HOME » NEWS » State » RAJYA SABHA BY ELECTION BJP LIKELY TO ANNOUNCE KARNATAKA RAJYA SABHA ELECTION CANDIDATE TODAY DBDEL SCT

ಅಶೋಕ್ ಗಸ್ತಿ ನಿಧನದಿಂದ ತೆರವಾದ ರಾಜ್ಯಸಭಾ ಸ್ಥಾನಕ್ಕೆ ಇಂದೇ ಬಿಜೆಪಿ ಅಭ್ಯರ್ಥಿ ಘೋಷಣೆ ಸಾಧ್ಯತೆ

ಅಶೋಕ್ ಗಸ್ತಿ ನಿಧನದಿಂದ ತೆರವಾಗಿರುವ ರಾಜ್ಯಸಭಾ ಸ್ಥಾನಕ್ಕೆ ಅವರ ಪತ್ನಿ ಸುಮಾ ಗಸ್ತಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಶಂಕರಪ್ಪ ಹಾಗೂ ಮಾಜಿ ಶಾಸಕ ನಿರ್ಮಲ್‌ ಕುಮಾರ್‌ ಸುರಾನಾ ಅವರ ಹೆಸರನ್ನು ರಾಜ್ಯ ಬಿಜೆಪಿ ಶಿಫಾರಸು ಮಾಡಿದೆ. ಇದರ ಜೊತೆಗೆ ನಟರಾದ ರಜನಿಕಾಂತ್ ಮತ್ತು ಖುಷ್ಬೂ ಹೆಸರು ಕೂಡ ಕೇಳಿಬರುತ್ತಿದೆ.

news18-kannada
Updated:November 16, 2020, 10:56 AM IST
ಅಶೋಕ್ ಗಸ್ತಿ ನಿಧನದಿಂದ ತೆರವಾದ ರಾಜ್ಯಸಭಾ ಸ್ಥಾನಕ್ಕೆ ಇಂದೇ ಬಿಜೆಪಿ ಅಭ್ಯರ್ಥಿ ಘೋಷಣೆ ಸಾಧ್ಯತೆ
ಅಶೋಕ್​ ಗಸ್ತಿ
  • Share this:
ನವದೆಹಲಿ (ನ. 16): ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿ‌ ಒಂದು ದಿನವೂ ಕಲಾಪಕ್ಕೆ ಹಾಜರಾಗಲು ಸಾಧ್ಯವಾಗದೆ ಅನಾರೋಗ್ಯದಿಂದ ಮೃತಪಟ್ಟ ಅಶೋಕ್ ಗಸ್ತಿ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಬಿಜೆಪಿ ಹೈಕಮಾಂಡ್ ಇಂದು ಹೊಸ ಅಭ್ಯರ್ಥಿಯನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಕರ್ನಾಟಕದಿಂದ ನಡೆಯುವ ರಾಜ್ಯಸಭಾ ಚುನಾವಣೆಗೆ‌ ನಾಮಪತ್ರ ಸಲ್ಲಿಸಲು ನಾಡಿದ್ದು (ನವೆಂಬರ್ 18) ಕೊನೆಯ ದಿನವಾಗಿದ್ದು ಇಂದು ಅಥವಾ ನಾಳೆ ಬಿಜೆಪಿ ಅಭ್ಯರ್ಥಿಯನ್ನು ಘೋಷಣೆ ಮಾಡಲೇಬೇಕಾಗಿದೆ.

ರಾಜ್ಯ ಬಿಜೆಪಿ ಘಟಕ ಈಗಾಗಲೇ ಮೂರು ಹೆಸರುಗಳನ್ನು ಹೈಕಮಾಂಡಿಗೆ ಶಿಫಾರಸು ಮಾಡಿದೆ. ಪಟ್ಟಿಯಲ್ಲಿ ಅಶೋಕ್ ಗಸ್ತಿ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಅವರ ಪತ್ನಿ ಸುಮಾ ಗಸ್ತಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಶಂಕರಪ್ಪ (ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ) ಹಾಗೂ ಮಾಜಿ ಶಾಸಕ ನಿರ್ಮಲ್‌ ಕುಮಾರ್‌ ಸುರಾನಾ ಅವರ ಹೆಸರುಗಳನ್ನು ಶಿಫಾರಸು ಮಾಡಿದೆ. ಈ ಪೈಕಿ ಯಾರಿಗೆ ಅವಕಾಶ ಸಿಗುತ್ತದೆ ಎಂಬುದನ್ನು ಕಾದು ನೋಡಬೇಕು.

ಈ ಮೂವರನ್ನು‌ ಹೊರತು ಪಡಿಸಿ ಅಚ್ಚರಿಯ ಅಭ್ಯರ್ಥಿಯನ್ನು ಘೋಷಣೆ ಮಾಡುವ ಸಾಧ್ಯತೆಯೂ ಇದೆ. ಹಿಂದೆ ಅಶೋಕ್ ಗಸ್ತಿ ಅವರ ಹೆಸರನ್ನು ಘೋಷಣೆ ಮಾಡಿದಾಗ ಸ್ವತಃ ಬಿಜೆಪಿಯ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೂ ಆ ಸುಳಿವಿರಲಿಲ್ಲ. ಸಿಎಂ ಯಡಿಯೂರಪ್ಪ ಅವರಿಗೆ ಮುಖಭಂಗ ಮಾಡಲೆಂದೇ ಅಚ್ಚರಿಯ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ ಎಂಬ ವ್ಯಾಖ್ಯಾನಗಳೂ ಕೇಳಿಬಂದಿದ್ದವು. ಅದೇ ರೀತಿ ಈ ಬಾರಿಯೂ ಅಚ್ಚರಿಯ ಹೆಸರು ಪ್ರಕಟವಾಗಬಹುದು.

ಇದನ್ನೂ ಓದಿ: Karnataka Weather: ಬೆಂಗಳೂರು, ಕರಾವಳಿ, ಮೈಸೂರು, ಕೊಡಗು ಸೇರಿ ಬಹುತೇಕ ಕಡೆ ನ. 18ರವರೆಗೆ ಮಳೆ ಸಾಧ್ಯತೆ

ಈ ನಿಟ್ಟಿನಲ್ಲಿ ಖ್ಯಾತ ನಟ ರಜನಿಕಾಂತ್ ಮತ್ತು ಖ್ಯಾತ‌ ನಟಿ ಖುಷ್ಬು ಅವರ ಹೆಸರುಗಳು ಕೂಡ ಕೇಳಿ ಬರುತ್ತಿವೆ. ಮುಂದಿನ‌ ವರ್ಷ (2021) ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು, ಆ ಚುನಾವಣೆ ದೃಷ್ಟಿಯಿಂದ‌ ರಜನಿಕಾಂತ್ ಅಥವಾ ಖುಷ್ಬುಗೆ ಅವಕಾಶ ನೀಡಬಹುದು ಎಂದು ಹೇಳಲಾಗುತ್ತಿದೆ.‌ ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ಮತ್ತು ಮೇಕೆದಾಟು ಜಲ ವಿವಾದಗಳು ಜೀವಂತವಾಗಿವೆ. ಈಗಾಗಲೇ ತಮಿಳುನಾಡು ಮೂಲದ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಲಾಗಿದೆ. ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಸಿಗಬೇಕಾದ ಅನುದಾನಗಳನ್ನು ಕೊಡುವುದರಲ್ಲಿ ಉದಾರತೆ ತೋರುತ್ತಿಲ್ಲ. ಹಾಗಾಗಿ ಮತ್ತೊಬ್ಬರು ತಮಿಳು ಮೂಲದವರಿಗೆ ರಾಜ್ಯಸಭಾ ಸ್ಥಾನಮಾನ‌ ನೀಡುವುದು ಸಾಧ್ಯವೇ? ಎಂಬುದೂ ಚರ್ಚೆಯಾಗುತ್ತಿದೆ.
Youtube Video

ಅಭ್ಯರ್ಥಿ ಘೋಷಿಸದ ಕಾಂಗ್ರೆಸ್-ಜೆಡಿಎಸ್:ಡಿಸೆಂಬರ್‌ 1ರಂದು ನಡೆಯುವ ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿ ಹಾಕುವುದಿಲ್ಲ ಎಂದು ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ನಿರ್ಧರಿಸಿವೆ. ವಿಧಾನಸಭೆಯ ಸಂಖ್ಯಾಬಲದಲ್ಲಿ ಬಿಜೆಪಿ ಬಳಿ ಅಗತ್ಯ ಶಾಸಕರ ಬಲ ಇದ್ದು ಅನಗತ್ಯವಾಗಿ ಅಭ್ಯರ್ಥಿ ಹಾಕುವುದು ಬೇಡ ಎಂದು ನಿರ್ಧರಿಸಿವೆ. ಹಾಗಾಗಿ ಈ ಬಾರಿ ಬಿಜೆಪಿಯ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಾತರಿಯಾಗಿದೆ. ಆದರೆ ಬಿಜೆಪಿ ಅಭ್ಯರ್ಥಿ ಯಾರು? ಎಂಬ ಕುತೂಹಲ ಬಗೆಹರಿಯಬೇಕಷ್ಟೇ.
Published by: Sushma Chakre
First published: November 16, 2020, 10:53 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories