ಬೆಂಗಳೂರು (ಏ.29): ನಗರದಲ್ಲಿ ವಾರದ ಹಿಂದೆ ಕಾಣಿಸಿಕೊಂಡಿದ್ದ ವರುಣ ಮತ್ತೆ ಅಬ್ಬರಿಸಿದ್ದಾನೆ. ಮುಂಜಾನೆ ಐದು ಗಂಟೆಗೆ ಆರಂಭವಾದ ಮಳೆ ಬೆಳಗ್ಗೆ 8 ಗಂಟೆ ಆದರೂ ನಿಂತಿಲ್ಲ. ಭಾರೀ ಮಳೆಗೆ ಬಹುತೇಕ ರಸ್ತೆಗಳು ಜಲಾವೃತಗೊಂಡಿವೆ. ಇಂದು ಸಂಜೆಯೂ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.
ಹೌದು, ಸುಮಾರು 9 ಗಂಟೆಯವರೆಗೂ ಈ ಮಳೆ ಮುಂದುವರಿಯಲಿದೆ. ನಂತರ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ರಾತ್ರಿ ವೇಳೆ ಮಳೆ ಕಾಣಿಸಿಕೊಳ್ಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಂದಹಾಗೆ ಮುಂದಿನ ಕೆಲ ದಿನಗಳ ಕಾಲ ಬೆಂಗಳೂರು ಸೇರಿ ರಾಜ್ಯದ ಕೆಲ ಭಾಗಗಳಲ್ಲಿ ಮಳೆ ಆಗಲಿದೆಯಂತೆ.
ಮಳೆ ಸುರಿದಿದ್ದರಿಂದ ವಾತಾವರಣ ತಂಪಾಗಿದೆ. ಮುಂಜಾನೆ 21 ಡಿಗ್ರೀ ಸೆಲ್ಸಿಯಸ್ ತಾಪಮಾನವಿದೆ. ಗರಿಷ್ಠ ತಾಪಮಾನ 31 ಡಿಗ್ರೀ ಸೆಲ್ಸಿಯಸ್ ದಾಖಲಾಗಲಿದೆ.
ಇದನ್ನೂ ಓದಿ: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ವರುಣನ ಆರ್ಭಟ; ಗುಡುಗು ಸಹಿತ ಭಾರೀ ಮಳೆಗೆ ಹೊಳೆಯಂತಾದ ರಸ್ತೆಗಳು
ಸೋಮವಾರ ರಾತ್ರಿ ಬೆಂಗಳೂರಿನಲ್ಲಿ ಗುಡು-ಮಿಂಚು ಕಾಣಿಸಿಕೊಂಡಿತ್ತು. ರಾತ್ರಿ ವೇಳೆ ಅಲ್ಲಲ್ಲಿ ಚಿಕ್ಕದಾಗಿ ಮಳೆ ಸುರಿದಿತ್ತು. ಬೆಳಗ್ಗೆ ಐದು ಗಂಟೆಗೆ ದೊಡ್ಡದಾಗಿ ಮಳೆ ಸುರಿಯಲು ಆರಂಭವಾಗಿತ್ತು. ಮೆಜೆಸ್ಟಿಕ್, ಶಾಂತಿನಗರ, ವಿಲ್ಸನ್ ಗಾರ್ಡನ್,ಲ ಕ್ಕಸಂದ್ರ, ಗಿರಿನಗರ, ನಾಗೇಂದ್ರ ಬ್ಲಾಕ್, ಹೊಸಕೆರೆ ಹಳ್ಳಿ, ಇಂದಿರಾ ನಗರ, ಚಾಮರಾಜ ಪೇಟೆ, ಶ್ರೀರಾಂಪುರ, ರಾಜಾಜಿ ನಗರ, ಆರ್ ಆರ್ ನಗರ ಸೇರಿದಂತೆ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಆಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ