ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆ - ರಾಜ್ಯದಲ್ಲಿ ಕಟ್ಟುನಿಟ್ಟಿನ ಭದ್ರತೆ ; ಎಡಿಜಿಪಿ ಅಮರ್ ಕುಮಾರ್ ಪಾಂಡೆ

ಭೂಮಿ ಪೂಜೆ ವೇಳೆ ರಾಜ್ಯದಲ್ಲಿ ಗಲಭೆ ಸೃಷ್ಟಿಸುವ ಸಂಭವಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಆದೇಶ ಹೊರಡಿಸಿದ್ದಾರೆ.

news18-kannada
Updated:August 2, 2020, 3:48 PM IST
ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆ - ರಾಜ್ಯದಲ್ಲಿ ಕಟ್ಟುನಿಟ್ಟಿನ ಭದ್ರತೆ ; ಎಡಿಜಿಪಿ ಅಮರ್ ಕುಮಾರ್ ಪಾಂಡೆ
ಎಡಿಜಿಪಿ ಅಮರ್ ಕುಮಾರ್ ಪಾಂಡೆ
  • Share this:
ಬೆಂಗಳೂರು(ಆಗಸ್ಟ್. 02): ಅಯೋಧ್ಯೆ ರಾಮಮಂದಿರ ನಿರ್ಮಾಣ ಭೂಮಿ ಪೂಜೆ ಕಾರ್ಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟುನಿಟ್ಟಿನ ಎಚ್ಚರಿಕೆ ವಹಿಸುವಂತೆ ರಾಜ್ಯದ ಎಲ್ಲ ಪೊಲೀಸ್ ಆಯುಕ್ತರು, ವಲಯ ಐಜಿಪಿಗಳು ಹಾಗೂ ಎಸ್ ಪಿಗಳಿಗೆ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಮರ್ ಕುಮಾರ್ ಪಾಂಡೆ ಸೂಚನೆ ನೀಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಸ್ಟ್ 5 ರಂದು ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯ ನೆರವೇರಿಸಲಿದ್ದಾರೆ. ಅಯೋಧ್ಯೆ ರಾಮ ಮಂದಿರ ನಿರ್ಮಾಣ ವಿಚಾರ ಅತಿ ಸೂಕ್ಷ್ಮವಾಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಸಾರ್ವಜನಿಕರ ಶಾಂತಿ ಕಾಪಾಡುವ ಸಲುವಾಗಿ ಹೆಚ್ಚಿನ ಕಟ್ಟೇಚ್ಚರ ವಹಿಸಲು ಸೂಚಿಸಲಾಗಿದೆ.

ರಾಜ್ಯದ ಎಲ್ಲ ಪೊಲೀಸ್ ಆಯುಕ್ತರು, ವಲಯ ಐಜಿಪಿಗಳು ಹಾಗೂ ಎಸ್ ಪಿ ಗಳಿಗೆ ಎಡಿಜಿಪಿ ಅಮರ್ ಕುಮಾರ್ ಪಾಂಡೆಯವರು ಸೂಚನೆ ರವಾನಿಸಿದ್ದಾರೆ. ಭೂಮಿ ಪೂಜೆ ವೇಳೆ ರಾಜ್ಯದಲ್ಲಿ ಗಲಭೆ ಸೃಷ್ಟಿಸುವ ಸಂಭವಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಆದೇಶ ಹೊರಡಿಸಿದ್ದಾರೆ. ಅಲ್ಲದೇ ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಿ ಸಾರ್ವಜನಿಕರ ಶಾಂತಿ ‌ಕಾಪಾಡುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ : ಅಡಿಕೆ ಬೆಳೆಗಾರರಿಗೆ ಕಾಡುತ್ತಿದೆ ಕೊಳೆರೋಗ ಬಾಧೆ ; ಪರಿಹಾರಕ್ಕಾಗಿ ಎದುರು ನೋಡುತ್ತಿರುವ ಮಲೆನಾಡಿನ ರೈತ

ಇನ್ನೂ ಭೂಮಿ ಪೂಜೆ ದಿನ ಕೆಲ ಮತೀಯ ಸಂಘಟನೆಗಳು, ಸಿಎಎ ಹಾಗೂ ಎನ್ ಆರ್ ಸಿ ಹೋರಾಟಗಾರರು ಅಡಚಣೆ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಎಲ್ಲೆಡೆ ತೀವ್ರ ನಿಗಾ ವಹಿಸಲು ಆಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜೊತೆಗೆ ಕೈಗೊಳ್ಳಬೇಕಾದ ಭದ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಅಧಿಕಾರಿಗಳ ಸಭೆ ಕರೆದಿದ್ದಾರೆ.

ನಾಳೆ ಬೆಳಿಗ್ಗೆ 11.30 ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಹಿರಿಯ ಆಧಿಕಾರಿಗಳ ಜೊತೆ ಚರ್ಚೆ ನಡೆಸಲು ಎಡಿಜಿಪಿ ಅಮರ್ ಕುಮಾರ್ ಪಾ‌ಂಡೆ ಮುಂದಾಗಿದ್ದಾರೆ.
Published by: G Hareeshkumar
First published: August 2, 2020, 3:44 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading