ರಾಯಚೂರು ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣ; ಉನ್ನತ ತನಿಖೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಸೂಚನೆ

ರಾಯಚೂರಿನ ಈ ಪ್ರಕರಣ ಇದೀಗ ರಾಜ್ಯದ ಗಮನ ಸೆಳೆಯುತ್ತಿದ್ದು ಸ್ಯಾಂಡಲ್​ವುಡ್​ ಈಗಾಗಲೆ ಮೃತಳ ಪೋಷಕರಿಗೆ ಬೆಂಬಲ ಸೂಚಿಸಿದೆ. ನಿನ್ನೆಯಿಂದ ಚಿತ್ರರಂಗದ ಪ್ರಮುಖ ನಟ ನಟಿಯರು ನ್ಯಾಯಕೋರಿ ಟ್ವೀಟ್ ಮಾಡುತ್ತಿದ್ದಾರೆ. ಅಲ್ಲದೆ ಇಂದು ರಾಯಚೂರಿಗೆ ತೆರಳಿರುವ ನಟಿ ಹರ್ಷಿಕ ಪೂಣಚ್ಚ ಹಾಗೂ ನಟ ಭುವನ್ ಪೋಷಕರಿಗೆ ಸಾಂತ್ವನ ಹೇಳುವ ಮೂಲಕ ಗಮನ ಸೆಳೆದಿದ್ದಾರೆ.

MAshok Kumar | news18
Updated:April 20, 2019, 8:46 PM IST
ರಾಯಚೂರು ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣ; ಉನ್ನತ ತನಿಖೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಸೂಚನೆ
ಸಿದ್ದರಾಮಯ್ಯ
MAshok Kumar | news18
Updated: April 20, 2019, 8:46 PM IST
ರಾಯಚೂರು (ಏ.20): ನಗರದ ನವೋದಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ತನಿಖೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಶನಿವಾರ ಚುನಾವಣಾ ಪ್ರಚಾರ ನಿಮಿತ್ತ ರಾಯಚೂರಿಗೆ ತೆರಳಿದ್ದ ಸಿದ್ದರಾಮಯ್ಯ ಇತ್ತೀಚೆಗೆ ಸಂಶಯಾಸ್ಪದವಾಗಿ ಸಾವನ್ನಪ್ಪಿದ್ದ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಅದೆ ಸ್ಥಳದಿಂದ ಗೃಹ ಸಚಿವ ಎಂ.ಬಿ. ಪಾಟೀಲ್​ಗೆ ಕರೆ ಮಾಡಿದ ಸಿದ್ದರಾಮಯ್ಯ ಪ್ರಕರಣದ ಕುರಿತು ಶೀಘ್ರದಲ್ಲಿ ಉನ್ನತ ತನಿಖೆಯಾಗಬೇಕು ಎಂದು ಸೂಚಿಸಿದ್ದಾರೆ. ಇದರೊಂದಿಗೆ ಪ್ರಕಣದ ತನಿಖೆ ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆ ಇದೆ.

ಇಂದು ಬೆಳಗ್ಗೆ ಚಿತ್ರ ನಟಿ ಹರ್ಷಿಕಾ ಪೂಣಚ್ಚ ಹಾಗೂ ನಟ ಭುವನ್ ಸಹ ಮೃತ ವಿದ್ಯಾರ್ಥಿನಿಯ ಮನೆಗೆ ತೆರಳಿ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ. ಆರೋಪಿ ಸುದರ್ಶನ್​ಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ ಸ್ಯಾಂಡಲ್​ವುಡ್​ ಈಗಾಗಲೆ ಈ ಪ್ರಕರಣದ ತನಿಖೆಗೆ ಒತ್ತಾಯಿಸಿದ್ದು, ನಿನ್ನೆಯಿಂದ ಖ್ಯಾತನಾಮ ನಟ ನಟಿಯರು ತಮ್ಮ ಟ್ವಿಟರ್ ಖಾತೆಯಲ್ಲಿ ಈ ಕುರಿತು ಟ್ವೀಟ್​ ಮಾಡು ಮೂಲಕ ವಿದ್ಯಾರ್ಥಿನಿ ಪೋಷಕರಿಗೆ ಬೆಂಬಲ ಸೂಚಿಸಿದ್ದಾರೆ.

ಇದನ್ನೂ ಓದಿ ರಾಯಚೂರು ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಟ್ವಿಸ್ಟ್; ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವ ಪೊಲೀಸರು
Loading...

ಏಪ್ರಿಲ್ 15 ರಂದು ಕಾಲೇಜಿಗೆ ತೆರಳುವುದಾಗಿ ತಾಯಿಯ ಬಳಿ ತಿಳಿಸಿ ಹೋಗಿದ್ದ ವಿದ್ಯಾರ್ಥಿನಿ ಶವ ಮರುದಿನ ರಾಯಚೂರಿನ ಮಾಣಿಕ್ ಪ್ರಭು ದೇವಸ್ಥಾನದ ಗುಡ್ಡದಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೃತದೇಹದ ಜೊತೆಗೆ ಒಂದು ಡೆತ್​ನೋಟ್ ಸಹ ಸಿಕ್ಕಿತ್ತು. ಹೀಗಾಗಿ ಪೊಲೀಸರು ಆರಂಭದಲ್ಲಿ ಇದನ್ನೊಂದು ಆತ್ಮಹತ್ಯೆ ಪ್ರಕರಣ ಎಂದು ತನಿಖೆ ಪ್ರಕರಣವನ್ನು ಕೈಬಿಡಲು ಮುಂದಾಗಿದ್ದರು.

ಆದರೆ, ಮೃತದೇಹದ ಮೇಲಿದ್ದ ಸುಟ್ಟ ಗಾಯಗಳನ್ನು ಗುರುತಿಸಿದ್ದ ಪೋಷಕರು ತಮ್ಮ ಮಗಳನ್ನು ಯಾರೋ ಕಿಡಿಗೇಡಿಗಳು ಅತ್ಯಾಚಾರಗೈದು ನಂತರ ಕೊಲೆ ಮಾಡಿದ್ದಾರೆ ಎಂದು ನಗರದ ನೇತಾಜಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಲ್ಲದೆ ಪ್ರಕರಣವನ್ನು ಸರಿಯಾದ ದಿಕ್ಕಿನಲ್ಲಿ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ರಸ್ತೆಗಳಿದು ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ: ರಾಯಚೂರಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು: ಬೀದಿಗಿಳಿದು ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳು

ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದರು. ಅಲ್ಲದೆ ಮೃತ  ವಿದ್ಯಾರ್ಥಿನಿಯ ಸಹಪಾಠಿ ಗೆಳೆಯದ ಸುದರ್ಶನ್ ಎಂಬಾತನನ್ನು ಅನುಮಾನದ ಮೇಲೆ ನ್ಯಾಯಾಂಗ ಬಂಧನಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೆ ಇನ್ನು ಎರಡು ದಿನಗಳಲ್ಲಿ ಮರಣೋತ್ತರ ಪರೀಕ್ಷೆಯ ವರದಿ ಲಭ್ಯವಾಗಲಿದ್ದು, ಪ್ರಕರಣಕ್ಕೆ ಸ್ಪಷ್ಟತೆ ದೊರೆಯಲಿದೆ ಎಂದು ರಾಯಚೂರು ಪೊಲೀಸ್ ವರಿಷ್ಠಾಧಿಕಾರಿ ಕಿಶೋರ್ ಬಾಬು ತಿಳಿಸಿದ್ದಾರೆ.

First published:April 20, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...