ಬೆಳಗಾವಿ: ಕಾಂಗ್ರೆಸ್ (Congress) ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುತ್ತಿರುವ ಪ್ರಿಯಾಂಕಾ ಗಾಂಧಿ (Priyanka Gandhi) ಅವರು, ಖಾನಾಪುರದಲ್ಲಿ ಹೊಸ ಘೋಷಣೆ ಮಾಡಿದ್ದಾರೆ. ಅಂಗನವಾಡಿ, ಆಶಾ ಕಾರ್ಯಕರ್ತರಿಗೆ (Asha Workers) ವೇತನ ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಿಯಾಂಕಾ ಅವರು, ಅಂಗನವಾಡಿ, ಆಶಾ ಕಾರ್ಯಕರ್ತರಿಗೆ ಯಾವುದೇ ಪೆನ್ಶನ್ ಸಿಗಲ್ಲ (Pension Scheme), ಸೌಲಭ್ಯ ಸಿಗಲ್ಲ. ಆದ್ದರಿಂದ ಬಹುದಿನಗಳ ಬೇಡಿಕೆಯಂತೆ ಅಂಗನವಾಡಿ ಮಹಿಳೆಯರಿಗೆ 15000ವರೆಗೆ ವೇತನ (Salary) ಹೆಚ್ಚಳ, ಆಶಾ ಕಾರ್ಯಕರ್ತೆಯರಿಗೆ 8000 ವೇತನ ಹೆಚ್ಚಳ, ಬಿಸಿಯೂಟ ಕಾರ್ಯಕರ್ತರಿಗೆ 5 ಸಾವಿರ ವೇತನ ಏರಿಕೆ ಮಾಡಲಾಗುತ್ತದೆ ಎಂದು ಘೋಷಣೆ ಮಾಡಿದ್ದಾರೆ.
ಶಾಸಕರನ್ನು ಖರೀದಿಸಿ ಸರ್ಕಾರವನ್ನು ಬಿಜೆಪಿ ರಚಿಸಿದೆ
ಖಾನಾಪುರದಲ್ಲಿ ಕಾಂಗ್ರೆಸ್ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಕರ್ನಾಟಕದಲ್ಲಿ ಸಂಸ್ಕೃತಿ, ಸಂಸ್ಕಾರವು ಎಲ್ಲವೂ ಇದೆ. ಪ್ರಕೃತಿಯ ಎಲ್ಲಾ ವಂಶಗಳು ರಾಜ್ಯದಲ್ಲಿ ಇವೆ. ಇಲ್ಲಿನ ಸರ್ಕಾರ ರಾಜ್ಯದ ಮಹತ್ವ ತಿಳಿದಿಲ್ಲ. ಜನರಿಗಾಗಿ ಕೆಲಸ ಮಾಡುವ ಸರ್ಕಾರ ಇರಬೇಕು. ಅಧಿಕಾರಕ್ಕೆ ಸಿಗುತ್ತಲೇ ನಮಗೆ ಗಳಿಸುತ್ತೇವೆ ಎನ್ನುವ ಭಾವನೆ ಕೆಲವರಿಗೆ ಬರುತ್ತದೆ.
ಶಾಸಕನ ಪುತ್ರರ ಬಳಿ 8 ಕೋಟಿ ಸಿಕ್ಕರೂ ಯಾವುದೇ ಶಿಕ್ಷೆ ಆಗಿಲ್ಲ
ರೈತರ ಎಲ್ಲಾ ವಸ್ತುಗಳ ಮೇಲೆ ಜಿಎಸ್ಟಿ ಟ್ಯಾಕ್ಸ್ ಪರಿಣಾಮ ಬಿದ್ದಿದೆ. ಎಲ್ಲಾ ಹಂತದಲ್ಲಿ ರೈತರು, ಮಹಿಳೆಯರಿಗೆ ಮೋಸ ಆಗಿದೆ. 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಇದನ್ನು ತುಂಬಿಕೊಳ್ಳುವ ಕೆಲಸ ಸರ್ಕಾರ ಮಾಡಿಲ್ಲ. ನೋಟ್ ಬ್ಯಾನ್, ಜಿಎಸ್ಟಿಹಿಂದ ಸಾಕಷ್ಟು ಸಮಸ್ಯೆ ಆಗಿದೆ. ಪಿ ಎಸ್ ಐ ನೇಮಕಾತಿಯಲ್ಲಿ ಅವ್ಯವಹಾರ ಆಗಿದೆ. ಶಾಸಕನ ಪುತ್ರರ ಬಳಿ 8 ಕೋಟಿ ಸಿಕ್ಕರೂ ಯಾವುದೇ ಶಿಕ್ಷೆ ಆಗಿಲ್ಲ. ಗುತ್ತಿಗೆದಾರ ಸಂಘದಿಂದ ಭ್ರಷ್ಟಾಚಾರದ ಬಗ್ಗೆ ಪತ್ರ ಬರೆದರೆ ಯಾವುದೇ ಕ್ರಮ ಆಗಿಲ್ಲ. ಐದು ವರ್ಷ ಇದೇ ಸರ್ಕಾರ ಇರಬೇಕೊ ಬದಲಾವಣೆ ಮಾಡಬೇಕು ಎಂದು ನೀವು ನಿರ್ಧಾರ ಮಾಡಿ ಎಂದು ಕರೆ ನೀಡಿದರು.
ಇದೇ ವೇಳೆ ಅಂಗನವಾಡಿ, ಆಶಾ ಕಾರ್ಯಕರ್ತರಿಗೆ ವೇತನ ಹೆಚ್ಚಳ ಮಾಡುತ್ತೇವೆ. ಕಾರ್ಯಕರ್ತೆಯರಿಗೆ ಯಾವುದೇ ಪೆನ್ಶನ್ ಸಿಗಲ್ಲ, ಸೌಲಭ್ಯ ಸಿಗಲ್ಲ ಎಂದಿದ್ದಾರೆ. ಅಂಗನವಾಡಿ ಮಹಿಳೆಯರಿಗೆ 15 ಸಾವಿರದ ರವರೆಗೆ ವೇತನ ಹೆಚ್ಚಿಸಲಾಗುವುದು. ಆಶಾ ಕಾರ್ಯಕರ್ತೆಯರಿಗಾಗಿ 8 ಸಾವಿರ ವೇತನ ಹೆಚ್ಚಳ ಮಾಡಲಾಗುವುದು. ಬಿಸಿಯೂಟ ಕಾರ್ಯಕರ್ತರಿಗೆ 5 ಸಾವಿರ ರೂಪಾಯಿ ವೇತನ ಏರಿಕೆ ಮಾಡಲಾಗುತ್ತದೆ ಎಂದು ಆಶ್ವಾಸನೆ ನೀಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ