿಕ ಪ್ರಾಥಮಿಕ ಶಾಲೆ ಆರಂಭ; ಮಧ್ಯಾಹ್ನದವರೆಗೆ ಮಾತ್ರ ಕ್ಲಾಸ್

ಬೇಗ ಮಕ್ಕಳನ್ನ ಶಾಲೆಗೆ ವಾಪಸ್ ಕರೆಸಿಕೊಳ್ಳಬೇಕು. ಆನ್ ಲೈನ್ (Online Class) ತರಗತಿ ನಿಲ್ಲಿಸಿ, ಬೌತಿಕ ತರಗತಿಗಳನ್ನ ಶುರು ಮಾಡಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಹೀಗಾಗಿ ಇಂದಿನಿಂದ 1 ರಿಂದ 5ನೇ ತರಗತಿವೆರೆಗೆ ಶಾಲೆ ಆರಂಭವಾಗುತ್ತಿದೆ.

ಪ್ರಾಥಮಿಕ ಶಾಲೆ ಆರಂಭ;

ಪ್ರಾಥಮಿಕ ಶಾಲೆ ಆರಂಭ;

  • Share this:
ಬೆಂಗಳೂರು: ಇಂದಿನಿಂದ 1 ರಿಂದ 5ನೇ ತರಗತಿವರೆಗಿನ ಶಾಲೆಗಳು (Primary School) 20 ತಿಂಗಳು ಬಳಿಕ ಆರಂಭಗೊಳ್ಳುತ್ತಿವೆ. ಈಗಾಗಲೇ ಕಾಲೇಜು, ಪ್ರೌಢ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿತ್ತು. ಲಸಿಕೆ ಬಂದರೂ ಕೊರೊನಾ ಆತಂಕ ಇನ್ನು ಕಡಿಮೆ ಆಗಿಲ್ಲ. ಕೊರೊನಾ (Corona Virus) ಹಿನ್ನೆಲೆ ಸರ್ಕಾರ ಸಹ ಎಲ್ಲ ಮುಂಜಾಗ್ರತ ಕ್ರಮಗಳೊಂದಿಗೆ ಶಾಲೆ ಆರಂಭಿಸೋದಾಗಿ ಹೇಳಿದೆ. ಹಾಗಾಗಿ ಭಾನುವಾರವೇ ಶಾಲೆಗಳನ್ನು ಶುಚಿಗೊಳಿಸಲಾಗಿತ್ತು. ಬೇಗ ಮಕ್ಕಳನ್ನ ಶಾಲೆಗೆ ವಾಪಸ್ ಕರೆಸಿಕೊಳ್ಳಬೇಕು. ಆನ್ ಲೈನ್ (Online Class) ತರಗತಿ ನಿಲ್ಲಿಸಿ, ಬೌತಿಕ ತರಗತಿಗಳನ್ನ ಶುರು ಮಾಡಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಹೀಗಾಗಿ ಇಂದಿನಿಂದ 1 ರಿಂದ 5ನೇ ತರಗತಿವೆರೆಗೆ ಶಾಲೆ ಆರಂಭವಾಗುತ್ತಿದೆ.

ಮಧ್ಯಾಹ್ನದವರೆಗೆ ಮಾತ್ರ ಕ್ಲಾಸ್

ಆರಂಭದಲ್ಲೇ ಮಕ್ಕಳಿಗೆ ಪೂರ್ಣಾವಧಿ ತರಗತಿಗಳು ಇರುವುದಿಲ್ಲ. ಈಗಾಗಲೇ ಕೊರೋನಾ ಹಾಗೂ ಇನ್ನಿತರ ವಿಚಾರಗಳಿಂದ ಮಕ್ಕಳು ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಹೀಗಾಗಿ ಏಕಾಏಕಿಯಾಗಿ ಪೂರ್ಣಾವಧಿ ತರಗತಿಗಳು ಮಾಡದೆ ಮಧ್ಯಾಹ್ನದವರೆಗೆ ಮಾತ್ರ ಕ್ಲಾಸ್ ನಡೆಸಲು ಇಲಾಖೆ ಮುಂದಾಗಿದೆ. ಮುಂದಿನ ದಿನಗಳಲ್ಲಿ ಮಕ್ಕಳ ಮನಸ್ಥಿತಿ ಅರಿತುಕೊಂಡು ತಜ್ಞರ ಅಭಿಪ್ರಾಯ ಪಡೆದು ತರಗತಿ ಅವಧಿ ವಿಸ್ತರಣೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ. ಜೊತೆಗೆ ಇಂದಿನಿಂದ ಬಿಸಿಯೂಟ ಕಾರ್ಯಕ್ರಮಕ್ಕೂ ಶಿಕ್ಷಣ ಇಲಾಖೆ ಚಾಲನೆ ನೀಡಲಾಗಿದೆ. ಕೊರೊನಾ ಹಿನ್ನೆಲೆ ಬಿಸಿಯೂಟ ಕಾರ್ಯಕ್ರಮ ನಿಲ್ಲಿಸಲಾಗಿತ್ತು.

ಇದನ್ನೂ ಓದಿ: Primary School Reopen: ಶಾಲೆ ಪ್ರಾರಂಭವಾಗುತ್ತಿದ್ದಂತೆ ಸರ್ಕಾರಕ್ಕೆ ಶುರುವಾಯ್ತು ತಲೆನೋವು

ಶಾಲೆ ಆರಂಭಕ್ಕೆ ಶಿಕ್ಷಣ ಇಲಾಖೆಯ ಮಾರ್ಗಸೂಚಿ

* ಶೇ.50 ರಷ್ಟು ಹಾಜರಾತಿಯಲ್ಲಿ ತರಗತಿ ನಡೆಸಲು ಅವಕಾಶ

* ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರವೇ ಶಾಲೆಗಳು ಒಪನ್

* ಇನ್ನುಳಿದ ಎರಡು ದಿನ ಶಾಲೆ ಕೊಠಡಿ ಗಳ ಸ್ವಚ್ಚತಾ ಕಾರ್ಯ ಸ್ಯಾನಿಟೈಸರ್ ಗೆ ಅವಕಾಶ

* ಮಕ್ಕಳಿಗೆ ಒಂದು ದಿನ ತರಗತಿ ಒಂದು ದಿನ ರಜೆ

* ಪಾಸಿಟಿವಿಟಿ ಶೇ.1ಕ್ಕಿಂತ ಕಡಿಮೆ ಇರುವ ಜಿಲ್ಲೆ, ತಾಲೂಕು ವಲಯಗಳಲ್ಲಿ ಮಾತ್ರ ಶಾಲೆ ಆರಂಭ

* ಮಕ್ಕಳು ಶಾಲೆಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯ

* ಅನುಮತಿ ಪತ್ರದಲ್ಲಿ ವಿದ್ಯಾರ್ಥಿಯ ಕೋವಿಡ್ ಸೋಂಕು ಇಲ್ಲದೆ ಇರೋದನ್ನ ಪೋಷಕರು ಧೃಢಿಕರಿಸಬೇಕು

* ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು

* ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ

* ಆನ್ ಲೈನ್ & ಆಫ್ ಲೈನ್ ಎರಡೂ ತರಗತಿಗೂ ಅವಕಾಶ

* 15 ರಿಂದ 20 ಮಕ್ಕಳ ತಂಡ ರಚಿಸಿ ಮಕ್ಕಳಿಗೆ ಪಾಠ ಮಾಡಬೇಕು

* ಎರಡು ಡೋಸ್ ಪಡೆದ ಶಿಕ್ಷಕರಿಗೆ ಮಾತ್ರ ಪಾಠ ಮಾಡಲು ಅವಕಾಶ

* ಶಾಲೆಗೆ ಬರುವ ಮಕ್ಕಳಿಗೆ ಶಾಲೆಯಲ್ಲಿ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು

ಶಾಲೆ ಆರಂಭದ ಬೆನ್ನಲ್ಲೇ ಶಿಕ್ಷಕರ ಪ್ರತಿಭಟನೆ

ಇತ್ತ ಸರ್ಕಾರಿ ಶಾಲಾ ಶಿಕ್ಷಕರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ನಡೆಸಲಿದ್ದಾರೆ. ಒಂದು ವೇಳೆ ಸರ್ಕಾರ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸದಿದ್ರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆಯನ್ನು ಸಹ ನೀಡಿದ್ದಾರೆ. ಪ್ರತಿಭಟನೆ ಜೊತೆ ಶಾಲಾ ತರಗತಿಗಳನ್ನು ಸಹ ಬಹಿಷ್ಕಾರ ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಲಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Primary Schools Reopen: ಕೋವಿಡ್​ ಭಯದಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂಜರಿಯುತ್ತಿರುವ ಪೋಷಕರು ಈ ಸುದ್ದಿ ಓದಿ..!

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳೇನು?

ಪದವೀಧರ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಬೇಕು. ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಆಗಬೇಕು. ಸೇವಾವಧಿಯಲ್ಲಿ ಶಿಕ್ಷಕರು ಬಯಸುವ ಜಿಲ್ಲೆಗೆ ಒಂದು ಬಾರಿ ವರ್ಗಾವಣೆ ಮಾಡುವುದು. ಮುಖ್ಯ ಗುರುಗಳಿಗೆ 15, 20, 25 ವರ್ಷಗಳ ವೇತನ ಬಡ್ತಿ ನೀಡುವುದು. ನೂತನ ಪಿಂಚಣಿ ಯೋಜನೆ ರದ್ದುಗೊಳಿಸುವುದು. ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆ ನೀಗಿಸುವುದು ಮತ್ತು ದೈಹಿಕ ಶಿಕ್ಷಕರ ಹಾಗೂ ಹಿಂದಿ ಶಿಕ್ಷಕರ ಸಮಸ್ಯೆಗಳನ್ನ ಸರ್ಕಾರ ಪರಿಹಾರ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
Published by:Mahmadrafik K
First published: