Karnataka Weather Today : ಮುಂದಿನ ಎರಡು ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ : ಯಾವ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್?

ಅಕ್ಟೋಬರ್ 21 ರಿಂದ ಅಕ್ಟೋಬರ್ 23ರವರೆಗೆ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ, ಮುಂದಿನ 48 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Rains Today ಬೆಂಗಳೂರು(.20): ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕೆಲವು ಭಾಗದಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಇಂದು ಸಹ ಮುಂದುವರಿಯಲಿದೆ. ಅರಬ್ಬಿ ಮತ್ತು ಪಶ್ಚಿಮ ಬಂಗಾಳದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕರವಾಳಿ ಭಾಗದಲ್ಲಿ ಮಳೆ(Rainfall)ಯಾಗುವ ಸಾಧ್ಯತೆಗಳಿವೆ. ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೂ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆ ಮುಂದುವರೆಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಬೆಳಗಾವಿ, ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಇವತ್ತು ಸಹ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದ ಲಕ್ಷ ದ್ವೀಪ ಭಾಗದಲ್ಲಿ ಹಾಗೂ ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಮಳೆಗೆ ಮೂಲ ಕಾರಣ ಎನ್ನಲಾಗುತ್ತಿದೆ. ಇದರ ಜತೆಯಲ್ಲಿ ಒಂದು ವಾರದ ಬಳಿಕ ಮುಂಗಾರು ಮಳೆ ಕಡಿಮೆಯಾಗಿ ರಾಜ್ಯಕ್ಕೆ ಹಿಂಗಾರು ಪ್ರವೇಶ ಪಡೆಯಲಿದೆ ಎನ್ನುವುದು ಇಲಾಖೆಯ ಲೆಕ್ಕಾಚಾರ.

ಇದನ್ನೂ ಓದಿ: Dead Sea: ಜಾಗೃತಿ ಮೂಡಿಸಲು ಬಂದ 200 ಮಂದಿ ತೀರದಲ್ಲಿ ನಗ್ನರಾಗಿ ಪೋಸ್ ಕೊಟ್ಟರು..!

ಕಳೆದ 24 ಗಂಟೆಗಳಲ್ಲಿ ಹವಾಮಾನ ಹೇಗಿತ್ತು?

ದೆಹಲಿಯ ನೋಯ್ಡಾ, ಗಾಜಿಯಾಬಾದ್, ಗ್ರೇಟರ್ ನೊಯ್ಡಾ ಸೇರಿದಂತೆ ಹಲವೆಡೆ ಮಳೆಯಾಗಿದೆ. ಇಂದು ಸಹ ಮೋಡ ಕವಿದ ವಾತಾವರಣದೊಂದಿಗೆ ತುಂತುರು ಮಳೆಯಾಗಲಿದೆ. ಭಾನುವಾರ ದೆಹಲಿಯಲ್ಲಿ ಸುರಿದ ಮಳೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿತ್ತು.  ಉತ್ತರಾಖಂಡ್ ನಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ಸುಮಾರು 47 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದರಲ್ಲಿ 42 ಜನರ ಸಾವು ಒಂದೇ ದಿನವಾಗಿದೆ.  ಉತ್ತರಾಖಂಡ್ ಭಾಗದಲ್ಲಿ ಅಪಾರ ಆಸ್ತಿ ಹಾನಿಯುಂಟಾಗಿದ್ದು, ಜನರು ಬೀದಿಗೆ ಬಂದಿದ್ದಾರೆ. ನೈನಿತಾಲ್ ಸಂಪರ್ಕ ಸಂಪೂರ್ಣ ಕಡಿತಗೊಂಡಿದ್ದು, ಜನರು ಸಿಲುಕಿಕೊಂಡಿದ್ದಾರೆ. ನೈನಿತಾಲ್ ಗೆ ಸಂಪರ್ಕ ಕಲ್ಪಿಸುವ ಮೂರು ರಸ್ತೆಗಳಲ್ಲಿ ಭೂ ಕುಸಿತವಾಗಿದೆ. ಕಾಠಗೋದಾಮ್ ಗೆ ರೈಲ್ವೇ ಸ್ಟೇಶನ್ ಬಳಿ ಹಳಿಗಳು ಮಳೆಯ ರಭಸಕ್ಕೆ ಕೊಚ್ಚಿ ಹೋಗಿದೆ. ಈ ರೈಲ್ವೇ ಮಾರ್ಗ ಸಿದ್ಧಪಡಿಸಲು ಕನಿಷ್ಠ 15 ದಿನಗಳಾದ್ರೂ ಬೇಕಾಗುತ್ತದೆ ಎಂದು ಹೇಳಲಾಗಿದೆ. ಈ ನಡುವೆ ಉತ್ತರಾಖಂಡ್ ಕುಮಾಓ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.  ಇತ್ತ ಗದ್ವಾಲ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಕ್ಷೀಣವಾಗಲಿದೆ.

ಮುಂದಿನ 24 ಗಂಟೆಗಳಲ್ಲಿ ಎಲ್ಲೆಲ್ಲಿ ಮಳೆ

ಮುಂದಿನ 24 ಗಂಟೆಗಳಲ್ಲಿ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಮತ್ತು ಉತ್ತರ ಪ್ರದೇಶದ ಮಧ್ಯ ಭಾಗಗಳು, ಪಶ್ಚಿಮ ಬಂಗಾಳದ ಕೆಲವು ಭಾಗಗಳು, ಸಿಕ್ಕಿಂ, ಅಸ್ಸಾಂ, ಮಧ್ಯಪ್ರದೇಶದ ಪಾಕೆಟ್ಸ್ ,ಮೇಘಾಲಯ, ಕರಾವಳಿಯ ಒಡಿಶಾದ ಕೆಲವು ಭಾಗಗಳು, ಜಾರ್ಖಂಡ್ ಮತ್ತು ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಇದನ್ನೂ ಓದಿ: Uttarakhand Flood Photos: ರಣಭೀಕರ ಮಳೆಗೆ ತತ್ತರಿಸಿದ ಉತ್ತರಾಖಂಡ: ನೆರೆಯ ರೌದ್ರಾವತಾರ!

ಯಾವ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್?:

ಅಕ್ಟೋಬರ್ 21 ರಿಂದ ಅಕ್ಟೋಬರ್ 23ರವರೆಗೆ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ, ಮುಂದಿನ 48 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಬಳ್ಳಾಪುರ, ಕೊಡಗು, ರಾಮನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇವತ್ತ ಸಹ ಮಳೆಯಾಗುವ ಸಾಧ್ಯತೆಗಳಿವೆ.
Published by:Mahmadrafik K
First published: