ಮಂಡ್ಯದಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ರೈತರ ಹೋರಾಟ; ಮುಂದುವರಿದ ಅಹೋರಾತ್ರಿ ಧರಣಿ

ನೀರಿಲ್ಲದೇ ಮಂಡ್ಯ ಜಿಲ್ಲೆಯ ರೈತರು ಕಂಗಾಲಾಗಿದ್ದು, ಒಣಗ್ತಿರೋ ಬೆಳೆ ರಕ್ಷಣೆಗಾಗಿ ಹೋರಾಟದ ಹಾದಿ ಹಿಡಿದಿದ್ದಾರೆ. ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸ್ತಿದ್ದಾರೆ.

news18
Updated:June 26, 2019, 4:13 PM IST
ಮಂಡ್ಯದಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ರೈತರ ಹೋರಾಟ; ಮುಂದುವರಿದ ಅಹೋರಾತ್ರಿ ಧರಣಿ
ರೈತರ ಪ್ರತಿಭಟನೆ
  • News18
  • Last Updated: June 26, 2019, 4:13 PM IST
  • Share this:
ಮಂಡ್ಯ(ಜೂನ್ 26): ಮಳೆ ಇಲ್ಲದೆ ಒಣಗುವ ಸ್ಥಿತಿಗೆ ಬಂದಿರುವ ಬೆಳೆಯ ರಕ್ಷಣೆಗಾಗಿ ಮಂಡ್ಯದಲ್ಲಿ ರೈತರ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ. ನಾಲೆಗೆ ನೀರು ಹರಿಸಿ ರೈತರ ಬೆಳೆ ಉಳಿಸಿ  ಎಂದು ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಈಗ  6 ನೇ ದಿನಕ್ಕೆ ಕಾಲಿಟ್ಟಿದೆ. ರೈತ ನಾಯಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಧರಣಿ ನಡೆಸ್ತಿರೋ ರೈತರು, ಸರ್ಕಾರ ತಮ್ಮ ಹೋರಾಟಕ್ಕೆ ಸ್ಪಂದಿಸದರೋದಕ್ಕೆ ಅಸಮಧಾನಗೊಂಡಿದ್ದಾರೆ. ಅದಕ್ಕಾಗಿ ಪ್ರತಿಭಟನೆ ತೀವ್ರಗೊಳಿಸುವ ನಿರ್ಧಾರಕ್ಕೆ ಬಂದಿದ್ದು, ನೀರು ಬಿಡಲು ಒಪ್ಪದಿದ್ರೆ ಜಿಲ್ಲಾಧಿಕಾರಿ‌ ಕಚೇರಿಗೆ ಮುತ್ತಿಗೆ ಮತ್ತು ಕೆ.ಆರ್.ಎಸ್.ಗೆ ಪಾದಯಾತ್ರೆ ಆರಂಭಿಸುವ ಚಿಂತನೆಯಲ್ಲಿದ್ದಾರೆ.

ಇಂದು ಸರ್ಕಾರ ಏನು ನಿರ್ಧಾರ ಕೈಗೊಳ್ಳಲಿದೆ ಅನ್ನೋದ್ರ ಮೇಲೆ ರೈತರ ಪ್ರತಿಭಟನೆಯ ತೀವ್ರತೆ ನಿರ್ಧಾರವಾಗಲಿದೆ ಎಂದು ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಮುಂದುವರಿದ ರೈತರ ಪ್ರತಿಭಟನೆ; ಶೀಘ್ರ ಪರಿಹಾರದ ಭರವಸೆ ನೀಡಿದ ಡಿಸಿಎಂ ಪರಮೇಶ್ವರ್

ಇನ್ನು, 6 ದಿನಗಳಿಂದ ನೀರಿಗಾಗಿ ಅಹೋರಾತ್ರಿ ಪ್ರತಿಭಟನೆ ಮಾಡುತ್ತಿದ್ದರೂ ಸ್ಪಂದಿಸಿದ ಸರ್ಕಾರದ ವಿರುದ್ದ ರೈತರು ರೊಚ್ಚಿಗೆದ್ದಿದ್ದಾರೆ. ಜಿಲ್ಲೆಯ ಕಾವೇರಿ ನೀರಾವರಿ ನಿಗಮ ಕೇಂದ್ರ ಕಚೇರಿಯಲ್ಲಿ ಮಾಡುತ್ತಿದ್ದ ಪ್ರತಿಭಟನೆಯನ್ನು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಿಗೂ ವಿಸ್ತರಣೆ ಮಾಡಿದ್ದಾರೆ. ಮದ್ದೂರು ಪಟ್ಟಣದ ತಹಶೀಲ್ದಾರ್ ಮತ್ತು ಕಾವೇರಿ ನೀರಾವರಿ ಕಚೇರಿಗೆ ಜಾನುವಾರುಗಳೊಂದಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಜನ ಜಾನುವಾರುಗಳಿಗೆ ಕುಡಿಯುವ ನೀರಿಗಾದರೂ ನಾಲೆಗೆ ನೀರು ಹರಿಸುವಂತೆ ಒತ್ತಾಯಿಸಿದ್ದು, ನೀರು ಹರಿಸದಿದ್ರೆ ಕುಟುಂಬದೊಂದಿಗೆ ಸಾಮೂಹಿಕ ಆತ್ಮಹತ್ಯೆಯೊಂದೇ ದಾರಿ ಎಂದು ಸರ್ಕಾರಕ್ಕೆ ರೈತರು ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ಜಿಲ್ಲೆಯಲ್ಲಿ ಹೆಚ್ಚಿನ‌ ರೈತರು ಆತ್ಮಹತ್ಯೆಗೆ ಶರಣಾಗಿದ್ದು, ಈಗ ನೀರಿಲ್ಲದೆ ಬೆಳೆ ಒಣಗಿದ್ರೆ ಮತ್ತಷ್ಟು ರೈತರು‌ ಆತ್ಮಹತ್ಯೆ ದಾರಿ ಹಿಡಿಯೋದು ಸುಳ್ಳಲ್ಲ.

(ವರದಿ: ರಾಘವೇಂದ್ರ ಗಂಜಾಮ್)
First published:June 26, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ