ರಾಮನಗರ: ಈ ಬಾರಿ ಮಗನಿಗಾಗಿ ಶಾಸಕಿ ಅನಿತಾ ಕುಮಾರಸ್ವಾಮಿ (Anita Kumaraswamy) ವಿಧಾನಸಭಾ ಕ್ಷೇತ್ರವನ್ನು ತ್ಯಾಗ ಮಾಡಿದ್ದರು. ಇದೀಗ ಮಗನಿಗಾಗಿ ತಾಯಿ ಮಾಡಿದ ತ್ಯಾಗ ಫಲಿಸಿಲ್ಲ. ರಾಮನಗರ ವಿಧಾನಸಭಾ ಕ್ಷೇತ್ರದಿಂದ (Ramanagar Constituency) ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ದಳಪತಿಯ ಕುಡಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸೋತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಗೆಲುವು ದಾಖಲಿಸಿದ್ದಾರೆ. ಬಿಜೆಪಿಯಿಂದ ಗೌತಮ್ ಗೌಡ ಸ್ಪರ್ಧಿಸಿದ್ದರು
ಲೋಕಸಭಾ ಚುನಾವಣೆಗೆ (Loksabha Constituency) ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ ಸೋತಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಸುಮಲತಾ ಅಂಬರೀಶ್ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿದ್ದರು.
2018ರಲ್ಲಿ ಹೆಚ್ ಡಿ ಕುಮಾರಸ್ವಾಮಿ ಚನ್ನಪಟ್ಟಣ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಎರಡರಲ್ಲೂ ಗೆದ್ದಿದ್ದರು.
ನಂತರ ರಾಮನಗರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಉಪ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಜೆಡಿಎಸ್ನಿಂದ ಸ್ಪರ್ಧಿಸಿ ಶಾಸಕರಾಗಿದ ಆಯ್ಕೆಯಾಗಿದ್ದರು. ಇದೀಗ ಅನಿತಾ ಕುಮಾರಸ್ವಾಮಿ ಪುತ್ರ ನಿಖಿಲ್ಗೆ ತ್ಯಾಗ ಮಾಡಿದ್ದರು.
ಇದನ್ನೂ ಓದಿ: Jagadish Shettar: ಬಿಜೆಪಿ ಜೊತೆಗಿನ 4 ದಶಕಗಳ ಸಂಬಂಧ ಕಡಿದುಕೊಂಡಿದ್ದ ಮಾಜಿ ಸಿಎಂಗೆ ಹೀನಾಯ ಸೋಲು
ಈ ಬಾರಿ ಗರಿಷ್ಠ ಮತದಾನ
ಚುನಾವಣಾ ಆಯೋಗ ಹಂಚಿಕೊಂಡಿರುವ ಮಾಹಿತಿ ಪ್ರಕಾರ ಇಡೀ ರಾಜ್ಯದಲ್ಲಿ ಇರುವ 5,30,85,566 ಮತದಾರರ ಪೈಕಿ ಶೇ.72.67 ರಷ್ಟು ಮತದಾನವಾಗಿದೆ. ಅಂದರೆ ರಾಜ್ಯದ ಮತದಾರರ ಪೈಕಿ ಒಟ್ಟು 3.85 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಈ ಬಾರಿ ಮತದಾನದಲ್ಲಿ 66 ವರ್ಷಗಳ ನಂತರ ಗರಿಷ್ಠ ಮತದಾನ ಆಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಇದನ್ನೂ ಓದಿ: ಕರ್ನಾಟಕ ಚುನಾವಣಾ ಫಲಿತಾಂಶ 2023 LIVE: ಕಾಂಗ್ರೆಸ್ ‘ಗ್ಯಾರಂಟಿ’ಗೆ ಜನಸಾಮಾನ್ಯರ ಬಹುಪರಾಕ್, ವೋಟ್ ಓಟದಲ್ಲಿ ಕೈ ಮುನ್ನಡೆ
ಅತ್ಯಧಿಕ ಮತ್ತು ಕಡಿಮೆ ಮತದಾನ ಎಲ್ಲಿ?
ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ರಾಜ್ಯದ ಅತಿ ಹೆಚ್ಚು ಮತದಾನವಾಗಿದೆ. ಅಲ್ಲಿ ಶೇ.90.93ರಷ್ಟು ಮತದಾನವಾಗಿದ್ದು, ಬೆಂಗಳೂರಿನ ಹೊರವಲಯದಲ್ಲಿರುವ ಹೊಸಕೋಟೆಯಲ್ಲಿ ಶೇ.90.9ರಷ್ಟು ಮತದಾನವಾಗಿದೆ.
ಬೆಂಗಳೂರಿನ ಸರ್ ಸಿವಿ ರಾಮನ್ ಕ್ಷೇತ್ರದಲ್ಲಿ ಶೇಕಡಾ 42.1 ರಷ್ಟು ಮತದಾನವಾಗಿದ್ದು, ರಾಜ್ಯದಲ್ಲಿ ಅತ್ಯಂತ ಕಡಿಮೆ ಮತದಾನವಾದ ಕ್ಷೇತ್ರವಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ