Karnataka Rain Updates: ರಾಜ್ಯದ ಹಲವೆಡೆ ಮುಂದುವರೆದ ಮಳೆ; ಜನಜೀವನ ಅಸ್ತವ್ಯಸ್ತ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪ್ರಭಾವದಿಂದ ರಾಜ್ಯದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಾಗೆಯೇ ಇನ್ನೆರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

news18-kannada
Updated:October 24, 2019, 3:06 PM IST
Karnataka Rain Updates: ರಾಜ್ಯದ ಹಲವೆಡೆ ಮುಂದುವರೆದ ಮಳೆ; ಜನಜೀವನ ಅಸ್ತವ್ಯಸ್ತ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು(ಅ.24): ರಾಜ್ಯದ ಹಲವೆಡೆ ಮಳೆ ಮುಂದುವರೆದಿದೆ. ಈ ಬೆನ್ನಲ್ಲೀಗ ಮತ್ತೆ ಕರಾವಳಿ ಭಾಗದಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಕರಾವಳಿ, ಕೊಡಗು, ಉತ್ತರ ಕರ್ನಾಟಕ, ಮಲೆನಾಡು ಸೇರದಂತೆ ಇನ್ನೂ ಅನೇಕ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಇದರ ಪರಿಣಾಮ ವಾಹನ ಸವಾರರು ಪರದಾಡುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪ್ರಭಾವದಿಂದ ರಾಜ್ಯದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಾಗೆಯೇ ಇನ್ನೆರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಕಳೆದ 2 ವಾರಗಳಿಂದ ಮಳೆಯ ಅಬ್ಬರ ಜೋರಾಗಿದ್ದು, ಕಳೆದ ಬಾರಿಯಂತೆ ಈ ಬಾರಿಯೂ ಕೊಡಗಿನಲ್ಲಿ ಪ್ರವಾಹ ಸ್ಥಿತಿ ಉಂಟಾಗಿದೆ. ಬರದ ಜಿಲ್ಲೆಗಳಾದ ಬಾಗಲಕೋಟೆ, ರಾಯಚೂರು, ಬೆಳಗಾವಿ, ವಿಜಯಪುರ, ಗದಗದಲ್ಲಿ ಈ ಬಾರಿ ಅತಿಯಾದ ಮಳೆಯಾಗುತ್ತಿದ್ದು, ನೆರೆಯ ರಾಜ್ಯ ಮಹಾರಾಷ್ಟ್ರದಲ್ಲೂ ಮಳೆ ಹೆಚ್ಚುತ್ತಲೇ ಇರುವುದರಿಂದ ಕೃಷ್ಣಾ ನದಿ ಉಕ್ಕಿ ಹರಿದು ಪ್ರವಾಹ ಉಂಟಾಗಿದೆ.

ಇದನ್ನೂ ಓದಿ: ‘ಡಿಕೆಶಿ ಜೈಲಿನಿಂದ ಹೊರಗೆ ಬರಬೇಕೆಂದು ದೇವರಿಗೆ ಪ್ರಾರ್ಥಿಸಿದ್ದೆ‘: ಆರೋಗ್ಯ ಸಚಿವ ಶ್ರೀರಾಮುಲು

ಈಗಾಗಲೇ ಉತ್ತರ ಕರ್ನಾಟಕದಲ್ಲಿ ಕೃಷ್ಣಾ ನದಿ ತೀರದ ಜನರು ಪ್ರವಾಹ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಮಲಪ್ರಭಾ ತೀರದ ಜನರಿಗೂ ಪ್ರವಾಹದ ಭೀತಿ ತಟ್ಟುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಶರಾವತಿ, ತುಂಗಾ, ಭದ್ರಾ, ಹೇಮಾವತಿ, ನೇತ್ರಾವತಿ, ಅಘನಾಶಿನಿ ನದಿಗಳು ತುಂಬಿ ಹರಿಯುತ್ತಿವೆ. ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ ಅನೇಕ ಸೇತುವೆಗಳು ನೀರಿನಲ್ಲಿ ಮುಳುಗಡೆಯಾಗಿವೆ. ಮಳೆಯಿಂದ ಚಾರ್ಮಾಡಿ ಘಾಟ್​ ಮತ್ತು ಶಿರಾಡಿ ಘಾಟ್​ ಎರಡೂ ಕಡೆ ಮರಗಳು ಬಿದ್ದಿರುವ ಹಿನ್ನೆಲೆಯಲ್ಲಿ ಹಾಸನ, ಚಿಕ್ಕಮಗಳೂರು ಕಡೆಯಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳು ಬಂದ್ ಆಗುವ ಸಾಧ್ಯತೆಯಿದೆ.
----------
First published: October 24, 2019, 2:58 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading