Karnataka Weather Today: ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಧಿಕ ಮಳೆಯ ನಿರೀಕ್ಷೆ- ಬೆಂಗಳೂರಿನ ಹವಾಮಾನ ಹೀಗಿರಲಿದೆ

Rainfall: ಕೇರಳ ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥವಾಗಿದ್ದು, ಹಲವಾರು ಜನರು ನಾಪತ್ತೆಯಾಗಿದ್ದಾರೆ. ಭೂಕುಸಿತ ಸಂಭವಿಸಿದ್ದು ಈಗಾಗಲೆ ರಕ್ಷಣಾ ಕಾರ್ಯ ಆರಂಭವಾಗಿದೆ. ಪಥನಾಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Rains Today ಬೆಂಗಳೂರು(ಅ.18):ಅರಬ್ಬಿ ಸಮುದ್ರದಲ್ಲಿನ(Arabian Sea) ವಾಯುಭಾರ ಕುಸಿತದ ಪರಿಣಾಮ ಭಾರೀ ಮಳೆಯಾಗುತ್ತಿದೆ. ಕೇರಳ(Kerala) ಮತ್ತು ಕರ್ನಾಟಕದಲ್ಲಿ(Karnataka) ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಹ ಮಳೆಯ ಸಾಧ್ಯತೆ ಇದೆ(Rainfall) ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ(IMD) ನೀಡಿದೆ.  ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಕಡಿಮೆ ಒತ್ತಡದ ಪ್ರದೇಶವು ಈಗ ತೆಲಂಗಾಣ ಮತ್ತು ಪಕ್ಕದ ಭಾಗಗಳ ಮೇಲೆ ಇದೆ. ಅಸೋಸಿಯೇಟೆಡ್ ಸೈಕ್ಲೋನಿಕ್ ಪರಿಚಲನೆಯು ಸರಾಸರಿ ಸಮುದ್ರ ಮಟ್ಟಕ್ಕಿಂತ 5.8 ಕಿಮೀ ವರೆಗೆ ವಿಸ್ತರಿಸುತ್ತಿದೆ.

ಎಲ್ಲೆಲ್ಲಿ ಮಳೆ?

ಇಂದು ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ತುಮಕೂರು, ಬಾಗಲಕೋಟೆ,ಕೋಲಾರ, ಬೆಳಗಾವಿ, ಗದಗ, ಕೊಡಗು, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಸೋಮವಾರ ಕಲಬುರಗಿ, ಬೀದರ್, ಯಾದಗಿರಿ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ರಾಯಚೂರು, ಹಾವೇರಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು ಇಲ್ಲಿ ಸಹ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಹವಾಮಾನ ಹೇಗಿರಲಿದೆ?

ಇದನ್ನೂ ಓದಿ: ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾದ ಕಾವೇರಿ ಮಾತೆ

ಬೆಂಗಳೂರು ನಗರದಲ್ಲಿ ಕಳೆದ ಹಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ವಾಸ್ತವವಾಗಿ ನಗರದಲ್ಲಿ ಪ್ರತಿದಿನವೂ ಸಾಧಾರಣ ಮಳೆಯಾಗುತ್ತಿದ್ದು, ಎಡಬಿಡದೆ ಸುರಿಯತ್ತಿದ್ದು, ಬೆಂಗಳೂರಿನಲ್ಲಿ ಇಂದಿನಿಂದ ಸಾಧಾರಣ ತೀವ್ರತೆಯ ಮಳೆ ಮುಂದುವರಿಯುವ ನಿರೀಕ್ಷೆಯಿದೆ.

ಕೇರಳದಲ್ಲಿ ಅಧಿಕ ಮಳೆಯಿಂದ ಜನಜೀವನ ಅಲ್ಲೋಲ ಕಲ್ಲೋಲ

ಕೇರಳ ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥವಾಗಿದ್ದು, ಹಲವಾರು ಜನರು ನಾಪತ್ತೆಯಾಗಿದ್ದಾರೆ. ಭೂಕುಸಿತ ಸಂಭವಿಸಿದ್ದು ಈಗಾಗಲೆ ರಕ್ಷಣಾ ಕಾರ್ಯ ಆರಂಭವಾಗಿದೆ. ಪಥನಾಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ತಿರುವನಂತಪುರಂ, ಕೊಲ್ಲಂ, ಅಲಪ್ಪುಳ, ಪಲಕ್ಕಾಡ್, ಕೊಯಿಕ್ಕೊಡ್, ವಯನಾಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕಳೆದ 24 ಗಂಟೆಗಳಲ್ಲಿ ಹವಾಮಾನ ಹೇಗಿತ್ತು?  

ಕಳೆದ 24 ಗಂಟೆಗಳಲ್ಲಿ, ಕೇರಳ, ಕರಾವಳಿ ಕರ್ನಾಟಕದ ಕೆಲವು ಭಾಗಗಳು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕರಾವಳಿ ಆಂಧ್ರಪ್ರದೇಶ, ಕರಾವಳಿ ಒಡಿಶಾ, ವಿದರ್ಭ ಮತ್ತು ಮರಾಠವಾಡದ ಕೆಲವು ಭಾಗಗಳಲ್ಲಿ  ಹೆಚ್ಚಿನ ಮಳೆಯಾಗಿದೆ. ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ತಮಿಳುನಾಡು, ರಾಯಲಸೀಮ, ತೆಲಂಗಾಣ, ಪೂರ್ವ ಉತ್ತರ ಪ್ರದೇಶದ ಕೆಲವು ಭಾಗಗಳು, ಸಿಕ್ಕಿಂ ಮತ್ತು ಅಸ್ಸಾಂನಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಜೆ & ಕೆ, ಗಿಲ್ಗಿಟ್ ಬಾಲ್ಟಿಸ್ತಾನ್, ಮುಜಾಫರಾಬಾದ್, ಲಡಾಖ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್‌ನ ಒಂದು ಭಾಗ, ಹರಿಯಾಣದ ಒಂದು ಭಾಗ, ರಾಜಸ್ಥಾನ, ದೆಹಲಿ ಎನ್‌ಸಿಆರ್, ಛತ್ತೀಸ್‌ಗಢ, ಉತ್ತರ ಪ್ರದೇಶದ ಪಶ್ಚಿಮ ಭಾಗಗಳು, ಈಶಾನ್ಯ ಭಾರತ ಲಕ್ಷದ್ವೀಪದಲ್ಲಿ ಸಾಮಾನ್ಯ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ಯಾವ್ಯಾವ ರಾಜ್ಯದಲ್ಲಿ ಮಳೆ ?

ಮುಂದಿನ 24 ಗಂಟೆಗಳಲ್ಲಿ, ಗಂಗಾ ನದಿಯ ಪಶ್ಚಿಮ ಬಂಗಾಳ, ಕರಾವಳಿ ಒಡಿಶಾ ಭಾಗಗಳು, ಮಹಾರಾಷ್ಟ್ರ, ಮಧ್ಯಪ್ರದೇಶ, ಕೇರಳ, ಉತ್ತರ ಪ್ರದೇಶ, ದೆಹಲಿ, ಹರಿಯಾಣದ ಕೆಲವು ಭಾಗಗಳು, ಹಿಮಾಚಲ ಪ್ರದೇಶ, ಉತ್ತರಾಖಂಡ, ಮತ್ತು ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಇಂದೂ ಸಹ ಭಾರೀ ಮಳೆ, ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ..!

ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಜಾರ್ಖಂಡ್, ಪಂಜಾಬ್, ಒಳಭಾಗ ಒಡಿಶಾ, ಛತ್ತೀಸ್‌ಗಢ, ತಮಿಳುನಾಡು, ದಕ್ಷಿಣ ಒಳ ಕರ್ನಾಟಕ, ಲಕ್ಷದ್ವೀಪ ಮತ್ತು ಉತ್ತರ ಮಧ್ಯ ಮಹಾರಾಷ್ಟ್ರದ ಉಳಿದ ಭಾಗಗಳಲ್ಲಿ ಅಧಿಕ ಮಲೆಯ ನಿರೀಕ್ಷೆ ಇದ್ದು, ಜೆ & ಕೆ, ಗಿಲ್ಗಿಟ್ ಬಾಲ್ಟಿಸ್ತಾನ್, ಮುಜಾಫರಾಬಾದ್, ಲಡಾಖ್, ಕೊಂಕಣ ಮತ್ತು ಗೋವಾ ಮತ್ತು ಆಂಧ್ರಪ್ರದೇಶದ ಕರಾವಳಿಯಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Published by:Sandhya M
First published: