• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Blood Letter: ಪಿಎಸ್ಐ ಅಭ್ಯರ್ಥಿಗಳಿಂದ ಪ್ರಧಾನಿಗೆ ರಕ್ತದಲ್ಲಿ 'ಉಗ್ರ' ಸಂದೇಶ! ಅಷ್ಟಕ್ಕೂ ಆ ಪತ್ರದಲ್ಲಿ ಏನಿದೆ?

Blood Letter: ಪಿಎಸ್ಐ ಅಭ್ಯರ್ಥಿಗಳಿಂದ ಪ್ರಧಾನಿಗೆ ರಕ್ತದಲ್ಲಿ 'ಉಗ್ರ' ಸಂದೇಶ! ಅಷ್ಟಕ್ಕೂ ಆ ಪತ್ರದಲ್ಲಿ ಏನಿದೆ?

ಪ್ರಧಾನಿಗೆ ರಕ್ತದಲ್ಲಿ ಬರೆದ ಪತ್ರ

ಪ್ರಧಾನಿಗೆ ರಕ್ತದಲ್ಲಿ ಬರೆದ ಪತ್ರ

ಪಿಎಸ್ಐ ಪರೀಕ್ಷೆಯನ್ನು ಪ್ರಾಮಾಣಿಕವಾಗಿ ಬರೆದು, ಅನ್ಯಾಯಕ್ಕೆ ಒಳಗಾಗಿದ್ದಾರೆ ಎನ್ನಲಾದ ಅಭ್ಯರ್ಥಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ (PM Narendra Modi) ಪತ್ರ (Letter) ಬರೆದಿದ್ದಾರೆ. ಅದರಲ್ಲೂ ರಕ್ತದಲ್ಲಿ (Blood) ಪತ್ರ ಬರೆದು, ‘ಉಗ್ರ’ ಸಂದೇಶವೊಂದನ್ನು ಕಳಿಸಿದ್ದಾರೆ ಎನ್ನಲಾಗುತ್ತಿದೆ. ಈ ಪತ್ರಗಳೀಗ ವೈರಲ್ (Viral) ಆಗಿದೆ.

ಮುಂದೆ ಓದಿ ...
  • Share this:

ಬೆಂಗಳೂರು: ದೇಶದಲ್ಲೇ ಅಲ್ಲೋಲ ಕಲ್ಲೋಲ ಎಬ್ಬಿಸಿರುವ ಕರ್ನಾಟಕದ (Karnataka) ಪಿಎಸ್ಐ ಪರೀಕ್ಷಾ ಹಗರಣದ (PSI Exam Scam) ತನಿಖೆ (Investigation) ಮುಂದುವರೆದಿದೆ. ಪ್ರಮುಖ ಆರೋಪಿ (Main Accused) ದಿವ್ಯಾ ಹಾಗರಗಿ, ವೀರೇಶ್, ವೈಜನಾಥ್, ಮಂಜುನಾಥ್ ಮೇಳಕುಂದಿ, ಅರ್ಚನಾ, ಸುನೀತಾ, ಕಾಳಿದಾಸ್‌, ಸುನೀತಾ ಪಾಟೀಲ್‌, ಸುರೇಶ್ ಕಾಟೇಗಾವ್‌, ಸದ್ದಾಂ ಸೇರಿದಂತೆ ಇದುವರೆಗೂ 55ಕ್ಕೂ ಹೆಚ್ಚು ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ಇನ್ನು ಮತ್ತೊಂದೆಡೆ ತಪ್ಪು ಮಾಡಿದವರಿಂದ ಎಲ್ಲರಿಗೂ ತೊಂದೆರೆಯಾಗುತ್ತಿದೆ. ಪ್ರಾಮಾಣಿಕವಾಗಿ ಉತ್ತರ ಬರೆದು ಪಾಸಾದ ಅಭ್ಯರ್ಥಿಗಳಿಗೂ (Candidates) ತೊಂದರೆಯಾಗುತ್ತಿದೆ. ಈ ಅನ್ಯಾಯ ಸರಿಪಡಿಸಬೇಕು ಅಂತ ಹೋರಾಟ (Protest) ನಡೆಯುತ್ತಿದೆ. ಆದರೆ ಇವರ ಹೋರಾಟಕ್ಕೆ ಸರ್ಕಾರ (Government) ಕ್ಯಾರೇ ಎಂದಿಲ್ಲ. ಇದೀಗ ಇದರಿಂದ ಆಕ್ರೋಶಗೊಂಡಿರುವ ಅಭ್ಯರ್ಥಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ (PM Narendra Modi) ಪತ್ರ (Letter) ಬರೆದಿದ್ದಾರೆ. ಅದರಲ್ಲೂ ರಕ್ತದಲ್ಲಿ (Blood) ಪತ್ರ ಬರೆದು, ‘ಉಗ್ರ’ ಸಂದೇಶವೊಂದನ್ನು ಕಳಿಸಿದ್ದಾರೆ ಎನ್ನಲಾಗುತ್ತಿದೆ. ಈ ಪತ್ರಗಳೀಗ ವೈರಲ್ (Viral) ಆಗಿದೆ.


ಪ್ರಧಾನಿ ನರೇಂದ್ರ ಮೋದಿಗೆ ರಕ್ತದಲ್ಲಿ ಪತ್ರ


ಪಿಎಸ್ಐ ಅಕ್ರಮ ಪರೀಕ್ಷಾ ಹಗರಣದಲ್ಲಿ ನೊಂದ ಅಭ್ಯರ್ಥಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ತಮ್ಮ ರಕ್ತದಲ್ಲಿ ಸುಮಾರು 2 ಪುಟಗಳ ಪತ್ರ ಬರೆದಿರುವ ಅಭ್ಯರ್ಥಿಗಳು, ತಮಗೆ ನ್ಯಾಯ ಒದಗಿಸಿಕೊಡುವಂತೆ ಪ್ರಧಾನಿಗೆ ಮನವಿ ಮಾಡಿದ್ದಾರೆ. ಈ ಪತ್ರಗಳೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ರಕ್ತದಿಂದ ಬರೆದ ಪತ್ರದಲ್ಲಿ ಏನಿದೆ?


ಪಿಎಸ್ಐ ಪರೀಕ್ಷೆಯ ಆಯ್ಕೆಯಲ್ಲಿ ಮೋಸ ಹೊದವರಿಗೆ ನ್ಯಾಯ ಸಿಗಬೇಕು, ಅನ್ಯಾಯ ಮಾಡಿದವರನ್ನ ಜೈಲಿಗೆ ಹಾಕಬೇಕು. ಆದರೆ ನಿಯತ್ತಿನಿಂದ, ಪ್ರಾಮಾಣಿಕವಾಗಿ ಬರೆದು ಪಾಸಾದವರಿಗೆ ಮೋಸವಾಗಬಾರದು. 2021ರಲ್ಲಿ ನಡೆದ ಎಫ್‌ಡಿಎ ಪರೀಕ್ಷೆಯಲ್ಲಿ ಕೂಡ ಅಕ್ರಮವಾಗಿದೆ. ಅದನ್ನು ಕೂಡ ತನಿಖೆ ಮಾಡಿನ್ಯಾಯ ಕೊಡಿಸಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನಮಗೆ ಅಪಾರ ಗೌವರವಿದೆ, ಅವರು ಸೂಕ್ತ ತನಿಖೆಗೆ ಆದೇಶ ಮಾಡಿ, ನಮಗೆ ನ್ಯಾಯ ಕೋಡಿಸುತ್ತಾರೆ ಅನ್ನೋ ನಂಬಿಕೆ ಇದೆ ಅಂತ ಪತ್ರದಲ್ಲಿ ಬರೆಯಲಾಗಿದೆ.


ಇದನ್ನೂ ಓದಿ: Explained: ಏನಿದು PSI Exam Scam? ಇದರ ಆಳ, ಅಗಲ ಏನು? ಈವರೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ


“ನ್ಯಾಯ ಸಿಗದಿದ್ದರೆ ಉಗ್ರರ ಜೊತೆ ಸೇರುತ್ತೇವೆ!”


ಇನ್ನು 2 ಪುಟಗಳ ರಕ್ತ ಪತ್ರದಲ್ಲಿ ಎಚ್ಚರಿಕೆಯೊಂದನ್ನು ನೀಡಲಾಗಿದೆ. “ಒಂದು ವೇಳೆ ನ್ಯಾಯಕೊಡಿಸದೇ ಹೋದ್ರೆ ನಾವು ಮುಂದೆ  ಟೆರರಿಸ್ಟ್ ಗಳ ಕೈಜೋಡಿಸುತ್ತೇವೆ. ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳು ಹಣ ಇದ್ದವರಿಗೆ ಎನ್ನುವಂತ ವ್ಯವಸ್ಯೆ ಬಂದುಬಿಟ್ಟಿದೆ. ಸರ್ಕಾರದ ಈ ವ್ಯವಸ್ಥೆಯಿಂದ ನಾವು ಮಾನಸಿಕವಾಗಿ ಸತ್ತುಹೋಗಿದ್ದೇವೆ. ಆದ್ದರಿಂದ ಇನ್ನು ಮುಂದೆ ಸರ್ಕಾರಿ ಹುದ್ದೆ ಪರೀಕ್ಷೆಗಳನ್ನ ಬರೆಯುವುದಿಲ್ಲ. ಬದಲಾಗಿ ಟೆರೆರಿಸ್ಟ್ ಗಳ ಜೊತೆ ನಕ್ಸಲೈಟ್ ಸಂಘಟನೆ ಸೇರಲು ಇಚ್ಛಿಸಿದ್ದೇವೆ. ಅವರ ಬಳಿ ಹಣ ಪಡೆದ ಬಡ ಕುಟುಂಬಕ್ಕೆ ನಾವು ಸಹಾಯ ಮಾಡುತ್ತೇವೆ” ಅಂತ ಎಚ್ಚರಿಸಿದ್ದಾರೆ.


2 ಪುಟಗಳ ಪತ್ರದಲ್ಲಿ ಹೆಸರು ಬರೆಯದ ಅಭ್ಯರ್ಥಿಗಳು


ಸುಮಾರು 2 ಪುಟಗಳ ಪತ್ರವನ್ನು ರಕ್ತದಲ್ಲಿ ಬರೆಯಲಾಗಿದೆ. ಆದರೆ ಪತ್ರದಲ್ಲಿ ತಮ್ಮ ಹೆಸರನ್ನು ಅಭ್ಯರ್ಥಿಗಳು ನಮೂದಿಸಿಲ್ಲ. ನಾವು ಎಂಟು ಮಂದಿ ಇದ್ದೇವೆ, ನಾವೆಲ್ಲರು ಈ ನಿರ್ಧಾರ ಮಾಡಿದ್ದಾಗಿ ಪ್ರಧಾನಿಗೆ ಪತ್ರ ಬರೆದಿರೋ ನೋಂದ ಪಿಎಸ್ಐ ಅಭ್ಯರ್ಥಿಗಳು ಎಚ್ಚರಿಸಿದ್ದಾರೆ.


ಇದನ್ನೂ ಓದಿ: Explained: ಪಿಎಸ್ಐ Exam Scamನ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಯಾರು? ಇಲ್ಲಿದೆ ಓದಿ 'ದಿವ್ಯ' ಇತಿಹಾಸ!


ಹಗರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ


ಈ ಪ್ರಕಣದ ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ ಅಧಿಕಾರಿಗಳು ಈಗಾಗಲೇ 55ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ದಿವ್ಯಾ ಹಾಗರಗಿ, ವೀರೇಶ್, ವೈಜನಾಥ್, ಮಂಜುನಾಥ್ ಮೇಳಕುಂದಿ, ಅರ್ಚನಾ, ಸುನೀತಾ, ಕಾಳಿದಾಸ್‌, ಸುನೀತಾ ಪಾಟೀಲ್‌, ಸುರೇಶ್ ಕಾಟೇಗಾವ್‌, ಸದ್ದಾಂ ಸೇರಿದಂತೆ ಇದುವರೆಗೂ 55ಕ್ಕೂ ಹೆಚ್ಚು ಮಂದಿಯನ್ನು ಅರೆಸ್ಟ್ ಮಾಡಲಾಗಿದೆ.

Published by:Annappa Achari
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು