Karnataka Weather Report: ರಾಜಧಾನಿ ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ವರುಣನ ಅಬ್ಬರ, 13 ಜಿಲ್ಲೆಗೆ ಅಲರ್ಟ್ ಸಂದೇಶ

ರಡು ದಿನ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಮುಂಜಾಗ್ರತ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ 13 ಜಿಲ್ಲೆಗಳಿಗೆ ಅಲರ್ಟ್  ಸಂದೇಶ ರವಾನಿಸಲಾಗಿದ್ದು, ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ.

ಬೆಂಗಳೂರು ಮಳೆ

ಬೆಂಗಳೂರು ಮಳೆ

  • Share this:
ರಾಜಧಾನಿ ಬೆಂಗಳೂರು (Bengaluru Rains) ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ವರುಣನ (Rainfall) ಅಬ್ಬರ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಕನಿಷ್ಠ 19 ಮತ್ತು ಗರಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮಳೆಯ ಜೊತೆಗೆ ಬೆಂಗಳೂರು ಚಳಿ (Bengaluru Winter)ಗೆ ತತ್ತರಿಸಿದೆ. ಗುರುವಾರ ಬೆಳಗ್ಗೆ ಆರಂಭವಾದ ಮಳೆ ಎಡೆಬಿಡದೇ ಸುರಿದಿದೆ.  ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಮುಂಜಾಗ್ರತ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ 13 ಜಿಲ್ಲೆಗಳಿಗೆ ಅಲರ್ಟ್  ಸಂದೇಶ ರವಾನಿಸಲಾಗಿದ್ದು, ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಶಿವಮೊಗ್ಗ ಮತ್ತು ರಾಮನಗರ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಅಲರ್ಟ್ ನೀಡಲಾಗಿದ್ದು, ಮುಂಜಾಗ್ರತ ಕ್ರಮಗಳೊಂದಿಗೆ ಸಿದ್ಧರಾಗಿರುವಂತೆ ಸೂಚಿಸಲಾಗಿದೆ.

ಮುಂದುವರಿದ ಮಳೆ

ನೆರೆಯ  ಚೆನ್ನೈನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮಳೆ ಮುಂದುವರಿಯುತ್ತಿದೆ. ಪರಿಣಾಮ ಬೆಂಗಳೂರಿನಲ್ಲಿ ಇವತ್ತು ಸಹ ತುಂತುರು ಮಳೆಯಾಗಲಿದೆ. ಗುರುವಾರ ಸುರಿದ ಮಳೆಗೆ ಬೆಂಗಳೂರು ರಸ್ತೆಗಳಲ್ಲಿ ಹೊಳೆಯಂತೆ ನೀರು ಹರಿದಿತ್ತು. ಉತ್ತರ ಕರ್ನಾಟಕದ ಕಲಬುರಗಿ, ಬೀದರ್, ಕೊಪ್ಪಳ, ಯಾದಗಿರಿ, ವಿಜಯಪುರ, ಬಾಗಲಕೋಟೆ ಮತ್ತು ಗದಗನಲ್ಲಿಯೂ ಮಳೆಯಾಗುತ್ತಿದೆ.

ಇದನ್ನೂ ಓದಿ: PU Midterm ಪರೀಕ್ಷೆಗೆ ದಿನಾಂಕ ಫಿಕ್ಸ್; ಬೆಂಗಳೂರಲ್ಲಿ ಮಳೆಯಿಂದ ನಾಳೆ ಶಾಲಾ-ಕಾಲೇಜುಗಳಿಗೆ ರಜೆ

ಶನಿವಾರದವರೆಗೂ ಮಳೆ

ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತ ಮತ್ತು ಬಂಗಾಳ ಕೊಲ್ಲಿಯ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮಳೆಯಾಗುತ್ತಿದೆ. ರಾಜ್ಯದ ಕರಾವಳಿ (coastal) ಮತ್ತು ದಕ್ಷಿಣ ಕನ್ನಡ ಒಳನಾಡು ಜಿಲ್ಲೆಗಳಲ್ಲಿ ಹಿಂಗಾರು ಅಬ್ಬರ ಮುಂದುವರಿಯಲಿದೆ.  ಶನಿವಾರದವರೆಗು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ  ಜಿಲ್ಲೆಗಳಲ್ಲಿಯೂ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇತ್ತ ನಿರಂತರ ಮಳೆಯಿಂದಾಗಿ (Karnataka Rains) ರಾಜ್ಯದ ಜಲಾಶಯಗಳು ಭರ್ತಿಯಾಗುತ್ತಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕ ಸಂದೇಶ ನೀಡಲಾಗಿದೆ. ಮುಂದಿನ ಎರಡು ದಿನ ಮೀನುಗಾರಿಕೆ ನಿಷೇಧಿಸಲಾಗಿದೆ.

ಇದನ್ನೂ ಓದಿ:  Astrology: ಚಂದ್ರಗ್ರಹಣದ ಈ ದಿನ ಈ ರಾಶಿಯವರು ವಿಶೇಷ ಜಾಗ್ರತೆವಹಿಸಿ; ಇಲ್ಲಿದೆ 12 ರಾಶಿಗಳ ದಿನಭವಿಷ್ಯ

ತಮಿಳುನಾಡಿನಲ್ಲೂ ಮತ್ತೆ ವರುಣನ ಆರ್ಭಟ

ಕಳೆದ 12 ದಿನಗಳಿಂದ ಸುರಿದ ಮಳೆಯಿಂದಾಗಿ ತಮಿಳುನಾಡಿನಲ್ಲಿ ಪ್ರವಾಹ ಉಂಟಾಗಿದೆ. 14 ಕ್ಕೂ ಹೆಚ್ಚು ಮಂದಿಯನ್ನು ಈ ರಣ ಮಳೆ ಬಲಿ ಪಡೆದುಕೊಂಡಿದೆ. ನಿನ್ನೆ ಕೊಂಚ ಮಟ್ಟಿಗೆ ರಿಲ್ಯಾಕ್ಸ್​ ಕೊಟ್ಟಿದ್ದ ವರುಣ ದೇವ ಇಂದು ಮತ್ತೆ ತನ್ನ ಆರ್ಭಟವನ್ನು ಮುಂದುವರೆಸಿಲಿದ್ದಾನೆ. ಈಗಾಗಲೇ ಉಂಟಾಗಿರುವ ಮಳೆ ಅವಾಂತರದಿಂದ ಅಲ್ಲಿನ ಜನರು ಕಂಗಾಲಾಗಿದ್ದಾರೆ. ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಅಲ್ಲಿನ ಸರ್ಕಾರ ಸೂಚಿಸಿದೆ.

ಕೆಆರ್ಎಸ್ ಜಲಾಶಯ ಸಂಪೂರ್ಣ ಭರ್ತಿ

ಹೆಚ್ಚು ಪ್ರಮಾಣದ ಮಳೆಯಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳು (Dam) ಸೇರಿ ಎಲ್ಲ ಕೆರೆ ಕಟ್ಟೆಗಳು ತುಂಬಿ ಕೋಡಿ ಬಿದ್ದಿವೆ. ಜಲಾಶಯಗಳಿಂದ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ಇದರಿಂದಾಗಿ ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಹಳೆ ಮೈಸೂರು ಭಾಗದ ಜೀವನಾಡಿ ಮಂಡ್ಯ ಜಿಲ್ಲೆಯ (Mandya District) ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯ (KRS Dam) ಸಂಪೂರ್ಣವಾಗಿ ಭರ್ತಿಯಾಗಿದೆ. ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಬಿಡುವ ಸಾಧ್ಯತೆ ಇರುವ ಕಾರಣ ಕಾವೇರಿ ನದಿ ಪಾತ್ರದ ಜನರು ಮುನ್ನೆಚ್ಚರಿಕ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಆದೇಶಿಸಲಾಗಿದೆ.

ಕಳೆದ ರಾತ್ರಿ ಬಿದ್ದ ಮಳೆಗೆ ಕೆಆರ್‌ಪೇಟೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸಂಪೂರ್ಣವಾಗಿ ಜಲವೃತಗೊಂಡಿದೆ. ಹಳ್ಳದ ಪ್ರದೇಶದಲ್ಲಿ ಬಸ್ ನಿಲ್ದಾಣ ಇರುವ ಕಾರಣ ಏಕಾಏಕಿ ನೀರು ಹರಿದು ಬಂದ ಕಾರಣ ಬಸ್ ನಿಲ್ದಾಣ ಕೆರೆಯಂತೆ ಆಗಿದೆ. ಇದರಿಂದ ಬಸ್ ನಿಲ್ದಾಣದಲ್ಲಿರುವ ಬೇಕರಿ, ಹೋಟೆಲ್, ಅಂಗಡಿ ಮಳಿಗೆಗಳಿಗೆ ನೀರು ನುಗ್ಗಿದೆ. ಈ ಅವಘಡದಿಂದ ಪ್ರಯಾಣಿಕರು ಪರದಾಡವಂತಹ ಸ್ಥಿತಿ ನಿರ್ಮಾಣವಾಗಿದೆ.
Published by:Mahmadrafik K
First published: