Narendra Modi: ಮೋದಿ ಮಂಗಳೂರು ಭೇಟಿಗೆ ಮುಹೂರ್ತ ಫಿಕ್ಸ್! ಯಾವಾಗ ಬರ್ತಾರೆ ಗೊತ್ತಾ ಪ್ರಧಾನಿ?

ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಈ ಬಾರಿ ಮಂಗಳೂರಿಗೆ (Mangaluru) ಮೋದಿ ಆಗಮಿಸುತ್ತಿದ್ದು, ಅದಕ್ಕೆ ಮುಹೂರ್ತವೂ ಫಿಕ್ಸ್ ಆಗಿದೆ. ಬಿಜೆಪಿ ಭದ್ರಕೋಟೆ ಉಳಿಸಿಕೊಳ್ಳಲು ಬಿಜೆಪಿ ಶತಪ್ರಯತ್ನ ಮಾಡುತ್ತಿದೆ. ಇದರ ಫಲವಾಗಿಯೇ ಪ್ರಧಾನಿ ಮೋದಿಯವರನ್ನು ಕರೆಸಿ, ಡ್ಯಾಮೇಜ್ ಕಂಟ್ರೋಲ್‌ಗೆ ಯತ್ನಿಸುತ್ತಿದೆ ಎಂಬ ಮಾತುಗಳೂ ಕೇಳಿ ಬರುತ್ತಿವೆ.

ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ

  • Share this:
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಕಳೆದ ಜೂನ್‌ನಲ್ಲಿ (June) ಕರ್ನಾಟಕಕ್ಕೆ (Karnataka) ಬಂದಿದ್ದರು. ಜೂನ್ 22ರಂದು ಬೆಂಗಳೂರಿಗೆ (Bengaluru) ಬಂದಿದ್ದ ನರೇಂದ್ರ ಮೋದಿ, 2 ದಿನ ಪ್ರವಾಸ (Tour) ಕೈಗೊಂಡಿದ್ದರು. ಜೂನ್ 22ರಂದು ಬೆಂಗಳೂರಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ (Program) ಭಾಗಿಯಾಗಿದ್ದರೆ, 23ರಂದು ಮೈಸೂರಿನ ಅರಮನೆ (Mysore Palace) ಆವರಣದಲ್ಲಿ ನಡೆದ ವಿಶ್ವ ಯೋಗ ದಿನದಲ್ಲಿ (International Yoda Day) ಭಾಗಿಯಾಗಿದ್ದರು. ಇದೀಗ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಈ ಬಾರಿ ಮಂಗಳೂರಿಗೆ (Mangaluru) ಮೋದಿ ಆಗಮಿಸುತ್ತಿದ್ದು, ಅದಕ್ಕೆ ಮುಹೂರ್ತವೂ ಫಿಕ್ಸ್ ಆಗಿದೆ.

ಸೆ. 2ರಂದು ಮಂಗಳೂರಿಗೆ ಮೋದಿ ಆಗಮನ

ಪ್ರಧಾನಿ ನರೇಂದ್ರ ಮೋದಿ ಶೀಘ್ರವೇ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಅದರಲ್ಲೂ ಈ ಬಾರಿ ಮಂಗಳೂರಿಗೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 2, ಶುಕ್ರವಾರದಂದು ರಂದು ಸರ್ಕಾರಿ ಅಧಿಕೃತ ಕಾರ್ಯಕ್ರಮಕ್ಕಾಗಿ ಮಂಗಳೂರಿಗೆ ಆಗಮಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಮೋದಿ

ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಮಂಗಳೂರಿನ ಹೊರವಲಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬೃಹತ್ ಸಮಾವೇಶವನ್ನು ಆಯೋಜಿಸಲು ರಾಜ್ಯ ಬಿಜೆಪಿ ಸಿದ್ಧತೆ ನಡೆಸಿದೆ. ಇದೇ ವೇಳೆ ನಗರದ ಹೊರವಲಯ ಕೂಳೂರಿನಲ್ಲಿ ಪಕ್ಷದ ಕಾರ್ಯಕ್ರಮವನ್ನು ಆಯೋಜಿಸಲು ರಾಜ್ಯ ಬಿಜೆಪಿ ಪ್ಲಾನ್ ಮಾಡಿಕೊಂಡಿದೆ. ಈ ಮೂಲಕ ಬಿಜೆಪಿ ಕಾರ್ಯಕರ್ತರು, ಹಿಂದೂ ಕಾರ್ಯಕರ್ತರಿಗೆ ಹೊಸ ಹುರುಪು ನೀಡಲು ಬಿಜೆಪಿ ಮುಂದಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ISIS Terrorist: ಭಾರತದ ಮಹಾನಾಯಕನ ಹತ್ಯೆಗೆ ಸ್ಕೆಚ್, ರಷ್ಯಾದಲ್ಲಿ ಐಸಿಸ್ ಬಾಂಬರ್ ಅರೆಸ್ಟ್!

ಪ್ರಧಾನಿಯವರ ಕಾರ್ಯಕ್ರಮದ ಅಧಿಕೃತ ಪಟ್ಟಿಯಲ್ಲಿ ಉಲ್ಲೇಖ?

ಪ್ರಧಾನಿ ನರೇಂದ್ರ ಸರ್ಕಾರಿ ಅಧಿಕೃತ ಕಾರ್ಯಕ್ರಮಕ್ಕಾಗಿ ಮಂಗಳೂರಿಗ ಭೇಟಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.  ನವ ಮಂಗಳೂರು ಬಂದರು ಪ್ರಾಧಿಕಾರದ ಕಾರ್ಯಕ್ರಮಕ್ಕೆ ಮೋದಿಗೆ ಆಹ್ವಾನ ನೀಡಲಾಗಿದೆ. ಎನ್‍ಎಂಪಿಎದ ಹಲವು ಯೋಜನೆಗಳ ಉದ್ಘಾಟನೆಗಾಗಿ ಆಹ್ವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಬರುವುದಾಗಿ ಪ್ರಧಾನಿಯವರು ಒಪ್ಪಿಕೊಂಡಿದ್ದಾರೆ. ಮಂಗಳೂರು ಭೇಟಿ ಕುರಿತು ಪ್ರಧಾನಿ ಕಚೇರಿಯಿಂದ ಅಧಿಕೃತವಾಗಿದ್ದು, ಮಂಗಳೂರು ಪ್ರವಾಸ ಕಾರ್ಯಕ್ರಮ ಪಟ್ಟಿ ಅಂತಿಮಗೊಳಿಸುವ ಸಾಧ್ಯತೆ ಇದೆ.

ಹಲವು ಯೋಜನೆ ಹಾಕಿಕೊಂಡ ರಾಜ್ಯ ಬಿಜೆಪಿ

ಮಂಗಳೂರಿನಲ್ಲಿನ ಕೇಂದ್ರ ಸರ್ಕಾರದ ಹಲವು ಯೋಜನೆಗಳಿಗೆ ಚಾಲನೆ ಸಿಗಲಿದೆ. ಈ ಕಾರ್ಯಕ್ರಮಕ್ಕಾಗಿ ಮೋದಿ ಮಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ. ಇದೇ ವೇಳೆ ಮಂಗಳೂರಿನಲ್ಲಿ ಪಕ್ಷ ಕಾರ್ಯಕ್ರಮವನ್ನು ಆಯೋಜಿಸಲು ರಾಜ್ಯ ಬಿಜೆಪಿ ತಯಾರಿ ಮಾಡಿಕೊಂಡಿದೆ.

ಮಂಗಳೂರಿನ ಪರಿಸ್ಥಿತಿ ತಿಳಿಗೊಳಿಸಲು ಯತ್ನ

ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಬಿಜೆಪಿ ಕಾರ್ಯಕರ್ತರೇ ಖುದ್ದು ಬಿಜೆಪಿ ವಿರುದ್ಧ ತಿರುಗಿ ಬಿದ್ದಿದ್ದರು. ಇದಾದ ಬಳಿಕ ಸಾವರ್ಕರ್ ಫೋಟೋ ಗಲಾಟೆ ಇತ್ಯಾದಿಗಳಿಂದ ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರು ಬಿಜೆಪಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಮುನಿಸಿಕೊಂಡಿದ್ದಾರೆ. ಹೀಗಾಗಿ ಬಿಜೆಪಿ ಭದ್ರಕೋಟೆ ಉಳಿಸಿಕೊಳ್ಳಲು ಬಿಜೆಪಿ ಶತಪ್ರಯತ್ನ ಮಾಡುತ್ತಿದೆ. ಇದರ ಫಲವಾಗಿಯೇ ಪ್ರಧಾನಿ ಮೋದಿಯವರನ್ನು ಕರೆಸಿ, ಡ್ಯಾಮೇಜ್ ಕಂಟ್ರೋಲ್‌ಗೆ ಯತ್ನಿಸುತ್ತಿದೆ ಎಂಬ ಮಾತುಗಳೂ ಕೇಳಿ ಬರುತ್ತಿವೆ.

ಇದನ್ನೂ ಓದಿ: Siddaramaiah: 2017ರಲ್ಲಿ ಮಾಂಸ ತಿಂದು ಮೈಸೂರು ದಸರಾ ಅಂಬಾರಿಗೆ ಪೂಜೆ ಮಾಡಿದ್ರಾ ಸಿದ್ದರಾಮಯ್ಯ!?

ಆಗಸ್ಟ್ 24ರಂದು ಪಂಜಾಬ್‌ಗೆ ಮೋದಿ ಭೇಟಿ

ಇನ್ನು ಇದೇ ಆಗಸ್ಟ್ 24ರಂದು ಪ್ರಧಾನಿ ನರೇಂದ್ರ ಮೋದಿ ಪಂಜಾಬ್‌ಗೆ ಭೇಟಿ ನೀಡಲಿದ್ದಾರೆ. ಕಳೆದ ಬಾರಿ ಭೇಟಿ ನೀಡಿದ್ದಾಗ ಭದ್ರತಾ ವೈಪಲ್ಯವಾಗಿತ್ತು. ಹೀಗಾಗಿ ಮೊದಲೇ ಎಚ್ಚೆತ್ತಿರುವ ಪೊಲೀಸರು, ಈಗಿನಿಂದಲೇ ಸಿದ್ಧತೆ ನಡೆಸಿದ್ದಾರೆ.
Published by:Annappa Achari
First published: