ಬೆಂಗಳೂರು: ಇಡೀ ಪೊಲೀಸ್ ಇಲಾಖೆಯನ್ನು (Police Department) ಕೇಸರೀಕರಣ ಮಾಡಲು ಹೊರಟಿದ್ದು ಬಿಜೆಪಿ (BJP), ಹೀಗಾಗಿ ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಾಕೀತು ಮಾಡಿದ್ದಾರೆ. ನಿಮಗೆ ವೈಯಕ್ತಿಕ ರಾಜಕೀಯ ಏನಾದರೂ ಇರಲಿ. ಅದನ್ನ ಮತದಾನದ ಮೂಲಕ ನೀವು ತೋರಿಸಿಕೊಳ್ಳಿ. ಸಂವಿಧಾನದ (Constitution) ಅಡಿಯಲ್ಲಿ ಕೆಲಸ ಮಾಡಿ ಎಂದು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಕಾಂಗ್ರೆಸ್ಸೀಕರಣ ಅಂದರೆ ಬಸವ ತತ್ವ, ಗುರು ನಾರಾಯಣ ತತ್ವ. ಸಂವಿಧಾನವನ್ನು ಅನುಷ್ಠಾನಕ್ಕೆ ತರುವುದು ಕಾಂಗ್ರೆಸ್ಸೀಕರಣ ಎಂದು ಕಾಂಗ್ರೆಸ್ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge ) ಹೇಳಿದ್ದಾರೆ.
ಎಲ್ಲಾ ಕಾಯ್ದೆ ಮತ್ತೊಮ್ಮೆ ವಾಪಸ್ ತಂದು ಪರಿಷ್ಕರಣೆ ಮಾಡುತ್ತೇವೆ
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ ಅವರು, ನಾವು ಕಾನೂನು ಚೌಕಟ್ಟಿನಿಂದಲೇ ಕೆಲಸ ಮಾಡುತ್ತೇವೆ. ನಾಗಪುರದಿಂದ ಆದೇಶ ಮಾಡಿಸಿಕೊಂಡು ಬರುವುದಿಲ್ಲ.
ಇದನ್ನೂ ಓದಿ: JDS President: ಸೋಲಿನ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಿದ ಸಿಎಂ ಇಬ್ರಾಹಿಂಗೆ ದೇವೇಗೌಡರ ಕಿವಿಮಾತು!
ಬಿಜೆಪಿಯ ಪಠ್ಯಪುಸ್ತಕ ಪರಿಷ್ಕರಣೆ, ಗೋ ಹತ್ಯೆ ನಿಷೇಧ, ಮತಾಂತರ ನಿಷೇಧ ಕಾಯ್ದೆ ಎಲ್ಲವನ್ನೂ ಮತ್ತೊಮ್ಮೆ ವಾಪಸ್ ತಂದು ಪರಿಷ್ಕರಣೆ ಮಾಡುತ್ತೇವೆ. ಆ ಮೂಲಕ ಕರ್ನಾಟಕವನ್ನ ನಂಬರ್ 1 ಮಾಡುತ್ತೇವೆ. ಯಾವುದೇ ಸಂಘಟನೆ, ಯಾವುದೇ ಸಮುದಾಯಕ್ಕೆ ಸೇರಿರಲಿ, ಕೋಮು ದ್ವೇಷಕ್ಕೆ ಪ್ರೇರೇಪಿಸುವ ಕೆಲಸ ಮಾಡಿದರೆ ಕಡಿವಾಣ ಹಾಕುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಗ್ಯಾರಂಟಿ ಅನುಷ್ಠಾನಕ್ಕೆ ನಾವು ಬದ್ಧ
ಇದೇ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಅವರ ಟೀಕೆಗಳಿಗೂ ತಿರುಗೇಟು ಕೊಟ್ಟ ಪ್ರಿಯಾಂಕ್ ಖರ್ಗೆ ಅವರು, ಕೂಸು ಹುಟ್ಟಿದ ಕೂಡಲೇ ಓಡಬೇಕು, ನಡಿಬೇಕು ಆಡಬೇಕು ಅಂದರೆ ಹೇಗೆ? ಆಗುತ್ತಾ? It’s take a time. ಕುಮಾರಸ್ವಾಮಿ ಅವರು ಸರ್ಕಾರ ನಡೆಸಿದವರು, ಒಂದು ಯೋಜನೆ ಅನುಷ್ಠಾನಕ್ಕೆ ಎಷ್ಟು ಸಮಯ ಬೇಕು ಅಂತ ಅವರಿಗೆ ಗೊತ್ತಿದೆ. ಆರ್ಥಿಕವಾಗಿ ಏನೇನಾಗುತ್ತದೆ ಅಂತ ನೋಡಬೇಕು. ಅನುಷ್ಠಾನ ವಿಚಾರಕ್ಕೆ ಏನೇನಾಗುತ್ತೆ ನೋಡಬೇಕು, ಗ್ಯಾರಂಟಿ ಅನುಷ್ಠಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.
ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಕಿಡಿಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಎಲ್ಲಾ ಇಲಾಖೆಗಳಲ್ಲೂ ರಾಜಕಾರಣ ಮಾಡುವ ಕೆಲಸಕ್ಕೆ ಕಾಂಗ್ರೆಸ್ ಕೈ ಹಾಕಿದೆ. ಅಧಿಕಾರಿಗಳನ್ನು ಕಂಟ್ರೋಲ್ ಮಾಡಿ ಕಾಂಗ್ರೆಸ್ ಅಜೆಂಡಾ ಹೇರುವ ಕೆಲಸ ಮಾಡುತ್ತಿದೆ.
ಹಿಂದಿನ ಎಲ್ಲಾ ಜಿಲ್ಲಾಧಿಕಾರಿಗಳು ಒಳ್ಳೆಯ ಕೆಲಸ ಮಾಡಿ ರಾಜ್ಯ ಅಭಿವೃದ್ಧಿ ಆಗಿದೆ, ಇವತ್ತು ಅಂತಹ ಅಧಿಕಾರಿಗಳನ್ನು ಬೆದರಿಸುವ ತಂತ್ರಗಾರಿಕೆ ಸಿದ್ದರಾಮಯ್ಯ ಮಾಡ್ತಿದಾರೆ. ಕಾಂಗ್ರೆಸ್ ತನ್ನ ಹಿಂದೂ ವಿರೋಧಿ ನೀತಿಯನ್ನ ಪ್ರಕಟಿಸಿಯೇ ಪ್ರಕಟಿಸುತ್ತೆ. ನಾವು ಹೋರಾಟದ ಮೂಲಕ ಕಾಂಗ್ರೆಸ್ ಗೆ ಉತ್ತರ ಕೊಡ್ತೇವೆ. ನಾವು ಹಿಂದೂಗಳ ಪರವಾಗಿದ್ದೇವೆ, ಗೋಹತ್ಯೆ ನಿಷೇಧ, ಮತಾಂತರ ನಿಷೇಧದ ಪರವಾಗಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ