Karnataka Weather Today : ಕಳೆದ ಒಂದು ವಾರದಿಂದ ರಾಜ್ಯದ ಪ್ರತಿಯೊಂದು ಜಿಲ್ಲೆಯನ್ನು ವರುಣ ದೇವ (Rainfall) ಪ್ರವೇಶಿಸುತ್ತಿದ್ದಾನೆ. ಕಳೆದ ವಾರ ಬೆಂಗಳೂರಿನಲ್ಲಿ (Bengaluru Rainfall) ಧಾರಾಕಾರ ಮಳೆಯಾಗಿತ್ತು. ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತ ಮತ್ತು ಬಂಗಾಳ ಕೊಲ್ಲಿಯ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮಳೆಯಾಗುತ್ತಿದೆ. ರಾಜ್ಯದ ಕರಾವಳಿ (coastal) ಮತ್ತು ದಕ್ಷಿಣ ಕನ್ನಡ ಒಳನಾಡು ಜಿಲ್ಲೆಗಳಲ್ಲಿ ಹಿಂಗಾರು ಅಬ್ಬರ ಮುಂದುವರಿಯಲಿದೆ. ಶನಿವಾರದವರೆಗು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇತ್ತ ನಿರಂತರ ಮಳೆಯಿಂದಾಗಿ (Karnataka Rains) ರಾಜ್ಯದ ಜಲಾಶಯಗಳು ಭರ್ತಿಯಾಗುತ್ತಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕ ಸಂದೇಶ ನೀಡಲಾಗಿದೆ.
ಬೆಂಗಳೂರಿನಲ್ಲಿ ಗರಷ್ಠ 22 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ನಾಲ್ಕೈ ದು ದಿನ ಮೋಡ ಕವಿದ ವಾತಾವರಣದ ಜೊತೆಗೆ ಮಳೆಯಾಗಲಿದೆ. ಬೆಂಗಳೂರಿನ ರಸ್ತೆಗಳ ಗುಂಡಿಗಳಲ್ಲಿ ಮಳೆ ನೀರು ನಿಂತ ಪರಿಣಾಮ ವಾಹನ ಸವಾರರು ಭಯದಲ್ಲಿ ಸಂಚರಿಸುವ ಪರಿಸ್ಥಿತಿ ಎದುರಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್
ಅರಬ್ಬಿ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿ, ಟ್ರಫ್ ಮತ್ತು ಬಂಗಾಳ ಕೊಲ್ಲಿಯಲ್ಲಿ (Bea of Bengal) ವಾಯುಭಾರ ಕುಸಿತದ ಪರಿಣಾಮ ಕರಾವಳಿ ಮತ್ತು ಒಳನಾಡಿನಲ್ಲಿ ಮಳೆ ಅಬ್ಬರಿಸಿದೆ. ಒಳನಾಡಿನ ಕೆಲ ಜಿಲ್ಲೆಗಳಿಗೆ ಸೀಮಿತವಾಗಿದ್ದ ‘ಯೆಲ್ಲೋ ಅಲರ್ಟ್’ (yellow alert) ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಿದೆ. ಅದೇ ರೀತಿ ಕರಾವಳಿ ಜಿಲ್ಲೆಗಳಿಗೆ ನೀಡಲಾಗಿದ್ದ ಯೆಲ್ಲೋ ಅಲರ್ಟ್ ಅನ್ನು ಆರೆಂಜ್ ಅಲರ್ಟ್ (Orange Alert) ಆಗಿ ಪರಿವರ್ತಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ 40 ರಿಂದ 60 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಎಲ್ಲೆಲ್ಲಿ ಮಳೆಯಾಗಿದೆ?
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳಯಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಿರುವ ವರದಿಯಾಗಿವೆ. ಕಲಬುರಗಿ, ಕೊಪ್ಪಳ, ಗದಗ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಶನಿವಾರದವರೆಗೂ ಇದೇ ರೀತಿಯ ವಾತಾವರಣವಿರಲಿದೆ.
ತಮಿಳುನಾಡಿನಲ್ಲೂ ಮತ್ತೆ ವರುಣನ ಆರ್ಭಟ
ಕಳೆದ 12 ದಿನಗಳಿಂದ ಸುರಿದ ಮಳೆಯಿಂದಾಗಿ ತಮಿಳುನಾಡಿನಲ್ಲಿ ಪ್ರವಾಹ ಉಂಟಾಗಿದೆ. 14 ಕ್ಕೂ ಹೆಚ್ಚು ಮಂದಿಯನ್ನು ಈ ರಣ ಮಳೆ ಬಲಿ ಪಡೆದುಕೊಂಡಿದೆ. ನಿನ್ನೆ ಕೊಂಚ ಮಟ್ಟಿಗೆ ರಿಲ್ಯಾಕ್ಸ್ ಕೊಟ್ಟಿದ್ದ ವರುಣ ದೇವ ಇಂದು ಮತ್ತೆ ತನ್ನ ಆರ್ಭಟವನ್ನು ಮುಂದುವರೆಸಿಲಿದ್ದಾನೆ. ಈಗಾಗಲೇ ಉಂಟಾಗಿರುವ ಮಳೆ ಅವಾಂತರದಿಂದ ಅಲ್ಲಿನ ಜನರು ಕಂಗಾಲಾಗಿದ್ದಾರೆ. ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಅಲ್ಲಿನ ಸರ್ಕಾರ ಸೂಚಿಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ