Karnataka Weather Today: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ನ.5ವರೆಗೂ ಮಳೆ: ಯೆಲ್ಲೋ ಅಲರ್ಟ್ ಘೋಷಣೆ!

Karnataka Weather Today: ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ.

ಮಳೆ

ಮಳೆ

  • Share this:
Karnataka Weather Today: ಬೆಂಗಳೂರು ಸೇರಿದಂತೆ ಮೈಸೂರು ಭಾಗದಲ್ಲಿ ಇಂದು ಮಳೆಯಾಗುವ (Bengaluru Rainfall) ಸಾಧ್ಯತೆಗಳಿವೆ. ಕರಾವಳಿ ಮತ್ತು ಒಳನಾಡಿನಲ್ಲಿ ಮಳೆಯ ಸಣ್ಣ ಸಿಂಚನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು (Bengaluru Weather) ಗರಿಷ್ಠ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಇನ್ನು ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಮಳೆಯಾಗುವ (Uttara Kannada, Dakshina Kannada And Udupi) ಸಾಧ್ಯತೆಗಳು ಹೆಚ್ಚಿವೆ. ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಇಂದು ಹಲವೆಡೆ ಮಳೆಯಾದರೆ, ಮತ್ತೆ ಕೆಲ ಕಡೆ ಮೋಡ(Cloud) ಮತ್ತು ಸೂರ್ಯ(Sun)ನ ನಡುವೆ ಈ ಆಟ ನಡೆಯಲಿದೆ.

ನವೆಂಬರ್ 5ರಂದು ಆರೆಂಜ್ ಅಲರ್ಟ್

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ನವೆಂಬರ್ 5ರಂದು ಭಾರೀ ಮಳೆಯಾಗಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ದಾವಣಗೆರೆ, ಚಿತ್ರದುರ್ಗ ಮತ್ತು ಕೊಡಗು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ.ಉಡುಪಿ, ಮಂಗಳೂರು ಮತ್ತು ಉತ್ತರ ಕನ್ನಡ ಕರಾವಳಿ ಭಾಗದಲ್ಲಿ ಮಳೆಯಾಗುತ್ತಿದೆ ಹಾಗಾಗಿ ಸಮುದ್ರ ತೀರದ ಮತ್ತು ಮೀನುಗಾರರಿಗೆ ಎಚ್ಚರಿಕೆಯ ಸಂದೇಶ ನೀಡಲಾಗಿದೆ. ಸಮುದ್ರ ತೀರದಲ್ಲಿಯೂ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇದನ್ನು ಓದಿ : ಸ್ತಿ ಖರೀದಿ ವಿಚಾರದಲ್ಲಿ ಹೆಂಡತಿ ಸಲಹೆ ಪಾಲಸಿದರೆ ಈ ರಾಶಿಯವರಿಗೆ ಲಾಭ; ಇಲ್ಲಿದೆ 12 ರಾಶಿಗಳ ದಿನಭವಿಷ್ಯ

ಕರ್ನಾಟಕದ ಡ್ಯಾಂಗಳು ಭರ್ತಿ

ರಾಜ್ಯದಲ್ಲಿ ಹಲವು ದಿನಗಳಿಂದ ನಿರಂತರವಾಗಿ ಮಳೆ (Rainfall) ಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಭಾರಿ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂ (Karnataka dams)ಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಈ ಹಿನ್ನೆಲೆ ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಕೆಆರ್ ಎಸ್ ಕಾವೇರಿ ನದಿ ಪಾತ್ರದ ಜನರಿಗೆ ಎಚ್ಚರಿಕೆಯ ಸೂಚನೆ ನೀಡಲಾಗಿತ್ತು.

ಕೇರಳ, ತಮಿಳುನಾಡಿನಲ್ಲಿ ಮತ್ತೆ ಮಳೆಯ ಆರ್ಭಟ

ಕಳೆದ ನಾಲ್ಕೈದು ದಿನಗಳಿಂದ ಕೇರಳದ 12 ಜಿಲ್ಲೆಗಳಲ್ಲಿ ಯೆಲ್ಲೂ ಅಲರ್ಟ್ ಘೋಷಣೆ ಮಾಡಲಾಗಿತ್ತು. ಈಗ ಜಿಲ್ಲೆಗಳಲ್ಲಿ ಸಂಖ್ಯೆ 5ಕ್ಕೆ ಇಳಿದಿದ್ದು, ಈ ವ್ಯಾಪ್ತಿಯಲ್ಲಿಯೇ ಇವತ್ತು ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ. ತಿರುವನಂತಪುರ, ಕೊಟ್ಟಾಯಂ, ಇದುಕ್ಕಿ, ಪಥನಂಮಿಟ್ಟಾ ಮತ್ತು ಕೊಲ್ಲಂ ಜಿಲ್ಲೆಗಳಲ್ಲಿ ಅಂದಾಜು 11-20 ಸೆಂ.ಮೀ.ವರೆಗೆ ಮಳೆಯಾಗಲಿದೆ. ಈ ಐದು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಅಲ್ಲಪೂಜಾ, ಎರ್ನಾಕುಲಂ, ತ್ರಿಶೂರ್, ಪಾಲಕಡ್ ಮತ್ತು ಮಲ್ಲಪುರಂನಲ್ಲಿ ಯೆಲ್ಲೋ ಅಲರ್ಟ್ ಮುಂದುವರಿಯಲಿದೆ.

ಇದನ್ನು ಓದಿ : ನೀರಜ್ ಚೋಪ್ರಾ ಸೇರಿ 12 ಮಂದಿಗೆ ಖೇಲ್ ರತ್ನ; ಹಾಸನದ ಯುವಕನಿಗೆ ಅರ್ಜುನ ಪ್ರಶಸ್ತಿ; ಇಲ್ಲಿದೆ ಸಂಪೂರ್ಣ ಪಟ್ಟಿ

ತಮಿಳುನಾಡು ಮತ್ತು ಶ್ರೀಲಂಕಾ ಕರಾವಳಿ ಭಾಗದಲ್ಲಿ ಕಡಿಮೆ ಒತ್ತಡ ಉಂಟಾಗಿದ್ದು, ಸಮುದ್ರ ಮಟ್ಟದಿಂದ 3.1 ಕಿಲೋ ಮೀಟರ್ ವರೆಗೆ ಚಂಡಮಾರುತದ ಪರಿಚಲನೆ ವಿಸ್ತರಿಸಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಚಂಡಮಾರುತ ಪಶ್ಚಿಮದತ್ತ ನಿಧಾನವಾಗಿ ಚಲಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಭಾರತದಲ್ಲೂ ವರುಣನ ಅಬ್ಬರ

ದೆಹಲಿ, ಹರಿಯಾಣ, ಪಂಜಾಬ್ ಮತ್ತು ಉತ್ತರಪ್ರದೇಶಗಳಲ್ಲಿ ಯಮುನಾ ಸೇರಿದಂತೆ ಅನೇಕ  ನದಿಗಳು ಅಪಾಯಕಾರಿ ಮಟ್ಟಕ್ಕೆ ಮೀರಿ ಹರಿಯುತ್ತಿದ್ದು ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ದೆಹಲಿ ಸರ್ಕಾರ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ಹೋಗುವಂತೆ ಮನವಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Published by:Vasudeva M
First published: