ಬೆಂಗಳೂರು: ಇಂದು ಕಾಂಗ್ರೆಸ್ನ 'ನಾ ನಾಯಕಿ' ಸಮಾವೇಶ (Naa Nayaki Convention) ಬೆಂಗಳೂರಿನಲ್ಲಿ (Bengaluru) ನಡೆಯಲಿದ್ದು, ಪ್ರಿಯಾಂಕಾ ಗಾಂಧಿ (Priyanka Gandhi) ರಾಜ್ಯಕ್ಕೆ ಬರ್ತಿದ್ದಾರೆ. ಅರಮನೆ ಮೈದಾನದಲ್ಲಿ (Palace Ground ) ನಡೆಯಲಿರುವ ಮಹಿಳಾ ಸಮಾವೇಶಕ್ಕೆ ಸರ್ವ ಸಿದ್ಧತೆ ಮಾಡಲಾಗಿದೆ. ಮಧ್ಯಾಹ್ಮ12:30ಕ್ಕೆ ಸಮಾವೇಶ ನಡೆಯಲಿದ್ದು ಸುಮಾರು ಒಂದು ಲಕ್ಷ ಮಹಿಳೆಯರು ಭಾಗಿಯಾಗುವ ನಿರೀಕ್ಷೆ ಇದೆ. ಉತ್ತರ ಕರ್ನಾಟಕದ ಪ್ರತಿ ಬೂತ್ ನಿಂದ ತಲಾ ಇಬ್ಬರು, ದಕ್ಷಿಣ ಕರ್ನಾಟಕ ಭಾಗದ ಪ್ರತಿ ಬೂತ್ ನಿಂದ ತಲಾ ಮೂವರು ಮಹಿಳೆಯರು ಭಾಗಿಯಾಗಲಿದ್ದಾರೆ.
2023ರ ಚುನಾವಣೆಗೆ ಪಕ್ಷ ಸಂಘಟನೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಬೂಸ್ಟ್ ತುಂಬಲು ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿ ಆಗಮಿಸುತ್ತಿದ್ದಾರೆ. ಕಾಂಗ್ರೆಸ್ ಮಹಿಳಾ ಘಟಕದಿಂದ ಮಹಿಳೆಯರ ಸಂಘಟನೆಗಾಗಿ ಹಮ್ಮಿಕೊಂಡಿದ್ದ ‘ನಾ ನಾಯಕಿ’ ಸಮಾರೋಪ ಸಮಾರಂಭ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ.
ಇದನ್ನೂ ಓದಿ: Bharat Jodo Yatra: ನರ್ಮದಾ ತೀರದಲ್ಲಿ ಪ್ರಿಯಾಂಕಾ, ರಾಹುಲ್ ಗಾಂಧಿಯಿಂದ ಆರತಿ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.
ಇನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನ್ಯೂಸ್ 18 ಕನ್ನಡದ ಜೊತೆ ಮಾತನಾಡಿದ್ದು, ಮಹಿಳಾ ಮತಗಳನ್ನ ಸೆಳೆಯಲು ಈ ಸಮಾವೇಶ ಮಾಡಲಾಗುತ್ತಿದೆ. ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಮಹಿಳೆಯರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದೆ. ಮಾಜಿ ಸಿಎಂ ಎಸ್ಎಂ ಕೃಷ್ಣ ಅವರ ಕಾಲದಲ್ಲಿ ಸ್ತ್ರಿ ಶಕ್ತಿ ಸಂಘ ಸೇರಿದಂತೆ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾಲದಲ್ಲಿ ಹಲವು ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಮಹಿಳೆಯರಿಗೆ ಮೀಸಲಾತಿ, ಹಕ್ಕು, ಪಿಂಚಣಿ, ಸರ್ಕಾರದಿಂದ ಸಿಗುವ ಸೈಟ್ ಕೂಡ ಹೆಣ್ಣು ಮಕ್ಕಳಿಗೆ ನೀಡಲು ಕಾನೂನು ತಂದಿದ್ದೇವೆ.
ಪ್ರಿಯಾಂಕಾ ಗಾಂಧಿ ಅವರು ದೊಡ್ಡ ನಾಯಕತ್ವವನ್ನು ಹೊಂದಿದ್ದಾರೆ. ನಮ್ಮ ಕುಟುಂಬದಲ್ಲಿರುವ ಎಲ್ಲರೂ ನಾಯಕಿಯರು ಎಂಬ ಭಾವನೆ ನಮ್ಮಲ್ಲಿದೆ. ಮಹಿಳೆಯ ಪರ ಸಾಕಷ್ಟು ಹೋರಾಟ ಮಾಡಿದ್ದಾರೆ. ಉತ್ತರ ಪ್ರದೇಶದಲ್ಲಿ ಅವರ ಹೋರಾಟ ನಿರೀಕ್ಷಿತ ಫಲಿತಾಂಶ ನೀಡದಿದ್ದರೂ ಕೂಡ ನಮಗೆ ದೊಡ್ಡ ನಾಯಕತ್ವದ ಶಕ್ತಿಯನ್ನು ನೀಡಿದ್ದಾರೆ.
ನಮ್ಮದು ಪ್ರಜಾ ಧ್ವನಿ. ಜನರ ಸಂಕಷ್ಟ, ನೋವಿಗೆ ಕಾಂಗ್ರೆಸ್ ಧ್ವನಿಯಾಗಲಿದೆ. ಪ್ರಜಾಧ್ವನಿಯ ಮೊದಲ ಭರವಸೆ ಪ್ರತಿ ಮನೆಗೂ 200 ಯೂನಿಟ್ ವಿದ್ಯುತ್ ಉಚಿತ ಘೋಷಣೆ. ಇಂದು ಮಹಿಳೆಯರ ಸಬಲೀಕರಣ, ನಾಯತ್ವ ಗುಣವೃದ್ಧಿ, ಅವರ ಭಾವನೆಗಳಿಗೆ ಸ್ಪಂದನೆ, ಸಂಕಷ್ಟಕ್ಕೆ ಪರಿಹಾರ ನೀಡುವ ಸಂಕಲ್ಪ ಮಾಡಲಾಗುತ್ತದೆ. ಇಂದು ನಡೆಯುವ ಸಮಾವೇಶದಲ್ಲಿ ಮಹಿಳೆಯರು ನೀಡುವ ಎಲ್ಲಾ ಸಲಹೆಗಳನ್ನು ಸ್ವೀಕಾರ ಮಾಡಿ, ಈ ಬಗ್ಗೆ ಸಮಿತಿ ಮಾಡಿ ಮುಂದಿನ ದಿನಗಳಲ್ಲಿ ಜಾರಿ ಮಾಡುವ ಕೆಲಸ ಮಾಡ್ತೇವೆ ಎಂದು ತಿಳಿಸಿದರು.
ಬಿಜೆಪಿ ವಿರುದ್ಧ ‘ಕೈ’ ನಾಯಕರ ಕಿಡಿ
ಇನ್ನು, ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಮಾಜಿ ಸಂಸದ ವಿ ಎಸ್ ಉಗ್ರಪ್ಪ, ಮಾಜಿ ಸಚಿವ ಎಚ್ ಎಂ ರೇವಣ್ಣ, ಪರಿಷತ್ ಸದಸ್ಯ ಪಿ.ಆರ್ ರಮೇಶ್ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ