ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ರಾಯಚೂರಿನ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಜೊತೆ ಜನವರಿ 20 ರಂದು ನವದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಭಾಗವಹಿಸಲಿದ್ದಾರೆ. ಲಿಂಗಸುಗೂರಿನ ಸರ್ಕಾರಿ ಪ್ರೌಢಶಾಲೆಯ ಗುಂಡಮ್ಮ ಹಾಗೂ ಜ್ಞಾನ ಸಂಜೀವಿನಿ ಪ್ರೌಢಶಾಲೆಯ ವಿದ್ಯಾರ್ಥಿನಿ ಯಶಸ್ವಿನಿ ಆಯ್ಕೆಯಾಗಿದ್ದಾರೆ

news18-kannada
Updated:January 10, 2020, 1:48 PM IST
ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ರಾಯಚೂರಿನ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆ
ಗುಂಡಮ್ಮ ಹಾಗೂ ಯಶಸ್ವಿನಿ
  • Share this:
ರಾಯಚೂರು(ಜ.10) : ಇದೇ ಮೊದಲು ಭಾರಿಗೆ ಪ್ರಧಾನಿ ವಿದ್ಯಾರ್ಥಿಗಳೊಂದಿಗೆ ಪರೀಕ್ಷೆ ಭಯ ನಿವಾರಣೆಗಾಗಿ ಪರೀಕ್ಷಾ ಪೇ ಚರ್ಚಾ ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಭಾರತ ಸರ್ಕಾರ ಹಾಗೂ ಸರ್ವ ಶಿಕ್ಷಣ ಕರ್ನಾಟಕ ಸಹಯೋಗದಲ್ಲಿ ನಡೆಯಲಿರುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.

ಸ್ವತ: ಪ್ರಧಾನಿ ನರೇಂದ್ರ ಮೋದಿಯವರೇ ನೇರವಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಯಸುವ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ಒಂದು ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು. ಪ್ರಧಾನಮಂತ್ರಿ ನರೇಂದ್ರ ಮೋದಿ ಜೊತೆ ಜನವರಿ 20 ರಂದು ನವದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಭಾಗವಹಿಸಲಿದ್ದಾರೆ.

ಲಿಂಗಸುಗೂರಿನ ಸರ್ಕಾರಿ ಪ್ರೌಢಶಾಲೆಯ ಗುಂಡಮ್ಮ ಹಾಗೂ ಜ್ಞಾನ ಸಂಜೀವಿನಿ ಪ್ರೌಢಶಾಲೆಯ ವಿದ್ಯಾರ್ಥಿನಿ ಯಶಸ್ವಿನಿ ಆಯ್ಕೆಯಾಗಿದ್ದಾರೆ. ರಾಜ್ಯದಿಂದ ಒಟ್ಟು 42 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು ಜಿಲ್ಲೆಯಿಂದ ಈ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ : ಪ್ರಧಾನಿಯೊಂದಿಗೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಬಾಗಲಕೋಟೆ ವಿದ್ಯಾರ್ಥಿನಿ ಆಯ್ಕೆ

ಶೈಕ್ಷಣಿಕವಾಗಿ ಹಿಂದುಳಿದಿರುವ ರಾಯಚೂರು ಜಿಲ್ಲೆಯ ಇಬ್ಬರು ಆಯ್ಕೆಯಾಗಿದ್ದಾರೆ, ಕಳೆದ ಭಾರಿ ಬೆಂಗಳೂರಿನಲ್ಲಿ ನಡೆದ ಅಂತರಕ್ಷೆ ಉಡ್ಡಾಯನ ಸಂದರ್ಭದಲ್ಲಿ ಸಿಂಧನೂರಿನ ವೈಷ್ಣವಿ ಎಂಬ ವಿದ್ಯಾರ್ಥಿನಿ ಆಯ್ಕೆಯಾಗಿದ್ದರು. ಇತ್ತೀಚಿಗೆ ಪ್ರಕಟಗೊಂಡ ಕೆಎಎಸ್ ಪರೀಕ್ಷೆಯಲ್ಲಿ ರಾಯಚೂರು ‌ಜಿಲ್ಲೆಯ 23 ಜನರು ಆಯ್ಕೆಯಾಗಿದ್ದರು, ಶೈಕ್ಷಣಿಕವಾಗಿ ಹಿಂದುಳಿದಿರುವ ಹಣೆ ಪಟ್ಟಿಯ ಮಧ್ಯೆ ಜಿಲ್ಲೆಯಲ್ಲಿ ಶೈಕ್ಷಣಿಕವಾಗಿ ಸಾಧನೆ ಮಾಡಿದ್ದು ಗಮನಾರ್ಹವಾಗಿದೆ.
Published by: G Hareeshkumar
First published: January 10, 2020, 1:48 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading