ಪರೀಕ್ಷೆ ದಿನವೇ ಪಿಯುಸಿ ಉಪನ್ಯಾಸಕರ ಪ್ರತಿಭಟನೆ: ಬೇಡಿಕೆ ಈಡೇರದಿದ್ದರೆ ಮೌಲ್ಯಮಾಪನ ಬಹಿಷ್ಕರಿಸುವುದಾಗಿ ಎಚ್ಚರಿಕೆ

ನಾವು ಈ ಹಿಂದೆ ನಾಲ್ಕು ಬಾರಿ ಪ್ರತಿಭಟನೆ ನಡೆಸಿದ್ದೆವು. ಆದರೆ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿಲ್ಲ. ನಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದೇ ಇದ್ದಲ್ಲಿ ಮೌಲ್ಯಮಾಪನ ಬಹಿಷ್ಕರಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪಿಯುಸಿ ಉಪನ್ಯಾಸಕರ ಪ್ರತಿಭಟನೆ

ಪಿಯುಸಿ ಉಪನ್ಯಾಸಕರ ಪ್ರತಿಭಟನೆ

 • Share this:
  ಬೆಂಗಳೂರು(ಮಾ. 04): ರಾಜ್ಯದಲ್ಲಿ ಇಂದಿನಿಂದ 2019-20ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಿದೆ. ಆದರೆ ಪರೀಕ್ಷೆ ದಿನವೇ ಪಿಯುಸಿ ಉಪನ್ಯಾಸಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

  ಬೆಂಗಳೂರಿನಲ್ಲಿ ಪರೀಕ್ಷಾ ಮೇಲ್ವಿಚಾರಣೆಗೆ ಆಗಮಿಸಿರುವ ಉಪನ್ಯಾಸಕರು ಕಪ್ಪು ಪಟ್ಟಿ ಧರಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಾಂಕೇತಿಕವಾಗಿ ಪ್ರತಿಭಟನೆ ಮಾಡುವುದಾಗಿ ತಿಳಿಸಿದ್ದಾರೆ. ಒಂದು ವೇಳೆ ಬೇಡಿಕೆ ಈಡೇರದಿದ್ದರೆ ಪಿಯುಸಿ ಮೌಲ್ಯಮಾಪನ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

  ಉಪನ್ಯಾಸಕರ ಬೇಡಿಕೆಗಳೇನು?

  ಕುಮಾರ್ ನಾಯಕ ವರದಿ ಜಾರಿಗೆ ಬರುವಂತೆ ಆಗ್ರಹ ಮಾಡಿದ್ದಾರೆ. ಜೊತೆಗೆ  ಉಪನಾಸ್ಯಕರ ವೇತನ ತಾರತಮ್ಯ ಹೋಗಲಾಡಿಸಬೇಕು ಎಂದು ಪಿಯುಸಿ ಉಪನ್ಯಾಸಕರು ಬೇಡಿಕೆ ಇಟ್ಟಿದ್ದಾರೆ.

  ಶಾಸಕ ಯತ್ನಾಳ್ ವಿರುದ್ಧ ಸದನದಲ್ಲಿ ಚರ್ಚೆಗೆ ಅವಕಾಶ ಕೋರಿ ರಾಜ್ಯಪಾಲರಿಗೆ ದೂರು ನೀಡಿದ ಕಾಂಗ್ರೆಸ್ ನಿಯೋಗ

  "ನಾವು ಈ ಹಿಂದೆ ನಾಲ್ಕು ಬಾರಿ ಪ್ರತಿಭಟನೆ ನಡೆಸಿದ್ದೆವು. ಆದರೆ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿಲ್ಲ. ನಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದೇ ಇದ್ದಲ್ಲಿ ಮೌಲ್ಯಮಾಪನ ಬಹಿಷ್ಕರಿಸುತ್ತೇವೆ" ಎಂದು ಎಚ್ಚರಿಕೆ ನೀಡಿದ್ದಾರೆ.

  ಪಿಯುಸಿ ಉಪನ್ಯಾಸಕರು ಕಳೆದ ಬಾರಿ ಪರೀಕ್ಷೆ ವೇಳೆ ಕಪ್ಪು ಪಟ್ಟಿ ಧರಿಸಿ ಮೇಲ್ವಿಚಾರಣೆಗೆ ಹಾಜರಾಗಿದ್ದರು. ಈ ಬಾರಿಯೂ ಸಹ ಅದೇ ಮಾರ್ಗ ಅನುಸರಿಸಿದ್ದಾರೆ. ಇಂದಿನ ದ್ವಿತೀಯ ಪಿಯು ಪರೀಕ್ಷೆಯಲ್ಲೂ ಕಪ್ಪು ಪಟ್ಟಿ ಧರಿಸಿ ಮೇಲ್ವಿಚಾರಣೆಗೆ ಬಂದಿದ್ದಾರೆ.
  First published: