ಬೆಂಗಳೂರು(ಜೂ. 09): ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾದ ಈರಣ್ಣ ಕಡಾಡಿ ಹಾಗೂ ಅಶೋಕ ಗಸ್ತಿ ಇಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಇದೇ ವೇಳೆ ನಾಲ್ಕನೇ ಅಭ್ಯರ್ಥಿಯಾಗಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಕೂಡ ನಾಮಪತ್ರ ಸಲ್ಲಿಸಿದ್ದಾರೆ.
ಇದಕ್ಕೂ ಮೊದಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಇಬ್ಬರು ಆಶೀರ್ವಾದ ಪಡೆದರು. ಬಳಿಕ ಅಶೋಕ ಗಸ್ತಿ ಹಾಗೂ ಈರಣ್ಣ ಕಡಾಡಿ ಬಿಜೆಪಿ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ನಳೀನ್ ಕುಮಾರ ಕಟೀಲರನ್ನು ಭೇಟಿ ಮಾಡಿದರು. ಬಳಿಕ ವಿಧಾನಸೌದಕ್ಕೆ ಮುಖಂಡರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಇದನ್ನೂ ಓದಿ :
ರಾಜ್ಯಸಭೆಗೆ ಬಿಜೆಪಿ ಹೈಕಮಾಂಡ್ ಅಚ್ಚರಿಯ ಆಯ್ಕೆ; ಅಶೋಕ್ ಗಸ್ತಿ, ಈರಣ್ಣ ಕಡಾಡಿ ಅಭ್ಯರ್ಥಿಗಳು!
ನಿನ್ನೆ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸಿದ್ದಾರೆ. ಒಟ್ಟು ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಆದರೆ, ಇಂದು ಮೂವರು ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿದ್ದಾರೆ. ನಾಲ್ಕು ಸ್ಥಾನಗಳಿಗೆ ನಾಲ್ಕು ಅಭ್ಯರ್ಥಿಗಳಿರುವುದರಿಂದ ಚುನಾವಣೆ ನಡೆಯುವುದು ಅನುಮಾನವಾಗಿದೆ. ಎಲ್ಲ ಅಭ್ಯರ್ಥಿಗಳು ಅವಿರೋಧವಾಗಿ ಅಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ