Bhagavad Gita: ಭಗವದ್ಗೀತೆ ಜನರ ಹೊಟ್ಟೆ ತುಂಬಿಸಲ್ಲ, ಬಿಜೆಪಿ ನಾಯಕರಿಗೆ HDK ಟಾಂಗ್ 

ಶಾಲಾ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್‌ಡಿಕೆ ಸರ್ಕಾರದ ಮುಂದೆ ಟನ್ ಗಟ್ಟಲೇ ಸಮಸ್ಯೆಗಳು ಇದ್ದಾವೆ. ಮೊದಲು ಅವುಗಳನ್ನ ಸರಿಪಡಿಸಲಿ  ಭಗವದ್ಗೀತೆ ಪಾಠ ಮಾಡಿದರೆ ಅದರಿಂದ ಹೊಟ್ಟೆ ತುಂಬುತ್ತದೋ ಎಂದು ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ನೀತಿ ವಿರುದ್ಧ ಮಾಜಿ ಸಿಎಂ ಹೆಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದರು.

ಹೆಚ್ ಡಿ ಕುಮಾರಸ್ವಾಮಿ

ಹೆಚ್ ಡಿ ಕುಮಾರಸ್ವಾಮಿ

  • Share this:
ರಾಮನಗರ(ಮಾ.20): ದೇಶದಲ್ಲಿ ಭಾವನಾತ್ಮಕವಾಗಿ ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ (BJP) ಹಾಗೂ ಕಾಂಗ್ರೆಸ್ (Congress) ಪಕ್ಷಗಳು ಮತ ಗಳಿಸಲು ಹೊರಟಿವೆ ಹೊರತು ಈ ಎರಡು ಪಕ್ಷಗಳಿಗೆ ಜನ ಸತ್ತರೇನು, ಹಸಿವಾದರೇನು, ಮಕ್ಕಳಿಗೆ ವಿದ್ಯಾಭ್ಯಾಸ ಇಲ್ಲದಿದ್ದರೇನು ಅದ್ಯಾವುದು ಚಿಂತೆ ಇಲ್ಲವೆಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ರಾಷ್ಟ್ರೀಯ ಪಕ್ಷಗಳ ನೀತಿ ವಿರುದ್ಧ ಕಿಡಿಕಾರಿದಲ್ಲದೇ ಅಧಿಕಾರಕ್ಕಾಗಿ ಅಮಾಯಕರನ್ನ ಭಾವನಾತ್ಮಕವಾಗಿ ದಾರಿ ತಪ್ಪಿಸುತ್ತಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ವಿರುದ್ದ ಜನರು ಎಚ್ಚೆತ್ತುಕೊಳ್ಳಬೇಕಿದೆ ಎಂದು ಮಾಜಿ ಸಿಎಂ ಹೆಚ್‌ಡಿಕೆ ಚನ್ನಪಟ್ಟಣದಲ್ಲಿ ತಿಳಿಸಿದ್ದಾರೆ.ಚನ್ನಪಟ್ಟಣದ ಕದರಮಂಗಲ ಗ್ರಾಮದ ಕಂಬದ ನರಸಿಂಹಸ್ವಾಮಿ ದೇವಸ್ಥಾನಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ಪಾರ್ಥನೆ ಸಲ್ಲಿಸಿದ್ದಾರೆ.

ಇನ್ನು ಶಾಲಾ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್‌ಡಿಕೆ ಸರ್ಕಾರದ ಮುಂದೆ ಟನ್ ಗಟ್ಟಲೇ ಸಮಸ್ಯೆಗಳು ಇದ್ದಾವೆ. ಮೊದಲು ಅವುಗಳನ್ನ ಸರಿಪಡಿಸಲಿ  ಭಗವದ್ಗೀತೆ ಪಾಠ ಮಾಡಿದರೆ ಅದರಿಂದ ಹೊಟ್ಟೆ ತುಂಬುತ್ತದೋ ಎಂದು ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ನೀತಿ ವಿರುದ್ಧ ಮಾಜಿ ಸಿಎಂ ಹೆಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದರು.

ಸಮಸ್ಯೆ ಬಗ್ಗೆ ಯೋಚಿಸಲ್ಲ

ಬಿಜೆಪಿಯ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಜನರ ಸಮಸ್ಯೆಗಳ ಬಗ್ಗೆ ಅರಿವಿಲ್ಲ. ವಿರೋಧ ಪಕ್ಷವಾದ ಕಾಂಗ್ರೆಸ್ ಕೂಡ ಸರ್ಕಾರದ ನಿಲುವುಗಳ ಬಗ್ಗೆ ಪ್ರಶ್ನೆ ಮಾಡದೇ ಒಂದು ಸಮುದಾಯದ ಓಲೈಕೆ ರಾಜಕಾರಣ ಮಾಡ್ತಾ ಇದ್ದಾರೆ. ಇನ್ನು ರಾಜ್ಯದಲ್ಲಿ ಹಲವು ಸಮಸ್ಯೆಗಳಯ ತಾಂಡವ ಆಡುತ್ತಿದ್ದು ಈ ಕುರಿತು ಯೋಚಿಸದೆ ಭಾವನಾತ್ಮಕವಾಗಿ ವಿಚಾರಗಳಿಗೆ ಆದ್ಯತೆ ನೀಡ್ತಾ ಇದ್ದಾರೆ ಎಂದಿದ್ದಾರೆ.

ರಾಷ್ಟ್ರೀಯ ಪಕ್ಷಗಳ ನೀಚ ರಾಜಕಾರಣದ ವಿರುದ್ಧ ಎಚ್ಚೆತ್ತುಕೊಳ್ಳುವಂತೆ ಕರೆ

ಇಂತಹ ವಿಚಾರಧಾರೆಗಳಿಂದ ಜನ ಸತ್ತರೇನು ಇವರಿಗೆ ಚಿಂತೆಯಿಲ್ಲ, ಅಲ್ಲದೇ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾದ್ರೆ ಏನು ಗತಿ ಎಂಬುದರ ಕಡೆ ಕಿಂಚಿತ ಗಮನ ನೀಡದೇ ಅಧಿಕಾರಕ್ಕಾಗಿ ಅಮಾಯಕರನ್ನ ಭಾವನಾತ್ಮಕವಾಗಿ ದಾರಿ ತಪ್ಪಿಸುತ್ತಿದ್ದಾರೆ. ರಾಜ್ಯದ ಜನರಿಗೆ ಎರಡು ರಾಷ್ಟ್ರೀಯ ಪಕ್ಷಗಳ ನೀಚ ರಾಜಕಾರಣದ ವಿರುದ್ಧ ಎಚ್ಚೆತ್ತುಕೊಳ್ಳುವಂತೆ ಮಾಜಿ ಸಿಎಂ ಹೆಚ್‌ಡಿಕೆ ಅವರು ಸಲಹೆ ನೀಡಿದರು.

ಪರಿಹಾರ ನೀಡುವ ಕಾರ್ಯವಾಗಬೇಕು

ಇನ್ನು ಇವತ್ತು ರಾಜ್ಯದಲ್ಲಿ ಮೂರು ಕಡೆ ಅವಘಡಗಳಾಗಿವೆ, ತುಮಕೂರಿನ ಪಾವಗಡದಲ್ಲಿ ಬಸ್ ಅನಾಹುತವಾಗಿದೆ. ಆಕ್ಸಿಡೆಂಟ್ ನಲ್ಲಿ ಎಂಟತ್ತು ಮಂದಿ ಸಾವಿಗೀಡಾಗಿದ್ದಾರೆ. ಬಡ ಮಂದಿ ಬಸ್ ಅವಘಡದಲ್ಲಿ ಸಾವಿಗೀಡಾಗಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡು ಚಿಂತಾಜನಕವಾಗಿದ್ದಾರೆ. ಸರ್ಕಾರ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಕಳುಹಿಸಬೇಕು. ಸಾರಿಗೆ ಸಚಿವರು ಹಾಗೂ ಸರ್ಕಾರ ಮಾಹಿತಿ ಪಡೆಯಬೇಕು. ಕೂಡಲೇ ಮಾಹಿತಿ ಪಡೆದು ಪರಿಹಾರ ನೀಡುವ ಕಾರ್ಯವಾಗಬೇಕು ಎಂದಿದ್ದಾರೆ.

ನೆರವಿಗೆ ಮುಂದಾಗಲಿ

ಪಾವಗಡ ಅತ್ಯಂತ ಬರಗಾಲ ಇರುವ ತಾಲೂಕು ಬಸ್ ಅವಘಡದಲ್ಲಿ ಕೂಲಿನಾಲಿ ಮಾಡುವ ಜನರಿದ್ದರೆ ಹೆಚ್ಚಿನ ಪರಿಹಾರ ನೀಡಬೇಕು‌. ಹೆಚ್ಚಿನ ಪರಿಹಾರ ನೀಡಬೇಕಾದುದು ರಾಜ್ಯ ಸರ್ಕಾರದ ಕರ್ತವ್ಯ, ಉಡುಪಿ ಹಾಗೂ ಬಳ್ಳಾರಿಯಲ್ಲಿ ಆಕ್ಸಿಜನ್ ಪ್ಲ್ಯಾಂಟ್ ಅವಘಡವಾಗಿದೆ.  ಅಲ್ಲಿ ಸ್ಥಳ ಪರಿಶೀಲನೆ ಮಾಡಿ ಹೆಚ್ಚಿನ ಅವಘಡ ನಡೆಯದಂತೆ ಎಚ್ಚರಿಕೆ ವಹಿಸಬೇಕಿದೆ. ಈ  ಅನಾಹುತದಲ್ಲಿ ನೊಂದವರಿಗೆ‌ ನೆರವು ಸಿಗಬೇಕು.  ನೆರವಿಗೆ ಮುಂದಾಗಲಿ ಎಂದು ಸರ್ಕಾರಕ್ಕೆ ಹೇಳಬಯಸುತ್ತೇನೆಂದರು.‌

ಇದನ್ನೂ ಓದಿ: Bhagavad Gita Teaching: ಶಾಲಾ ಕಾಲೇಜುಗಳಲ್ಲಿ ಅಗತ್ಯವಾಗಿ ಭಗವದ್ಗೀತೆ ಬೋಧಿಸಬೇಕು: ಸಂಸದ ಪ್ರತಾಪ್ ಸಿಂಹ

ಇನ್ನು ಬಸ್ ಅವಘಡದಲ್ಲಿ ಯಾರ ತಪ್ಪಿದೆ ಪರಿಶೀಲನೆ ನಡೆಯಬೇಕು. ಮೆಕಾನಿಕಲ್ ಸಮಸ್ಯೆ ಇನ್ನಿತರೆ ಕಾರಣವೋ ಪರಿಶೀಲಿಸಲಿ.‌ಅಲ್ಲಿ ವಿದ್ಯಾರ್ಥಿಗಳೇ ಸಾವಿಗೀಡಾಗಿದ್ದಾರೆ, ಇಲ್ಲಿ ಪ್ರಶ್ನೆ ಸರ್ಕಾರದ ಸಾರಿಗೆ ವ್ಯವಸ್ಥೆಯಲ್ಲಿ ಪರಿಸ್ಥಿತಿ ಸಾರಿಗೆ ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ.‌

ಸಾರಿಗೆ ಲಾಭದಲ್ಲಿತ್ತು

ನಾನು 2006ರಲ್ಲಿ ಸಿಎಂ ಆಗಿದ್ದಾಗ ಸಾರಿಗೆ ಲಾಭದಲ್ಲಿತ್ತು. ನಂತರದ ದಿನಗಳಲ್ಲಿ ಸಾರಿಗೆ ವ್ಯವಸ್ಥೆ ಹದಗೆಟ್ಟಿದೆ. ಕಳೆದ 10 ವರ್ಷಗಳಲ್ಲಿ ಏನೆಲ್ಲಾ ಅನಾಹುತವಾಗಿದೆ ಚರ್ಚೆ ಮಾಡಲು ಹೋಗಲ್ಲ. ಸರ್ಕಾರ ಉತ್ತಮ ದರ್ಜೆಯ ಸಾರಿಗೆ ಸೌಲಭ್ಯ ಕಲ್ಲಿಸಬೇಕಿದೆ. ಆವಾಗ ಈ ರೀತಿಯ ಅನಾಹುತ ಘಟನೆಗಳ ನಡೆಯುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: Bhagavad Gita Teaching: ಭಗವದ್ಗೀತೆ, ಕುರಾನ್, ಬೈಬಲ್​ಗೆ ವಿರೋಧವಿಲ್ಲ-ಸಿದ್ದು, ಕುಮಾರಸ್ವಾಮಿ ಅಪಸ್ವರ, ಕೊರೊನಾಗಿಂತ ಮಾರಕ-ತನ್ವೀರ್

ಸಾರ್ವಜನಿಕರು, ವಿದ್ಯಾರ್ಥಿಗಳು ಸಿಕ್ಕ ಸಿಕ್ಕ ಬಸ್ ಏರಲ್ಲ. ಸಾರಿಗೆ ವ್ಯವಸ್ಥೆ ಉತ್ತಮವಾಗಿದಲ್ಲಿ ಇಂತಹ ಅನಾಹುತ ನಡೆಯಲ್ಲ. ಕೋವಿಡ್ ಬಳಿಕ ಸಾರಿಗೆ ಇಲಾಖೆ ಕೆಟ್ಟ ಪರಿಸ್ಥಿತಿ ಎದುರಿಸುತ್ತಿದೆ. ಸಾರಿಗೆ ನೌಕರರು, ಹಾಗೂ ಪ್ರಯಾಣಿಕರಿಗೆ ಕೆಟ್ಟ ಪರಿಸ್ಥಿತಿ ಎದುರಿಸುತ್ತಿದ್ದಾರೆ.  ಯಾರೋ ಪ್ರತಿಭಟನೆ ಮಾಡಿಸಿ ಸಾರಿಗೆ ನೌಕರರನ್ನ ಬೀದಿಪಾಲ ಮಾಡಿದರು. ಈಗ ಸಾರಿಗೆ ನೌಕರರು ಇದೀಗ ಕಣ್ಣೀರು ಹಾಕುತ್ತಿದ್ದಾರೆ.  ಸರ್ಕಾರಕ್ಕೆ ನನ್ನ ಸಲಹೆ ಯಾರೋ ಮಾಡಿದ ತಪ್ಪಿಗೆ ಇನ್ಯಾರೋ ಶಿಕ್ಷೆ ಅನುಭವಿಸಬಾರದು. ಯಾರೋ ಮಾಡಿದ ತಪ್ಪಿಗೆ ಸಾರ್ವಜನಿಕರು ಅನಾನುಕೂಲ ಆಗದಂತೆ ಸರ್ಕಾರ ಕ್ರಮ ಕೈಗೊಳ್ಳಲಿ ಎಂದರು.
Published by:Divya D
First published: