HOME » NEWS » State » RAM MANDIR MAY THE SHRINE BE SYMBOLIC OF ALL THE PHILOSOPHIES OF LORD RAMA SAYS HD KUMARASWAMY

Ram Mandir: ಎಲ್ಲರ ಮನದಲ್ಲಿ ನೆಲೆಸಿರುವ ರಾಮನ ಎಲ್ಲ ತತ್ವಾದರ್ಶಗಳಿಗೆ ಮಂದಿರವು ಸಂಕೇತವಾಗಲಿ; ಎಚ್​ಡಿ ಕುಮಾರಸ್ವಾಮಿ

HD Kumaraswamy: ರಾಮಮಂದಿರ ನಿರ್ಮಾಣ ಸಾಂಸ್ಕೃತಿಕ ಪರಂಪರೆಯ ಬೆಸುಗೆ ಹಾಗೂ ರಾಷ್ಟ್ರೀಯ ಏಕತೆಯ ಪ್ರತಿಬಿಂಬವಾಗಲಿ ಎಂಬ ಆಶಯ ನನ್ನದು. ಜೈ ಶ್ರೀರಾಮ ಎಂದು ಎಚ್​ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.

news18-kannada
Updated:August 5, 2020, 11:54 AM IST
Ram Mandir: ಎಲ್ಲರ ಮನದಲ್ಲಿ ನೆಲೆಸಿರುವ ರಾಮನ ಎಲ್ಲ ತತ್ವಾದರ್ಶಗಳಿಗೆ ಮಂದಿರವು ಸಂಕೇತವಾಗಲಿ; ಎಚ್​ಡಿ ಕುಮಾರಸ್ವಾಮಿ
ಎಚ್​.ಡಿ. ಕುಮಾರಸ್ವಾಮಿ
  • Share this:
ಬೆಂಗಳೂರು; ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ನನಸಾಗಲು ಇಂದು ಕಾಲ ಕೂಡಿಬಂದಿದೆ. ಇದು ನಮ್ಮೆಲ್ಲರ ಸಂತೋಷದ ಘಳಿಗೆ. ಅದಕ್ಕೂ ಮಿಗಿಲಾಗಿ ಇದು ಭಾವನಾತ್ಮಕ ಸನ್ನಿವೇಶವೆಂಬುದು ನನ್ನ ಅನಿಸಿಕೆ ಎಂದು ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ. ಎಲ್ಲರ ಹೃನ್ಮನಗಳಲ್ಲಿ ನೆಲೆಸಿರುವ ರಾಮನ ಎಲ್ಲ ತತ್ವಾದರ್ಶಗಳಿಗೆ ಮಂದಿರವು ಸಂಕೇತವಾಗಲಿ. ಭಾರತದ ಹೆಗ್ಗುರುತಾಗಲಿ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ರಾಮನ ಜನಪರ ಕಾಳಜಿ ಹಾಗೂ ಹೃದಯ ವೈಶಾಲ್ಯ ಈಗಿನ ನಮ್ಮ ಜನಪ್ರತಿನಿಧಿಗಳಿಗೆ ಮೇರು ಪ್ರೇರಣೆಯಾಗಲಿ. ಅಯೋಧ್ಯೆಯಲ್ಲಿ ಮಂದಿರವೊಂದನ್ನು ಕಟ್ಟಿಕೊಳ್ಳಲು ಭಾರತೀಯರಾದ ನಾವು ಕಾನೂನಾತ್ಮಕ ಹೋರಾಟ ನಡೆಸಬೇಕಾಗಿದೆ‌. ಆದರೆ ಅದು ಕೆಲವರಿಗೆ ರಾಜಕೀಯ ದಾಳವಾಗಿದ್ದು, ಅಧಿಕಾರಕ್ಕೇರಲು ಏಣಿಯಾಗಿದ್ದು ನಮ್ಮ ಕೆಟ್ಟ ಘಳಿಗೆಗಳಲ್ಲಿ ಒಂದು. ರಾಮನ ಆದರ್ಶಗಳಿಗೆ ಈ ದೇಗುಲವು ಸಾಮರಸ್ಯದ ಸಂಕೇತವಾಗಿ ಉಳಿಯಲಿ‌. ಈ ಮೂಲಕ ಸ್ವಾರ್ಥ ನಶಿಸಲಿ. ಎಲ್ಲರಿಗೂ ಶುಭ ತರಲಿ ಎಂದು ಆಶಿಸಿದ್ದಾರೆ.

ರಾಮಮಂದಿರ ನಿರ್ಮಾಣ ಸಾಂಸ್ಕೃತಿಕ ಪರಂಪರೆಯ ಬೆಸುಗೆ ಹಾಗೂ ರಾಷ್ಟ್ರೀಯ ಏಕತೆಯ ಪ್ರತಿಬಿಂಬವಾಗಲಿ ಎಂಬ ಆಶಯ ನನ್ನದು. ಜೈ ಶ್ರೀರಾಮ ಎಂದು ಎಚ್​ಡಿಕೆ ಅವರು ಟ್ವೀಟ್ ಮಾಡಿದ್ದಾರೆ.Youtube Video

ದಶಕಗಳ ಹಿಂದಿನ ರಾಮ ಜನ್ಮಭೂಮಿ ವಿವಾದಕ್ಕೆ ತೆರೆ ಬಿದ್ದಿದೆ. ಈ ಬೆನ್ನಲ್ಲೀಗ ಇಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಲಿದೆ. ಈ ಭೂಮಿ ಪೂಜೆ ಕಾರ್ಯಕ್ರಮವನ್ನು ದೇಶದ ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ. ಹಾಗೆಯೇ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಜತೆಗೆ ವಿವಿಧ ಕ್ಷೇತ್ರಗಳ 175 ಮಂದಿ ಗಣ್ಯರು ಭಾಗವಹಿಸಲಿದ್ದಾರೆ.
Published by: HR Ramesh
First published: August 5, 2020, 11:50 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories