Elections: ಕೊರಳಲ್ಲಿ ಹಾವು, ಕೈಯಲ್ಲಿ ನೋಟು; ಚುನಾವಣೆ ಭವಿಷ್ಯ ನುಡಿದ ವ್ಯಕ್ತಿ

ಭವಿಷ್ಯ ನುಡಿದ ವ್ಯಕ್ತಿ

ಭವಿಷ್ಯ ನುಡಿದ ವ್ಯಕ್ತಿ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸಮುದ್ರ ತಾಂಡಾದಲ್ಲಿ ಈ ಘಟನೆ ನಡೆದಿದೆ.

  • Share this:

    ರಾಯಚೂರು: ರಾಜ್ಯ ವಿಧಾನಸಭಾ ಚುನಾವಣೆ (Karnataka Assembly Election) ಸಮೀಪಿಸುತ್ತಿದ್ದು, ರಾಜಕೀಯ ಪಕ್ಷಗಳು (Political Party) ಭರ್ಜರಿ ಪ್ರಚಾರ ನಡೆಸುತ್ತಿವೆ. ಚುನಾವಣಾ ಪೂರ್ವ ಸಮೀಕ್ಷೆ (Pre Poll Survey) ಮಾಡಿಸಿಕೊಂಡಿರುವ ರಾಜಕೀಯ ಪಕ್ಷಗಳು ಯಾರಿಗೆ ಟಿಕೆಟ್ ನೀಡಬೇಕು ಎಂಬುದನ್ನು ಸಹ ಲೆಕ್ಕ ಹಾಕುತ್ತಿವೆ. ಇತ್ತ ಮಾಧ್ಯಮಗಳು ಸೇರಿದಂತೆ ಕೆಲ ಖಾಸಗಿ ಸಂಸ್ಥೆಗಳು (Private Agency) ಕರ್ನಾಟಕ ರಾಜಕೀಯ ಮತ್ತು ಚುನಾವಣಾ ಪೂರ್ವ ಸಮೀಕ್ಷೆ ವರದಿಯನ್ನು ಹೊರ ಹಾಕಿದೆ. ಮತ್ತೊಂದೆಡೆ ದೊಡ್ಡ ದೊಡ್ಡ ಮಠಾಧೀಶರು ರಾಜಕೀಯದ ಬಗ್ಗೆ ಭವಿಷ್ಯ ನುಡಿಯುತ್ತಿದ್ದಾರೆ. ರಾಯಚೂರಿನಲ್ಲಿ ವ್ಯಕ್ತಿ ಮನೆಗೆ ಬಂದ ಹಾವನ್ನು ಕೊರಳಲ್ಲಿ ಸುತ್ತಿಕೊಂಡು ದೇವದುರ್ಗ ವಿಧಾನಸಭಾ ಕ್ಷೇತ್ರದ ಬಗ್ಗೆ ಭವಿಷ್ಯ ನುಡಿದಿದ್ದಾನೆ.


    ವ್ಯಕ್ತಿ ಕೊರಳಲ್ಲಿ ಹಾವು ಸುತ್ತಿಕೊಂಡು ಭವಿಷ್ಯ ನುಡಿದ ವಿಡಿಯೋ ಸ್ಥಳೀಯವಾಗಿ ವೈರಲ್ ಆಗಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸಮುದ್ರ ತಾಂಡಾದಲ್ಲಿ ಈ ಘಟನೆ ನಡೆದಿದೆ. ಹಾವು ಸುತ್ತಿಕೊಂಡ ವ್ಯಕ್ತಿ ಜೆಡಿಎಸ್ ಅಭ್ಯರ್ಥಿ ಕರೆಮ್ಮ ಗೆಲವು ಸಾಧಿಸುತ್ತಾರೆ ಎಂದು ಹೇಳಿದ್ದಾನೆ.


    ಹುಚ್ಚಾಟದ ವಿಡಿಯೋ ವೈರಲ್


    ಹಾಲಿ ಶಾಸಕ ಕೆ.ಶಿವನಗೌಡ ವಿರುದ್ಧ ನೀವು ಗೆಲ್ಲಬೇಕು. ನಂತರ ಮಂತ್ರಿ ಆಗಬೇಕು ಅಂತಾನೂ ಹೇಳಿದ್ದಾನೆ. ಹಾವು ಮತ್ತು ಕೈಯಲ್ಲಿ 50 ರೂಪಾಯಿ ನೋಟು ಹಿಡಿದು ವ್ಯಕ್ತಿಯ ಹುಚ್ಚಾಟದ ವಿಡಿಯೋ ವೈರಲ್ ಆಗಿದೆ. ಆದರೆ ವ್ಯಕ್ತಿ ಗುರುತು ಪತ್ತೆಯಾಗಿಲ್ಲ. ಈ ಬಾರಿ ಜೆಡಿಎಸ್​ನಿಂದ ಕಣಕ್ಕಿಳಿಯಲು ಕರೆಮ್ಮ ಮುಂದಾಗಿದ್ದಾರೆ.


    ಮೂಗಿಗೆ ತುಪ್ಪ ಸವರುವ ಕೆಲಸ ಆಗಿದೆ; ಹೆಚ್​ಡಿ ಕುಮಾರಸ್ವಾಮಿ ಟೀಕೆ


    ಕೇಂದ್ರ ಬಜೆಟ್​ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರು, ಕೇಂದ್ರಕ್ಕೆ ಈಗ ಜ್ಞಾನೋದಯವಾಗಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಬಜೆಟ್​ನಲ್ಲಿ ಹಣವಿಟ್ಟಿದೆ. ಆದರೆ ಚುನಾವಣೆ (Karnataka Election 2023) ಇದೆ ಅಂತ ರಾಜ್ಯಕ್ಕೆ ಅನೇಕ ಯೋಜನೆ ಘೋಷಣೆ ಮಾಡಿದ್ದಾರೆ. ಆದರೆ ಇದ್ಯಾವುದು ತಕ್ಷಣ ಕಾರ್ಯರೂಪಕ್ಕೆ ಬರೋಲ್ಲ ಎಂದು ಹೇಳಿದ್ದಾರೆ. ಆ ಮೂಲಕ ಜನರನ್ನ ಮರಳು ಮಾಡೋಕೆ ಈಗ ರಾಜ್ಯಕ್ಕೆ ಹಲವು ಯೋಜನೆ ಘೋಷಣೆ ಮಾಡಿದ್ದಾರೆ ಟೀಕಿಸಿದ್ದಾರೆ.


    ಕೇಂದ್ರ ಸರ್ಕಾರಕ್ಕೆ ಇವಾಗ ಜ್ಞಾನೋದಯ ಆಗಿದೆ. ಬರ ಪೀಡಿತ ಅಂತ ಹಣ ಇಟ್ಟಿರೋದಕ್ಕೆ ಕೇಂದ್ರ ಸರ್ಕಾರಕ್ಕೆ ಅಭಿನಂಧನೆ ಸಲ್ಲಿಸುತ್ತೇನೆ. ಚುನಾವಣೆ ಇದೆ ಅಂತ ರಾಜ್ಯಕ್ಕೆ ಅನೇಕ ಯೋಜನೆ ಘೋಷಣೆ ಮಾಡಿದ್ದಾರೆ. ಆದರೆ ಇದ್ಯಾವುದು ತಕ್ಷಣ ಕಾರ್ಯರೂಪಕ್ಕೆ ಬರುವುದಿಲ್ಲ ಎಂದರು.




    'ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್' ಬಜೆಟ್


    ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಕೇಂದ್ರದ ಟ್ರಬಲ್ ಎಂಜಿನ್ ಸರ್ಕಾರ ಕಳೆದ 8 ವರ್ಷಗಳಿಂದ ಪಾಲಿಸಿಕೊಂಡು ಬಂದಿರುವ 'ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್' (ಶ್ರೀಮಂತರ ಪೋಷಣೆ ಮತ್ತು ಬಡವರ ವಿನಾಶ) ಎಂಬ ಜನವಿರೋಧಿ ನೀತಿಯ ಮುಂದುವರಿದ ಭಾಗವಾಗಿ ಕೇಂದ್ರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ 2023-2024ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ ಎಂದು ಟೀಕಿಸಿದ್ದಾರೆ.


    ಇದನ್ನೂ ಓದಿ:  Crime News: ಪ್ರೀತಿಸಿ ಕೈ ಕೊಟ್ಟ ಯುವತಿ; ಹಾಸನ ಯುವಕ ಚೆನ್ನೈ ಲಾಡ್ಜ್​ನಲ್ಲಿ ನೇಣಿಗೆ ಶರಣು, ಅಸಲಿಗೆ ಆಗಿದ್ದೇನು?


    ಕೇಂದ್ರ ಸರ್ಕಾರದ ದುರಾಡಳಿತ ಮತ್ತು ಕೊರೊನಾ ರೋಗದಿಂದಾಗಿ ದೇಶದ ಆರ್ಥಿಕ ಸ್ಥಿತಿ ಹದಗೆಟ್ಟುಹೋಗಿದೆ. ಬಹಳ ಮುಖ್ಯವಾಗಿ ದೇಶದ ಬೆನ್ನೆಲುಬು ಎಂದು ಭಾಷಣದಲ್ಲಿ ಎಲ್ಲರೂ ಕೊಂಡಾಡುವ ರೈತರ ಬದುಕು ನೆಲ ಹಿಡಿದಿದೆ. 2022-23ರ ಬಜೆಟ್ ಗೆ ಹೋಲಿಸಿದರೆ ಈ ಬಜೆಟ್ ನಲ್ಲಿ ಕೃಷಿಕ್ಷೇತ್ರಕ್ಕೆ ರೂ.8,468.21 ಕೋಟಿ ಹಣ ಕಡಿಮೆ ನೀಡಲಾಗಿರುವುದೇ ಈ ನಿರ್ಲಕ್ಷ್ಯಕ್ಕೆ ಸಾಕ್ಷಿ. ಸಣ್ಣ ಮತ್ತು ಮಧ್ಯಮ ರೈತರನ್ನು ಕೂಡಾ ಕಡೆಗಣಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

    Published by:Mahmadrafik K
    First published: