ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರಿಡಲು ಕನ್ನಡಪರ ಹೋರಾಟಗಾರರ ಆಗ್ರಹ

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ರಾಣಿ ಚೆನ್ನಮ್ಮ ವಿಮಾನ ನಿಲ್ದಾಣ ಎಂದು ಮರು ನಾಮಕರಣ ಮಾಡಬೇಕು. ಜತೆಗೆ ಬೆಳಗಾವಿ ರೈಲು ನಿಲ್ದಾಣಕ್ಕೆ ಬೆಳವಡಿ ರಾಣಿ ಮಲ್ಲಮ್ಮ ಹೆಸರು ನಾಮಕರಣ ಮಾಡಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ.

news18-kannada
Updated:September 16, 2020, 3:56 PM IST
ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರಿಡಲು ಕನ್ನಡಪರ ಹೋರಾಟಗಾರರ ಆಗ್ರಹ
ಕನ್ನಡಪರ ಹೋರಾಟಗಾರರು
  • Share this:
ಬೆಳಗಾವಿ(ಸೆಪ್ಟೆಂಬರ್ 15): ಹುಬ್ಬಳ್ಳಿ ರೈಲು ನಿಲ್ದಾಣ ಇನ್ನೂ ಮುಂದೆ ಸಿದ್ದಾರೂಢ ಸ್ವಾಮೀಜಿ ರೈಲು ನಿಲ್ದಾಣವಾಗಲಿದೆ. ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ ಶ್ರೀ ಸಿದ್ದಾರೂಢ ಸ್ವಾಮೀಜಿ ರೈಲು ನಿಲ್ದಾಣವೆಂದು ನಾಮಕರಣ ಮಾಡಲು ಅನುಮೋದನೆ ನೀಡಿದೆ. ಈ ಬೆನ್ನಲ್ಲೇ ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚೆನ್ನಮ್ಮ ವಿಮಾನ ನಿಲ್ದಾಣ ಎಂದು ಹೆಸರಿಡಬೇಕು. ಜೊತೆಗೆ ರೈಲು ನಿಲ್ದಾಣಕ್ಕೆ ಬೆಳವಡಿ ರಾಣಿ ಮಲ್ಲಮ್ಮ ಹೆಸರು ಇಡಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. ಬೆಳಗಾವಿಯಲ್ಲಿ ಇತ್ತೀಚಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸಂಬಂಧ ದೊಡ್ಡ ವಿವಾದ ಸೃಷ್ಠಿಯಾಗಿತ್ತು. ಇದೀಗ ಆ ವಿವಾದ ಸುಖಾಂತ್ಯವಾಗಿದ್ದು, ಕನ್ನಡ ಪರ ಹೋರಾಟಗಾರರು ಮತ್ತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ. ಸುವರ್ಣ ವಿಧಾನಸೌಧದ ಬಳಿ ರಾಣಿ ಚನ್ನಮ್ಮ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಮಾಡಬೇಕು ಎಂದು ಅನೇಕರು ಆಗ್ರಹಿಸಿದ್ದಾರೆ.

ಕಾಲಿನಲ್ಲಿ ಆಣಿಗಳಾಗಿವೆಯೇ? ಹಾಗಿದ್ರೆ ಇಲ್ಲಿದೆ ಮನೆಮದ್ದು

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ರಾಣಿ ಚೆನ್ನಮ್ಮ ವಿಮಾನ ನಿಲ್ದಾಣ ಎಂದು ಮರು ನಾಮಕರಣ ಮಾಡಬೇಕು. ಜತೆಗೆ ಬೆಳಗಾವಿ ರೈಲು ನಿಲ್ದಾಣಕ್ಕೆ ಬೆಳವಡಿ ರಾಣಿ ಮಲ್ಲಮ್ಮ ಹೆಸರು ನಾಮಕರಣ ಮಾಡಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. ಈ ಬಗ್ಗೆ ಕನ್ನಡ ಪರ ಹೋರಾಟಗಾರರು ಇಂದು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಕೆ ನಿರ್ಧರಿಸಿದ್ದಾರೆ.

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ 2017 ಸೆಪ್ಟೆಂಬರ್ 15ರಂದು ಮೇಲ್ದರ್ಜೆಗೆ ಏರಿದ ಬೆಳಗಾವಿ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಬೆಳಗಾವಿ ಸಂಸದ ಸುರೇಶ ಅಂಗಡಿ ನಿಲ್ದಾಣಕ್ಕೆ ರಾಣಿ ಚೆನ್ನಮ್ಮ ಹೆಸರು ನಾಮಕರಣ ಮಾಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದರು. ರಾಜ್ಯ ಸಚಿವ ಸಂಪುಟದಲ್ಲಿ ಈ ಬಗ್ಗೆ ನಿರ್ಣಯ ಮಾಡಿ ಕೇಂದ್ರ ಪ್ರಸ್ತಾವನೆ ಸಲ್ಲಿಸುವಂತೆ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಎರಡು ಸರ್ಕಾರಗಳು ಬದಲಾವಣೆಯಾದರೂ ಇನ್ನೂ ಸಂಪುಟದಲ್ಲಿ ಈ ಬಗ್ಗೆ ನಿರ್ಣಯ ಆಗಿಲ್ಲ. ಹೀಗಾಗಿ ಬೆಳಗಾವಿ ಕನ್ನಡ ಪರ ಹೋರಾಟಗಾರರು ಇದಕ್ಕಾಗಿ ಮತ್ತೆ ಹೋರಾಟ ನಡೆಸುವ ಎಚ್ಚರಿಕೆಯನ್ನು ರಾಜ್ಯ ಸರ್ಕಾರಕ್ಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಓರ್ವ ಕೇಂದ್ರ ಸಚಿವ ಹಾಗೂ ಡಿಸಿಎಂ ಸೇರಿ 4 ನಾಲ್ವರು ಸಚಿವರಿದ್ದಾರೆ. ಆದರೆ ಈ ಪ್ರಸ್ತಾವನೆ ಮಾತ್ರ ಕಳೆದ 3 ವರ್ಷಗಳಿಂದ ಈಡೇರಿಲ್ಲ. ತಕ್ಷಣ ಗಡಿ ಭಾಗದ ಕನ್ನಡಿಗರ ಬೇಡಿಕೆಗೆ ಸರ್ಕಾರ ಸ್ಪಂದಿಸಬೇಕು ಎಂದು ಕನ್ನಡ ಪರ ಹೋರಾಟಗಾರರು ಆಗ್ರಹಿಸಿದ್ದಾರೆ.
Published by: Latha CG
First published: September 16, 2020, 3:56 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading