ಮೈಸೂರು (ಮೇ 27) : ಶಾಸಕ ಜಿ ಟಿ ದೇವೇಗೌಡರ (G.T Deve Gowda) ಮೊಮ್ಮಗಳು (Grand Daughter) ಮೃತಪಟ್ಟ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜಿ.ಟಿ ದೇವೇಗೌಡ ಅವರ ಕುಟುಂಬಕ್ಕೆ ಪತ್ರ (Letter) ಬರೆದು ಸಾಂತ್ವನ ಹೇಳಿದ್ದಾರೆ. ಜಿ.ಟಿ. ದೇವೇಗೌಡ ಅವರೇ, ನಿಮ್ಮ ಮೊಮ್ಮಗಳಾದ ಗೌರಿ (Gowri) ನಿಧನದ ಬಗ್ಗೆ ತಿಳಿದು ನನಗೆ ಆಘಾತವಾಗಿದೆ ಮತ್ತು ತೀವ್ರ ನೋವಾಗಿದೆ. ಇಷ್ಟು ಎಳೆ ವಯಸ್ಸಿನಲ್ಲಿ ಅವಳು ಇಹಲೋಕ ತ್ಯಜಿಸಿದ್ದಾಳೆ ಎಂದರೆ ನಂಬುವುದು ಅಸಾಧ್ಯ. ತೀವ್ರ ದುಃಖದ ಈ ಸಮಯದಲ್ಲಿ ನನ್ನ ಹೃತ್ಪೂರ್ವಕ ಸಂತಾಪಗಳು ಎಂದಿದ್ದಾರೆ
ಭಗವಂತ ದುಃಖ ಭರಿಸುವ ಶಕ್ತಿ ಕೊಡಲಿ
ಅಂತಹ ಚಿಕ್ಕ ವಯಸ್ಸಿನಲ್ಲಿ ಮಗುವಿನ ನಷ್ಟವು ಪೋಷಕರಿಗೆ ಮತ್ತು ಅಜ್ಜನಾದ ನಿಮಗೆ ಅತ್ಯಂತ ಕಷ್ಟಕರ ಸಮಯವಾಗಿದೆ. ಕುಟುಂಬಕ್ಕೆ ಆದ ನಷ್ಟ ಪದಗಳಿಗೆ ಮೀರಿದೆ. ಗೌರಿ ಬಿಟ್ಟು ಹೋಗಿರುವ ನೆನಪುಗಳು ಕುಟುಂಬಕ್ಕೆ ಸಾಂತ್ವನ ನೀಡಲಿ. ಈ ತುಂಬಲಾರದ ನಷ್ಟವನ್ನು ಭರಿಸುವ ಶಕ್ತಿಯನ್ನು ಕುಟುಂಬದ ಸದಸ್ಯರಿಗೆ ಮತ್ತು ಹಿತೈಷಿಗಳಿಗೆ ಭಗವಂತನು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ.
ಮೇ 15 ರಂದು ಗೌರಿ ನಿಧನ
ಮಾಜಿ ಸಚಿವ ಜಿ.ಟಿ.ದೇವೇಗೌಡರ ಮೊಮ್ಮಗಳು ಹಾಗೂ ರಾಜ್ಯ ಅಪೆಕ್ಸ್ ಬ್ಯಾಂಕ್‍ನ ಉಪಾಧ್ಯಕ್ಷ ಜಿ.ಡಿ.ಹರೀಶ್ ಗೌಡ ಅವರ ಪುತ್ರಿ ಗೌರಿ ಮೇ 15 ರಂದು ನಿಧನ ಹೊಂದಿದ್ದರು. ಮೂರು ವರ್ಷದ ಗೌರಿ ಮಧ್ಯರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದರು. ಕೆಲವು ತಿಂಗಳಿನಿಂದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಇತ್ತೀಚೆಗೆ ಚೇತರಿಸಿಕೊಂಡಿದ್ದರು. ಮೇ 14 ರಂದು ಮಧ್ಯಾಹ್ನ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಗೌರಿ ಕೊನೆಯುಸಿರೆಳೆದ್ರು.
ಇದನ್ನೂ ಓದಿ; Belagavi: ಮತ್ತೆ ಎಂಇಎಸ್ ಪುಂಡಾಟ; ಕನ್ನಡ ಹಾಡು ಹಾಕಿದ್ದಕ್ಕೆ ಬೈಕ್ಗೆ ಬೆಂಕಿ ಹಚ್ಚಿ ಹಲ್ಲೆ
ಗುಂಗ್ರಾಲ್‍ಛತ್ರದ ತೋಟದಲ್ಲಿ ಅಂತ್ಯಕ್ರಿಯೆ
ಮೊದಲ ಬಾರಿಗೆ ಮೊಮ್ಮಗಳ ಸಾವಿನ ಬಗ್ಗೆ ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸಿದ್ದ ಜಿ.ಟಿ. ದೇವೇಗೌಡ, ನನ್ನ ಮೊಮ್ಮಗಳು ಬಹಳ ಚೂಟಿಯಾಗಿದ್ದಳು. ಅವಳಿಗೆ ಕ್ಯಾನ್ಸರ್ ಬಂದಿತ್ತು. ಆದರೆ, ಏಳು ತಿಂಗಳಲ್ಲಿ ಅವಳು ಕ್ಯಾನ್ಸರ್ ಗೆದಿದ್ದಳು. ವೈದ್ಯರ ಕೂಡ ಕ್ಯಾನ್ಸರ್ ಮುಕ್ತ ಎಂದು ಹೇಳಿ ಸಂತೋಷ ಪಟಿದ್ದರು. ಆದರೆ, ಅವಳಿಗೆ ದಿಢೀರನೇ ಆ ಲಕ್ಷಣಗಳು ಕಾಣಿಸಿಕೊಂಡು ಸಾವು ಬಂತು ಎಂದು ಬೇಸರ ವ್ಯಕ್ತಪಡಿಸಿದರು.
ಅನೇಕ ಗಣ್ಯರಿಂದ ಸಾಂತ್ವನ
ಗೌರಿ ಸಾವಿನ ಹಿನ್ನೆಲೆಯಲ್ಲಿ ಎಲ್ಲಾ ರಾಜಕೀಯ ಮುಖಂಡರು ಸಾಂತ್ವನ ಹೇಳಿದ್ದಾರೆ. ಯಾವ ಪಕ್ಷದವರ ಜೊತೆಗೂ ರಾಜಕಾರಣ ಮಾತನಾಡಿಲ್ಲ. ಮಾಜಿ ಸಿಎಂ ಕುಮಾರಸ್ವಾಮಿ ಅವರ ಜೊತೆ ಮಾತು ಬಿಟ್ಟು ಎರಡೂವರೆ ವರ್ಷವಾಗಿತ್ತು. ಅವರು ಕೂಡ ಬಂದು ಸಾಂತ್ವನ ಹೇಳಿದ್ದಾರೆ ಎಂದರು. ನಿಖಿಲ್ ಕುಮಾರಸ್ಚಾಮಿ ನಮ್ಮ ಕುಟುಂಬದ ಸದಸ್ಯ ಇದ್ದಂತೆ. ನನ್ನ ಮಗ ಮತ್ತು ನಿಖಿಲ್ ಆತ್ಮೀಯ ಸ್ನೇಹಿತರು. ಹೀಗಾಗಿ ನಮ್ಮ ನೋವಿನ ಜೊತೆಗೆ ಅವರಿದ್ದಾರೆ. ರಾಜಕಾರಣ ವಿಚಾರವನ್ನು ಮುಂದೆ ಮಾತನಾಡುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ: Text Book Row: ಪಠ್ಯಪುಸ್ತಕ ಪರಿಷ್ಕರಣೆ ವಿರೋಧ; ಮೇ 31ರಂದು ರಾಜ್ಯಾದ್ಯಂತ ಹೋರಾಟಕ್ಕೆ ಕರವೇ ಸಜ್ಜು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ, ಎಚ್‌ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಘಟಾನುಘಟಿ ರಾಜಕೀಯ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸಿದ್ದರು. ಅಲ್ಲದೇ ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಜಿಟಿಡಿ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳುತ್ತಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ