ಬೆಂಗಳೂರು (ಮೇ 30): ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ (Bengaluru North University) ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ದು, ಇವತ್ತು ನಡೆಯಬೇಕಿದ್ದ ಪರೀಕ್ಷೆಯನ್ನು (Exam) ಮುಂದೂಡಲಾಗಿದೆ. ಇವತ್ತು ನಡೆಯಬೇಕಿದ್ದ ಬಿ.ಕಾಂ, ಬಿಸಿಎ ಮೊದಲ ಸೆಮಿಸ್ಟರ್ (First Semester) ಪರೀಕ್ಷೆಯನ್ನು ರದ್ದುಪಡಿಸಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಕುಲಸಚಿವರು ಆದೇಶ ಹೊರಡಿಸಿದ್ದಾರೆ. ಪರೀಕ್ಷಾ ಪ್ರಶ್ನೆ ಪತ್ರಿಕೆ ಮೂರನೇ ಭಾರೀಗೆ ಸೋರಿಕೆ ಆಗಿದೆ. ವಿದ್ಯಾರ್ಥಿಗಳು (Students) ಪರೀಕ್ಷಾ ಕೇಂದ್ರಗಳಿಗೆ ಬಂದು ವಾಪಸ್ ಆಗಿದ್ದಾರೆ. 2 ಪತ್ರಿಕೆಗಳು ಸೋರಿಕೆ ಹಿನ್ನೆಲೆ ಮೊದಲ ಸೆಮಿಸ್ಟರ್ನ ಬಿಕಾಂನ (Bcom) ಪ್ರಿನ್ಸಿಪಲ್ ಆಫ್ ಮಾರ್ಕೆಟಿಂಗ್ ಮತ್ತು ಬಿಸಿಎಯ (BCA) ಪದವಿಯ ಮ್ಯಾಥಮೆಟಿಕಲ್ ಫೌಂಡೇಶನ್ ಪತ್ರಿಕೆಗಳು ಡಾಮಿನಿಕ್ ಪರೀಕ್ಷಾ ವಿಭಾಗದ ಕುಲಸಚಿವರು (Counselor) ಮುಂದೂಡಿದ್ದಾರೆ.
ಪರೀಕ್ಷೆ ಪತ್ರಿಕೆ ಸೋರಿಕೆ ಜಾಮೀನುರಹಿತ ಅಪರಾಧ
ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವುದನ್ನು ಜಾಮೀನುರಹಿತ ಅಪರಾಧ ಎಂಬುದಾಗಿ ಪರಿಗಣಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು. ಬೆಂಗಳೂರು ಉತ್ತರ ಮತ್ತು ಕಲಬುರಗಿ ವಿಶ್ವವಿದ್ಯಾಲಯಗಳ ಪದವಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವ ಕುರಿತು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಅವರು, ‘ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ತಡೆಗೆ ಬಿಗಿ ಕ್ರಮಗಳನ್ನು ಜಾರಿಗೊಳಿಸಲಾಗುವುದು. ಇಂತಹ ಕೃತ್ಯಗಳಲ್ಲಿ ಭಾಗಿಯಾದವರಿಗೆ ಜಾಮೀನು ದೊರಕದಂತೆ ಕಠಿಣ ಕಾನೂನು ತರಲಾಗುವುದು’ ಎಂದರು.
ಮುಂದೆ ಇಂತಹ ಕೃತ್ಯಗಳು ನಡೆಯದಂತೆ ಕಟ್ಟೆಚ್ಚರ
ಪ್ರಶ್ನೆ ಪತ್ರಿಕೆಗಳ ಸೋರಿಕೆ ಹಲವು ವರ್ಷಗಳಿಂದ ನಡೆಯುತ್ತಿದೆ. ಈಗಲೂ ನಡೆಯುತ್ತಿದೆ. ಮುಂದೆ ಇಂತಹ ಕೃತ್ಯಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗುವುದು ಎಂದು ಹೇಳಿದರು. ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕುರಿತ ತನಿಖೆಯನ್ನು ಸಿಸಿಬಿ ಪೊಲೀಸರಿಗೆ ವರ್ಗಾವಣೆ ಮಾಡಲಾಗಿದೆ. ತನಿಖೆಯಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ. ಯಾರೇ ಅಕ್ರಮದಲ್ಲಿ ಭಾಗಿಯಾಗಿದ್ದರೂ ಸರ್ಕಾರ ಕ್ರಮ ಜರುಗಿಸಲಿದೆ ಎಂದರು.
ಇದನ್ನೂ ಓದಿ: School Text Book: ಟಿಪ್ಪು ಸುಲ್ತಾನ್ ವೈಭವೀಕರಿಸಿರೋ ಅಂಶಗಳನ್ನ ತೆಗೆದುಹಾಕಬಹುದು, ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಶಿಫಾರಸು
ಮಾರ್ಗಸೂಚಿಯಂತೆ ಸಿಇಟಿ ಪರೀಕ್ಷೆ
ಮಾರ್ಗಸೂಚಿಯಂತೆ ಸಿಇಟಿ ಪರೀಕ್ಷೆ ನಡೆಯಲಿದೆ. ಹಿಜಾಬ್ ಧರಿಸಲು ಅವಕಾಶ ಸೇರಿದಂತೆ ಎಲ್ಲವೂ ಮಾರ್ಗಸೂಚಿ ಪ್ರಕಾರವೇ ನಿರ್ಧಾರ ಆಗಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಬ್ರಿಟನ್ ಮತ್ತು ದಾವೋಸ್ ಪ್ರವಾಸ ಯಶಸ್ವಿಯಾಗಿದೆ. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಪಾಲುದಾರಿಕೆ ವಹಿಸಲು ಹಲವು ರಾಷ್ಟ್ರಗಳು ಆಸಕ್ತಿ ತೋರಿವೆ. ಜೂನ್ 9ರಂದು ಬ್ರಿಟನ್ ನ 21 ವಿಶ್ವವಿದ್ಯಾಲಯಗಳ ಕುಲಪತಿಗಳ ನಿಯೋಗ ಕರ್ನಾಟಕಕ್ಕೆ ಬರುತ್ತಿದೆ ಎಂದರು.
SSLC ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್; 10 ಆರೋಪಿಗಳ ಬಂಧನ
SSLC ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ರಾಮನಗರ ಜಿಲ್ಲೆಯ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ತನಿಖೆ ನಡೆಸಿದ ಪೊಲೀಸರು, ಮಾಗಡಿ ಕೆಂಪೇಗೌಡ ಶಾಲೆಯ ಪ್ರಿನ್ಸಿಪಾಲ್ ಶ್ರೀನಿವಾಸ್, ಕ್ಲರ್ಕ್ ರಂಗೇಗೌಡ, ಶಿಕ್ಷಕರಾದಂತ ನಾಗರಾಜ್, ಅಲೀಂ, ಲೋಕೇಶ್ ಸುಬ್ರಹ್ಮಣ್ಯ ಹಾಗೂ ಪತ್ರಕರ್ತ ವಿಜಯ್ ಎಂಬುವರು ಸೇರಿದಂತೆ 10 ಮಂದಿಯನ್ನು ಇಂದು ಬುಧವಾರ ಬಂಧಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ