Raksha Ramaiah: ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಅವಿರೋಧ ಆಯ್ಕೆ ಸಾಧ್ಯತೆ

ಕರ್ನಾಟಕದ ಮಾಜಿ ಸಚಿವ ಎಂಆರ್​ ಸೀತಾರಾಮ್ ಅವರ ಮಗನಾಗಿರುವ 35 ವರ್ಷದ ರಕ್ಷಾ ರಾಮಯ್ಯ ಕರ್ನಾಟಕ ಯೂತ್​ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.

ರಕ್ಷಾ ರಾಮಯ್ಯ

ರಕ್ಷಾ ರಾಮಯ್ಯ

  • Share this:
ಬೆಂಗಳೂರು (ಜ. 10): ಕರ್ನಾಟಕ ಯುವ ಕಾಂಗ್ರೆಸ್ ಚುನಾವಣೆ ಇಂದಿನಿಂದ ಜನವರಿ 12ರವರೆಗೆ ನಡೆಯಲಿದೆ. ಈ ಚುನಾವಣೆಯಲ್ಲಿ ಕರ್ನಾಟಕ ಯುವ ಕಾಂಗ್ರೆಸ್​ ಅಧ್ಯಕ್ಷರಾಗಿ ಎಂ. ಎಸ್​. ರಕ್ಷಾ ರಾಮಯ್ಯ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ. ಬಸನಗೌಡ ಬಾದರ್ಲಿ ಅವರ ಅಧಿಕಾರಾವಧಿ ಮುಗಿದ ನಂತರ 2020 ಮಾರ್ಚ್​ ತಿಂಗಳಿನಿಂದಲೂ ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಖಾಲಿಯಿತ್ತು.

ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಬೇಕಾ? ಬೇಡವಾ? ಎಂಬ ಬಗ್ಗೆ ಅಖಿಲ ಭಾರತ ಕಾಂಗ್ರೆಸ್​ ಸಮಿತಿ (ಎಐಸಿಸಿ) ಗೊಂದಲದಲ್ಲಿತ್ತು. ಕರ್ನಾಟಕ ಯೂತ್​ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಕ್ಷಾ ರಾಮಯ್ಯ ಜೊತೆಗೆ ಮಿಥುನ್ ರೈ, ನಲಪಾಡ್ ಹ್ಯಾರೀಸ್ ಮತ್ತು ಹೆಚ್​.ಎಸ್. ಮಂಜುನಾಥ್ ಕೂಡ ಆಕಾಂಕ್ಷಿಗಳಾಗಿದ್ದರು. ಆದರೆ, ನಿನ್ನೆ ಸಂಜೆ ಮಿಥುನ್ ರೈ ತಮ್ಮ ನಾಮಪತ್ರವನ್ನು ವಾಪಾಸ್ ಪಡೆದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯದ ಕಾಂಗ್ರೆಸ್ ನಾಯಕರು ನಲಪಾಡ್ ಹ್ಯಾರೀಸ್ ಮತ್ತು ಮಂಜುನಾಥ್ ಅವರ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ. ಈ ಮೂಲಕ ರಕ್ಷಾ ರಾಮಯ್ಯ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲು ಯೋಚಿಸಲಾಗಿದೆ ಎಂದು ಇಂಡಿಯನ್ ಎಕ್ಸ್​ಪ್ರೆಸ್​ ವರದಿ ಮಾಡಿದೆ.

ಇದನ್ನೂ ಓದಿ: Plane Crash: ಇಂಡೋನೇಷ್ಯಾದಲ್ಲಿ 62 ಪ್ರಯಾಣಿಕರಿದ್ದ ವಿಮಾನ ಪತನ; ಸಮುದ್ರದಲ್ಲಿ ಅವಶೇಷಗಳು ಪತ್ತೆ

ಎನ್​ಎಸ್​ಯುಐ ಕರ್ನಾಟಕ ರಾಜ್ಯಾಧ್ಯಕ್ಷರಾಗಿರುವ ಹೆಚ್​ಎಸ್​ ಮಂಜುನಾಥ್ 2018ರಲ್ಲಿ ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಹೀಗಾಗಿ, ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮಂಜುನಾಥ್ ಆಯ್ಕೆಯಾಗುವುದು ರಾಜ್ಯ ಕಾಂಗ್ರೆಸ್ ನಾಯಕರಿಗೂ ಸಮಾಧಾನ ತಂದಿಲ್ಲ. ನಲಪಾಡ್​ ಪರವಾಗಿಯೂ ಹೆಚ್ಚಿನ ಕಾಂಗ್ರೆಸ್ ನಾಯಕರು ಒಲವು ತೋರುತ್ತಿಲ್ಲ ಎನ್ನಲಾಗಿದೆ. ಹೀಗಾಗಿ, ರಕ್ಷಾ ರಾಮಯ್ಯ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.

ಜನವರಿ 10, 11, 12 ರಂದು ನಡೆಯುವ Karnataka Pradesh Youth Congress ಚುನಾವಣೆಯಲ್ಲಿ ನಾನು ರಾಜ್ಯಾಧ್ಯಕ್ಷ ಸ್ಥಾನದ ಸ್ಪರ್ಧಿಯಾಗಿದ್ದು, ಯುವ...

Posted by Raksha Ramaiah S on Friday, January 8, 2021


ನಿನ್ನೆ ನಾಮಪತ್ರ ವಾಪಾಸ್ ಪಡೆದಿದ್ದ ಮಿಥುನ್ ರೈ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸೂಚನೆಯಂತೆ ನಾನು ಚುನಾವಣೆಯಿಂದ ಹಿಂದೆ ಸರಿದಿದ್ದೇನೆ ಎಂದು ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದರು. ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಬದಲಾಗಿ ಮಿಥುನ್ ರೈಗೆ 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವ ಭರವಸೆ ನೀಡಲಾಗಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ಕರ್ನಾಟಕದ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಎಂಆರ್​ ಸೀತಾರಾಮ್ ಅವರ ಮಗನಾಗಿರುವ 35 ವರ್ಷದ ರಕ್ಷಾ ರಾಮಯ್ಯ ಕರ್ನಾಟಕ ಯೂತ್​ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣಾ ಕಣದಲ್ಲಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಅವರು ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಕರ್ನಾಟಕ ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ 6.5 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ.
Published by:Sushma Chakre
First published: