Basavaraj Bommai: ‘ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ಪ್ರತಿಭಟನೆ; ಶೂಟ್ ಆನ್​ ಸೈಟ್ ಆರ್ಡರ್ ಕೊಡೋ ಅಗತ್ಯವಿಲ್ಲ‘

ಬಿಜೆಪಿ ನಾಯಕಿ ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ರಾಜ್ಯದಲ್ಲಿಯೂ ಪ್ರತಿಭಟನೆಗಳು ನಡೆಯುತ್ತಿದ್ದು, ಯುಪಿ ಯಲ್ಲಿ ಶೂಟ್ ಆನ್​ ಸೈಟ್ ಆರ್ಡರ್ ಕೊಟ್ಟಂತೆ ಇಲ್ಲಿ ಕೊಡೋ ಅಗತ್ಯವಿಲ್ಲ ಎಂದಿರೊ ಬೊಮ್ಮಾಯಿ, ಕಾನೂನು ಸುವ್ಯವಸ್ಥೆ ಸಂಪೂರ್ಣ ಹತೋಟಿಯಲ್ಲಿದೆ ಎಂದಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ

  • Share this:
ಹುಬ್ಬಳ್ಳಿ (ಜೂ 11):  ನೂಪುರ್ ಶರ್ಮಾ (Nupur Sharma) ಹೇಳಿಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಪ್ರತಿಭಟನೆಗಳು (Protest) ನಡೆಯುತ್ತಿದ್ದರೂ ಪರಿಸ್ಥಿತಿ ಹತೋಟಿಯಲ್ಲಿದೆ. ಹೀಗಾಗಿ ಉತ್ತರ ಪ್ರದೇಶ (Uttara Pradesha) ಮಾದರಿ ಅಗತ್ಯವಿಲ್ಲ. ಶೂಟ್ ಆನ್​​ ​ಸೈಟ್ ಆರ್ಡರ್ (Shoot On Sight) ಕೊಡೋ ಪರಿಸ್ಥಿತಿ ರಾಜ್ಯದಲ್ಲಿಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನೂಪುರ್ ಶರ್ಮಾ ಹೇಳಿಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಪ್ರತಿಭಟನೆ ನಡೀತಾ ಇವೆ. ಸದ್ಯಕ್ಕೆ ರಾಜ್ಯದ ಕಾನೂನು ಸುವ್ಯವಸ್ಥೆ (Law And Order) ನಿಯಂತ್ರಣದಲ್ಲಿದೆ. ಹೀಗಾಗಿ ನಾವು ಉತ್ತರಪ್ರದೇಶದ ಮಾದರಿಯನ್ನು (Sample) ಅಳವಡಿಸಿಕೊಳ್ಳಲು ಅಗತ್ಯವಿಲ್ಲ ಎಂದ್ರು. 

ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಸಭೆ

ದೇಶದಲ್ಲಿ ವಿವಿಧೆಡೆ ನಡೆಯುತ್ತಿರುವ ಹಿಂಸಾಚಾರ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಪ್ರತಿಯೊಂದು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮುಂಜಾಗ್ರತಾ ವಹಿಸಲು‌ ಸೂಚಿಸಲಾಗಿದೆ. ಆಯಾ ಠಾಣೆ ವ್ಯಾಪ್ತಿಯಲ್ಲಿ ಎಲ್ಲಾ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿ ಸೌಹಾರ್ದತೆ ಕಾಪಾಡಬೇಕೆಂದು‌ ಸೂಚನೆ ನೀಡಲಾಗಿದೆ. ಈ ಕುರಿತು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರ ಜೊತೆಗೂ ಚರ್ಚೆ ಮಾಡಿದ್ದೇನೆ ಎಂದರು.

ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ತೇವೆ

ಬೆಂಗಳೂರಿನಲ್ಲಿ ಮತ್ತೊಂದು ಆಸಿಡ್‌ ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಘಟನೆ ಮರುಕಳಿಸಿರೋದು ದುರದೃಷ್ಟಕರ. ಅಂಥವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ತೇವೆ. ಕಠಿಣ ಕಾನೂನು ಕೈಗೊಳ್ಳಲು ಚಿಂತಿಸಲಾಗಿದೆ. ರಾಯಚೂರು ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದ ಪ್ರಕರಣ ಬಗ್ಗೆ ಈಗಾಗಲೇ ತನಿಖೆ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನ ಅಮಾನತು ಮಾಡಲಾಗಿದೆ. ನಾಲ್ಕು ಪರಿಷತ್ ಚುನಾವಣೆಯಲ್ಲಿ ನಮ್ಮ ಗೆಲವು ನಿಶ್ಚಿತ ಎಂದರು.

ಮತ್ತೊಂದು ಅಪರೇಷನ್ ಕಮಲದ ಸುಳಿವು ಕೊಟ್ಟ ಅಶ್ವತ್ಥ ನಾರಾಯಣ

ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಮತ್ತಷ್ಟು ಶಾಸಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿರುವ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಮತ್ತೊಂದು ಆಪರೇಷನ್ ಕಮಲದ ಸುಳಿವು ಬಿಟ್ಟುಕೊಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕುಟುಂಬ ಪಕ್ಷಗಳ ನಿಲುವಿನಿಂದ ಬೇಸತ್ತು ಕೆಲವರು ಬಿಜೆಪಿಗೆ ಬರುತ್ತಾರೆ ಕಾದು ನೋಡಿ ಎಂದರು. ಪರಿಸ್ಥಿತಿಗೆ ಅನುಗುಣವಾಗಿ ಯಾರ್ಯಾರು ಬರುತ್ತಾರೆ ಅನ್ನೋದು ಗೊತ್ತಾಗುತ್ತೆ. ಬೇರೆ ಪಕ್ಷಗಳಿಗಿಂತ ಬಿಜೆಪಿಯಲ್ಲಿ ಉತ್ತಮ ಭವಿಷ್ಯವಿದೆ. ಅದೇ ರೀತಿ ಅವಕಾಶಗಳಿವೆ. ಹೀಗಾಗಿ ಇನ್ನೂ ಹಲವು ಜನ ಬಿಜೆಪಿಗೆ ಸೇರಲಿದ್ದಾರೆ ಎಂದರು.

ಒಂದು ಹೇಳಿಕೆಯನ್ನಿಟ್ಟುಕೊಂಡು ರಾಜಕಾರಣ

ಯುಪಿಯಲ್ಲಿ ಹಿಂಸಾಚಾರ ಹೋರಾಟದ ಕುರಿತು ಪ್ರತಿಕ್ರಿಯಿಸಿದ ಅಶ್ವತ್ಥ ನಾರಾಯಣ, ಒಂದು ಹೇಳಿಕೆಯನ್ನಿಟ್ಟುಕೊಂಡು ರಾಜಕಾರಣ ಮಾಡಲಾಗುತ್ತಿದೆ, ಇದು ಸರಿಯಲ್ಲ‌. ದೇಶದ ಐಕ್ಯತೆ ವಿಚಾರದಲ್ಲಿ ಹಿಂಸಾಚಾರ ನಡೆಸುವುದು ಸರಿಯಲ್ಲ‌ ಎಂದರು. ರಾಜ್ಯಸಭೆ ಚುನಾವಣೆಯಲ್ಲಿ ಎ ಟೀಮ್ ಬಿ ಟೀಂ ಅಂತ ಅನ್ನೋ ಪ್ರಶ್ನೆಯೇ ಇಲ್ಲ. ನಮ್ಮ ಸಂಖ್ಯಾಬಲ ಜಾಸ್ತಿ ಇತ್ತು ನಾವು ಒಂದಾಗಿ ಕೆಲಸ ಮಾಡಿದೆವು. ಜೆಡಿಎಸ್ ಮತ್ತು ಕಾಂಗ್ರೆಸ್ ನವರು ಒಂದಾಗಲಿಲ್ಲ. ಹೀಗಾಗಿ ಸಹಜವಾಗಿ ಗೆಲುವಾಗಿದೆ.

ಪಠ್ಯ ಪುಸ್ತಕ ಪರಿಷ್ಕರಣೆ- ಯಾವ ಗೊಂದಲವೂ ಇಲ್ಲ

ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಎಲ್ಲ ಗೊಂದಲಗಳು ನಿವಾರಣೆಯಾಗಿದೆ. ಸಣ್ಣಪುಟ್ಟ ಲೋಪದೋಷಗಳನ್ನು ಸರಿಪಡಿಸಲು ತೀರ್ಮಾನಿಸಲಾಗಿದೆ. ಪಠ್ಯ ಪರಿಷ್ಕರಣೆ ಸಮಿತಿಯನ್ನು ವಿಸರ್ಜಿಸಲಾಗಿದೆ. ಈ ಬಗ್ಗೆ ಮತ್ತೆ ಚರ್ಚೆ ನಡೆಸುವ ಅಗತ್ಯವಿಲ್ಲ ಎಂದು ಅಶ್ವತ್ಥ ನಾರಾಯಣ ತಿಳಿಸಿದರು.
Published by:Pavana HS
First published: