Lehar Singh: ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಬಿಜೆಪಿ; ಲೇಹರ್ ಸಿಂಗ್​ಗೆ ಟಿಕೆಟ್ ಕೊಟ್ಟ ಹೈಕಮಾಂಡ್

ಕಾಂಗ್ರೆಸ್ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್​ ಅಲಿಖಾನ್​ (Mansoor Ali Khan) ಅವರನ್ನು ಕಣಕ್ಕಿಳಿಸುತ್ತಿದ್ದಂತೆ ಇದೀಗ ಬಿಜೆಪಿ ಹೈಕಮಾಂಡ್​ ಕೂಡ ಮಹತ್ತರ ನಿರ್ಧಾರ ಕೈಗೊಂಡಿದ್ದು, ಲೇಹರ್ ಸಿಂಗ್ ಟಿಕೆಟ್ ನೀಡಿ ಅಖಾಡಕ್ಕಿಳಿಸಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು (ಮೇ 30): ರಾಜ್ಯಸಭೆ ಚುನಾವಣೆಗೆ (Rajya Sabha Election) ಬಿಜೆಪಿ  ಮೂರನೇ ಅಭ್ಯರ್ಥಿ ಕಣಕ್ಕಿಳಿಸಿದೆ. ಕಾಂಗ್ರೆಸ್ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್​ ಅಲಿಖಾನ್​ (Mansoor Ali Khan) ಅವರನ್ನು ಕಣಕ್ಕಿಳಿಸುತ್ತಿದ್ದಂತೆ ಇದೀಗ ಬಿಜೆಪಿ ಹೈಕಮಾಂಡ್​ ಕೂಡ ಮಹತ್ತರ ನಿರ್ಧಾರ ಕೈಗೊಂಡಿದ್ದು, ಲೇಹರ್ ಸಿಂಗ್ (Lehar singh) ಟಿಕೆಟ್ ನೀಡಿ ಅಖಾಡಕ್ಕಿಳಿದೆ. ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಕಣಕ್ಕಿಳಿಸಿದ್ದು, ನಾಳೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.    ನಿನ್ನೆ ರಾಜ್ಯಸಭೆಗೆ ಟಿಕೆಟ್ ಘೋಷಿಸಿದ್ದ ಬಿಜೆಪಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗೆ (Nirmala Sitharaman) ಮತ್ತೊಮ್ಮೆ ಅವಕಾಶ ನೀಡಿದೆ. ಜೊತೆಗೆ ಬಿಜೆಪಿ ನಾಯಕ ಜಗ್ಗೇಶ್ (Jaggesh) ಅವರಿಗೂ ಬಿಜೆಪಿ ರಾಜ್ಯಸಭೆಗೆ ಟಿಕೆಟ್ (BJP Rajya Sabha Ticket) ಘೋಷಿಸಿದೆ.

ಕರ್ನಾಟಕದಿಂದ 2ನೇ ಬಾರಿಗೆ ರಾಜ್ಯಸಭೆಗೆ

ಕರ್ನಾಟಕದಿಂದ ಎರಡನೇ ಬಾರಿಗೆ ರಾಜ್ಯಸಭೆಗೆ ಆಯ್ಕೆ ಆಗುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಇಂದು ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಅಭಿನಂದಿಸಲಾಯಿತು.

ರಾಜ್ಯ ಬಿಜೆಪಿ ಕಚೇರಿಗೆ ನಿರ್ಮಲಾ ಸೀತಾರಾಮನ್​ ಭೇಟಿ

ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 10 ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಿರ್ಮಲಾ ಸೀತಾರಾಮನ್ ಹೆಸರು ಪ್ರಕಟಗೊಂಡ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಗೆ ಸಚಿವೆ ಆಗಮಿಸಿದರು. ಇವರಿಗೆ ವಿಧಾನಪರಿಷತ್ ಸದಸ್ಯೆ ತೇಜಸ್ವಿನಿಗೌಡ ಹಾರ ಹಾಕಿ ಶಾಲು ಹೊದಿಸಿ ಗೌರವಿಸಿದರು. ಎರಡನೇ ಬಾರಿಗೆ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗುತ್ತಿರುವುದಕ್ಕೆ ಅಭಿನಂದನೆ ಸಲ್ಲಿಸಿದರು

ಈ ಸಂದರ್ಭದಲ್ಲಿ ರಾಷ್ಟ್ರೀಯ ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿ ಸತೀಶ್, ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ, ರಾಜ್ಯ ಮುಖ್ಯ ವಕ್ತಾರ ಎಂಜಿ ಮಹೇಶ್, ಶಾಸಕ ರಾಜ್‍ಕುಮಾರ್ ಪಾಟೀಲ ತೇಲ್ಕೂರ ಹಾಗೂ ಇತರರು ಕೇಂದ್ರ ಸಚಿವರಿಗೆ ಶುಭ ಕೋರಿದರು.

ಇದನ್ನೂ ಓದಿ:   Siddaramaiah: ಶಾಲು, ದೋತಿ, ಪೇಟ ಹಾಕೋದು ನನ್ನ ಸಂಪ್ರದಾಯ, ಇದನ್ನ ಕೇಳಲು ನೀನ್ ಯಾರು? ಸಿದ್ದರಾಮಯ್ಯ

ನಾಳೆ ನಿರ್ಮಲಾ ಸೀತಾರಾಮನ್​ ನಾಮಪತ್ರ ಸಲ್ಲಿಕೆ 

ರಾಜ್ಯಸಭೆಗೆ ಬಿಜೆಪಿಯಿಂದ ಎರಡನೇ ಬಾರಿ ಟಿಕೆಟ್ ಪಡೆದುಕೊಂಡ ನಿರ್ಮಲಾ ಸೀತಾರಾಮನ್ ಅಗತ್ಯ ದಾಖಲೆಗಳೊಂದಿಗೆ ರಾಜ್ಯಕ್ಕೆ ಆಗಮಿಸಿದ್ದು, ಬಿಜೆಪಿ ಕಚೇರಿಯಲ್ಲಿ ದಾಖಲೆಗಳ ವಿವರ ಪಡೆದುಕೊಂಡರು. ಕಚೇರಿಯಲ್ಲೇ ದಾಖಲೆಗಳ ಪರಿಶೀಲನೆ ನಡೆಸಲಾಯಿತು. ಎಲ್ಲ ದಾಖಲೆಗಳನ್ನು ಸಿದ್ದಪಡಿಸಿಕೊಂಡಿರುವ ನಿರ್ಮಲಾ ಸೀತಾರಾಮನ್ ನಾಳೆ ಬೆಳಗ್ಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಜೊತೆಗೆ ನಟ ಜಗ್ಗೇಶ್ ಕೂಡ ನಾಳೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಕಾಂಗ್ರೆಸ್​ನಿಂದ 2ನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿಖಾನ್ ನಾಮಪತ್ರ

ರಾಜ್ಯಸಭಾ ಚುನಾವಣೆ ಹಿನ್ನೆಲೆ ರಾಜಕೀಯ ಚಟುವಟಿಕೆ ಗರಿಗೆದರಿದೆ. ಕಾಂಗ್ರೆಸ್​ನಿಂದ ರಾಜ್ಯಸಭಾ ಮೊದಲನೇ ಅಭ್ಯರ್ಥಿಯಾಗಿ ಜೈರಾಮ್ ರಮೇಶ್, 2ನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿಖಾನ್ ನಾಮಪತ್ರ ಸಲ್ಲಿಕೆ ಮಾಡಿದರು. ವಿಧಾನಸೌಧದಲ್ಲಿ ವಿಧಾನಸಭೆ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿಯಾಗಿರುವ ಎಂ.ಕೆ ವಿಶಾಲಾಕ್ಷಿಗೆ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ,ಯು.ಟಿ.ಖಾದರ್, ಜಮೀರ್ ಅಹಮದ್ ಖಾನ್ ಉಪಸ್ಥಿತರಿದ್ದರು.

ಇದನ್ನೂ ಓದಿ:  Ayodhya Bus Accident: ಅಯೋಧ್ಯೆ ಬಸ್ ಅಪಘಾತದಲ್ಲಿ ಕನ್ನಡಿಗರ ಸಾವು; ಗಾಯಾಳುಗಳ ನೆರವಿಗೆ ಯೋಗಿ ಆದಿತ್ಯನಾಥ್​ಗೆ ಬೊಮ್ಮಾಯಿ ಮನವಿ

ನಾಳೆ ನಾಮಪತ್ರ ಸಲ್ಲಿಕೆಗೆ ಕೊನೇ ದಿನ
 ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 10ರಂದು ಚುನಾವಣೆ ನಡೆಯಲಿದ್ದು, ನಾಳೆ ನಾಮಪತ್ರ ಸಲ್ಲಿಕೆಗೆ ಕಡೆ ದಿನ. ಈಗಾಗಲೇ ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್ ಹಾಗೂ ಜಗ್ಗೇಶ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಕಾಂಗ್ರೆಸ್​ನಿಂದ ಜಯರಾಮ್ ರಮೇಶ್ ಅಭ್ಯರ್ಥಿ ಆಗಿದ್ದಾರೆ. ಈ ಮೂವರ ಗೆಲುವು ನಿಶ್ಚಿತವಾಗಿದ್ದು, ನಾಲ್ಕನೇ ಅಭ್ಯರ್ಥಿಯಾಗಿ ಕಾಂಗ್ರೆಸ್​ನಿಂದ ಮನ್ಸೂರ್ ಅಲಿಖಾನ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಸಹ ಕಣಕ್ಕಿಳಿಯುವ ಸಿದ್ಧತೆ ನಡೆಸಿದ್ದಾರೆ. ನಾಲ್ಕನೇ ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆ ಅನಿವಾರ್ಯವಾಗಿದೆ.
Published by:Pavana HS
First published: