ರಾಜ್ಯಸಭೆ ಚುನಾವಣೆ: ಕಾಂಗ್ರೆಸ್​ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

ನಾಮಪತ್ತ ಸಲ್ಲಿಕೆಗೂ ಮುನ್ನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ‌ ಬಂದು ಬಿ ಫಾರಂ ಪಡೆದು. ಬಳಿಕ ವಿಧಾನಸೌಧಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

  • Share this:
ಬೆಂಗಳೂರು(ಜೂ.08): ಭಾರೀ ಕುತೂಹಲ ಮೂಡಿಸಿರುವ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕೊನೆಯ ದಿನ. ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸಿದರು. ಸದಾಶಿವನಗರದ ಅವರ ನಿವಾಸಕ್ಕೆ ಹಲವಾರು ಗಣ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಕಾರ್ಯಕರ್ತರು ಬಂದು ಶುಭ ಕೋರಿದರು.

ನಾಮಪತ್ತ ಸಲ್ಲಿಕೆಗೂ ಮುನ್ನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ‌ ಬಂದು ಬಿ ಫಾರಂ ಪಡೆದು. ಬಳಿಕ ವಿಧಾನಸೌಧಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ವೇಳೆ, ಅಭ್ಯರ್ಥಿ ಜೊತೆಗೆ ಕೇವಲ ನಾಲ್ಕು ಜನರು ಮಾತ್ರ ಇರಬೇಕು ಎಂದು ವಿಧಾನಸಭೆ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ತಿಳಿಸಿದ್ದರು

ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಜೊತೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಸಚಿವ ಆರ್​ ವಿ ದೇಶ ಪಾಂಡೆ, ಶಾಸಕ ಕೆ ಆರ್​ ರಮೇಶ್ ಕುಮಾರ್​, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಮತ್ತಿತರ ಕೆಲ ನಾಯಕರು ನಾಮಪತ್ರ ಸಲ್ಲಿಸುವ ವೇಳೆ ಉಪಸ್ಥಿತರಿದ್ದರು.

ಇದನ್ನೂ ಓದಿ : ಲಾಕ್​ಡೌನ್​ನಿಂದ ಬೆಂಗಳೂರಲ್ಲಿ ರೊಟ್ಟಿ ಊಟ ಸಿಗ್ತಿರಲಿಲ್ಲ, ಅದಕ್ಕೆ ಉಮೇಶ್ ಕತ್ತಿ ಶಾಸಕರಿಗೆ ಊಟದ ವ್ಯವಸ್ಥೆ ಮಾಡಿದ್ರು: ಸವದಿ ಹಾಸ್ಯ ಚಟಾಕಿ

ಇದೇ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ, ನನ್ನ ಅಭ್ಯರ್ಥಿ ಮಾಡಿದ ಹೈಕಮಾಂಡ್ ಗೆ ಧನ್ಯವಾದ ತಿಳಿಸುತ್ತೇನೆ. ನಾಯಕರು ನನ್ನ ಮೇಲೆ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳುತ್ತೇನೆ. ಚುನಾವಣೆ ನಡೆದರೇ ಎಲ್ಲ ಶಾಸಕರು ಬಂದು ನನಗೆ ತಪ್ಪದೇ ಮತ ಚಲಾಯಿಸಿ ಅಂತ ಮನವಿ ಮಾಡುತ್ತೇನೆ ಎಂದರು.

 
First published: