ಬೆಂಗಳೂರು: ಸಂಸದ ಸ್ಥಾನದಿಂದ ಅನರ್ಹಗೊಂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Congress Leader Rahul Gandhi) ಏಪ್ರಿಲ್ 9ಕ್ಕೆ ಕೋಲಾರಕ್ಕೆ (kolar) ಬರುತ್ತಿದ್ದಾರೆ. ಏಪ್ರಿಲ್ 5ರಂದೇ ರಾಹುಲ್ ಗಾಂಧಿ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ಆ ಕಾರ್ಯಕ್ರಮ ಕ್ಯಾನ್ಸಲ್ ಆಗಿದೆ ಅಂತ ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (Former CM Siddaramaiah) ಹೇಳಿದ್ದಾರೆ. ಕೋಲಾರದಲ್ಲಿ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ. ಸುಮಾರು 2 ಲಕ್ಷಕ್ಕೂ ಹೆಚ್ಚು ಜನರು ಸೇರಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕೋಲಾರದಲ್ಲಿ ಆಯೋಜನೆ ಮಾಡಲಾಗುತ್ತಿರುವ ಕಾರ್ಯಕ್ರಮಕ್ಕೆ ಸತ್ಯಮೇವ ಜಯತೆ ಎಂದು ಹೆಸರಿಡಲಾಗಿದೆ. ಸುಮಾರು 15 ಎಕರೆ ಪ್ರದೇಶದಲ್ಲಿ ಪೆಂಡಾಲ್ ಹಾಕಲಾಗುತ್ತಿದೆ.
ನಮ್ಮ ತಂದೆ ಮತ್ತೆ ಸಿಎಂ ಆಗ್ಬೇಕು
ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ, ಮುಂದಿನ ಸಿಎಂ ಅನ್ನೋ ಕೂಗು ಮತ್ತೆ ಜೋರಾಗಿ ಕೇಳಿ ಬರುತ್ತಿದೆ. ಈ ಕುರಿತು ಮಂಡ್ಯದ ಮಳವಳ್ಳಿಯಲ್ಲಿ ಮಾತನಾಡಿರುವ ಶಾಸಕ ಯತೀಂದ್ರ ಸಿದ್ದರಾಮಯ್ಯ, ಮಗನಾಗಿ ತಂದೆ ಸಿಎಂ ಆಗಲಿ ಎಂದು ಬಯಸುತ್ತೇನೆ ಎಂದು ಹೇಳಿದರು
ಕಳೆದ ಬಾರಿ ಅವರು ಒಳ್ಳೆ ಆಡಳಿತ ಕೊಟ್ಟಿದ್ದರು. ಆದ್ರೆ ಜನ ಬಹುಮತ ನೀಡಲಿಲ್ಲ. ನನ್ನ ತಂದೆ ಮತ್ತೊಮ್ಮೆ ಮುಖ್ಯಮಂತ್ರಿ ಆದ್ರೆ ಅವರು ಹಿಂದೆ ಮಾಡಿದ ಕೆಲಸ ಪೂರ್ಣಗೊಳಿಸುತ್ತಾರೆ. ನಮ್ಮ ತಂದೆ ಮುಖ್ಯಮಂತ್ರಿ ಆಗಬೇಕು ಅನ್ನೋದು ನನ್ನ ಆಸೆ ಅಂತ ಹೇಳಿದರು.
ಕೈ ಮುಖಂಡನಿಗೆ IT ಶಾಕ್!
ಬೆಳಗಾವಿಯಲ್ಲಿ ಕಾಂಗ್ರೆಸ್ ಮುಖಂಡನಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕಾಂಗ್ರೆಸ್ ಮುಖಂಡ ವಿ.ಎಸ್ ಸಾಧುನವರ್ ಒಡೆತನದ ಬೈಲಹೊಂಗಲದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಸೊಸೈಟಿಯಲ್ಲಿ ಐಟಿ ಅಧಿಕಾರಗಳು ಶೋಧ ಕಾರ್ಯ ನಡೆಸಿದ್ರು.
ಇದನ್ನೂ ಓದಿ: Voter ID Scam: ಚಿಲುಮೆ ಸಂಸ್ಥೆ ಆಯ್ತು, ಇದೀಗ ರಾಷ್ಟ್ರೀಯ ಪಕ್ಷದಿಂದಲೂ ಮತದಾರರ ಮಾಹಿತಿ ಸಂಗ್ರಹ! ಪ್ರಕರಣ ದಾಖಲು
ಬ್ಯಾಂಕ್ ಲಾಕರ್‌ಗಳಲ್ಲಿ ಯಾರೆಲ್ಲ ಬಂಗಾರ, ಹಣ ಇಟ್ಟಿದ್ದಾರೆ ಎಂದು ಮಾಹಿತಿ ಸಂಗ್ರಹಿಸಿದ್ರು. 2018ರ ಲೋಕಸಭೆ ಚುನಾವಣೆಯಲ್ಲಿ ವಿ.ಎಸ್ ಸಾಧುನವರ್ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ