HOME » NEWS » State » RAGINI DWIVEDI AND 6 OTHERS RAHUL PRASHANT RANJA AND RAVI SHANKAR REMANDED FOR 3 DAYS POLICE CUSTODY IN SANDALWOOD DRUG SCANDAL HK

Ragini Dwivedi: ನಟಿ ರಾಗಿಣಿ ದ್ವಿವೇದಿ ಸೇರಿದಂತೆ 6 ಜನ 3 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ

ನಟಿಯರಾದ ರಾಗಿಣಿ, ಸಂಜನಾ, ರಾಹುಲ್ , ಲೂಮ್, ಪ್ರಶಾಂತ್ ರಂಕಾ , ರವಿ ಶಂಕರ್, ನಿಯಾಜ್ ಆರು ಮಂದಿಯನ್ನು ನ್ಯಾಯಾದೀಶರು ಪೊಲೀಸ್​​ ಕಸ್ಟಡಿಗೆ ನೀಡಿದ್ದಾರೆ.

news18-kannada
Updated:September 11, 2020, 7:04 PM IST
Ragini Dwivedi: ನಟಿ ರಾಗಿಣಿ ದ್ವಿವೇದಿ ಸೇರಿದಂತೆ 6 ಜನ 3 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ
ನಟಿ ರಾಗಿಣಿ.
  • Share this:
ಬೆಂಗಳೂರು(ಸೆಪ್ಟೆಂಬರ್​. 11) : ಡ್ರಗ್ಸ್​ ದಂಧೆಯ ಆರೋಪದಲ್ಲಿ ಸಿಸಿಬಿ ವಶದಲ್ಲಿರುವ ಸ್ಯಾಂಡಲ್​ವುಡ್ ನಟಿ ರಾಗಿಣಿ ಸೇರಿದಂತೆ 6 ಜನರನ್ನ ಮತ್ತೆ ಮೂರು ದಿನಗಳ ಕಾಲ ಪೊಲೀಸ್​​ ಕಸ್ಟಡಿಗೆ ನೀಡಿ 1 ನೇ ಎಸಿಎಂಎಂ ನ್ಯಾಯಧೀಶರು ಆದೇಶ ಹೊರಡಿಸಿದ್ದಾರೆ. ಸ್ಯಾಂಡಲ್​ವುಡ್ ನಟಿ ರಾಗಿಣಿ ದ್ವಿವೇದಿಯ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಿದೆ. ಹೀಗಾಗಿ, ಇಂದು ರಾಗಿಣಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಇವರ ಜೊತೆಗೆ ನಟಿ ಸಂಜನಾ, ರಾಹುಲ್, ಲೂಮ್, ಪ್ರಶಾಂತ್ ರಂಕಾ , ರವಿ ಶಂಕರ್, ನಿಯಾಜ್ ಆರು ಮಂದಿಯನ್ನು ನ್ಯಾಯಾದೀಶರು ಪೊಲೀಸ್​​ ಕಸ್ಟಡಿಗೆ ನೀಡಿದ್ದಾರೆ. ಸಿಸಿಬಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ ಕೋರ್ಟ್ ಜಡ್ಜ್ ಮುಂದೆ ಹಾಜರು ಪಡಿಸಿದ್ದರು. ಈ ವೇಳೆ ವಿಚಾರಣೆಯನ್ನು ಮುಂದುವರಿಸಲು ನಟಿಯನ್ನು ಮತ್ತೆ 6 ದಿನ ಪೊಲೀಸ್ ಕಸ್ಟಡಿಗೆ ನೀಡಲು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಅಲ್ಲದೇ ಪ್ರಕರಣದಲ್ಲಿ ಇದುವರೆಗೂ ಆಗಿರುವ ತನಿಖೆಯ ಮಾಹಿತಿಯನ್ನು ಕೋರ್ಟಿಗೆ ಸಲ್ಲಿಸಿದ್ದರು.

ಇದನ್ನೂ ಓದಿ :  ಖಾಸಗಿ ಶಿಕ್ಷಕರಿಗೆ ಸಹಾಯಕ್ಕಾಗಿ ಸರ್ಕಾರದ ಚಿಂತನೆ : ಶಿಕ್ಷಣ ಸಚಿವ ಸುರೇಶ್ ಕುಮಾರ್

ಆರೋಪಿ ರವಿ ಶಂಕರ್ ನೀಡಿರುವ ಮಾಹಿತಿ ಮೇರೆಗೆ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ಆರೋಪಿ ನೀಡಿರುವ ಹೇಳಿಕೆಗಳಿಗೆ ರಾಗಿಣಿ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ವಿಚಾರಣೆಗೂ ಸಹಕಾರ ನೀಡುತ್ತಿಲ್ಲ. ಉದ್ದೇಶ ಪೂರ್ವಕವಾಗಿ ತನಿಖೆ ವಿಳಂಬ ಮಾಡುತ್ತಿದ್ದಾರೆ. ಅಲ್ಲದೇ ನ್ಯಾಯಾಂಗ ಬಂಧನಕ್ಕೆ ನೀಡಿದರೇ ಈಗಾಗಲೇ ನಡೆದಿರುವ ತನಿಖಾ ಅಂಶಗಳು ಲೀಕ್ ಹಾಗುವ ಸಾಧ್ಯತೆ ಇದೆ. ಈಗಾಗಲೇ ರಕ್ತ ಮಾದರಿ ಪರೀಕ್ಷೆಗೆ ನೀಡಲಾಗಿದ್ದು, ಆದರೆ ಆ ವರದಿ ಇನ್ನೂ ಬಂದಿಲ್ಲ ಎಂದು ಸಿಸಿಬಿ ಪೊಲೀಸರು ತಮ್ಮ ಮಾಹಿತಿಯನ್ನು ನೀಡಿದರು. ಪೊಲೀಸರ ಮನವಿಯನ್ನು ಪುರಸ್ಕರಿಸಿದ ಕೋರ್ಟ್ 3 ದಿನಗಳವರೆಗೆ ಕಸ್ಟಡಿಗೆ ನೀಡಿದೆ.

ನಟಿ ರಾಗಿಣಿ ಇಷ್ಟು ದಿನವಾದರೂ ಯಾವ ವಿಷಯವನ್ನೂ ಬಾಯಿಬಿಟ್ಟಿಲ್ಲ. ನಟಿ ರಾಗಿಣಿಯನ್ನು ವಿಚಾರಣೆ ಮಾಡೋದು ತನಿಖಾಧಿಕಾರಿಗಳಿಗೆ ದೊಡ್ಡ ಸವಾಲಾಗಿದೆ. ಏನೇ ಪ್ರಶ್ನೆ ಮಾಡಿದರೂ ನನಗೇನೂ ಗೊತ್ತಿಲ್ಲ, ಮರೆತಿದ್ದೇನೆ ಎಂದು ರಾಗಿಣಿ ಹೇಳುತ್ತಿದ್ದಾರೆ ಎನ್ನಲಾಗಿದೆ. ಡಿಲೀಟ್ ಆಗಿರುವ ಸಂದೇಶಗಳನ್ನು ಮುಂದಿಟ್ಟುಕೊಂಡು ವಿಚಾರಣೆ ಮಾಡಿದರೂ ರಾಗಿಣಿ ತನಿಖೆಗೆ ಸರಿಯಾಗಿ ಸಹಕಾರ ನೀಡುತ್ತಿಲ್ಲ.


Published by: G Hareeshkumar
First published: September 11, 2020, 5:55 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories