• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Janata Parva 1.0; ಜೆಡಿಎಸ್ ಮುಗಿಸಲು ಸಿದ್ದರಾಮಯ್ಯ ಅಲ್ಲ ಯಾರಿಂದಲೂ ಸಾಧ್ಯವಿಲ್ಲ: ಎಚ್.ಡಿ. ದೇವೇಗೌಡರ ಗುಡುಗು

Janata Parva 1.0; ಜೆಡಿಎಸ್ ಮುಗಿಸಲು ಸಿದ್ದರಾಮಯ್ಯ ಅಲ್ಲ ಯಾರಿಂದಲೂ ಸಾಧ್ಯವಿಲ್ಲ: ಎಚ್.ಡಿ. ದೇವೇಗೌಡರ ಗುಡುಗು

2021ರಲ್ಲಿ ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿತ್ತು. ಚಿಕಿತ್ಸೆ ಬಳಿಕ ದೇವೇಗೌಡರು ಗುಣಮುಖರಾಗಿದ್ದರು. ಈ ಹಿಂದೆ ಪುತ್ರ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರೂ ಸಹ ಕೊರೊನಾ ಸೋಂಕಿಗೆ ತುತ್ತಾಗಿದ್ದರು.

2021ರಲ್ಲಿ ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿತ್ತು. ಚಿಕಿತ್ಸೆ ಬಳಿಕ ದೇವೇಗೌಡರು ಗುಣಮುಖರಾಗಿದ್ದರು. ಈ ಹಿಂದೆ ಪುತ್ರ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರೂ ಸಹ ಕೊರೊನಾ ಸೋಂಕಿಗೆ ತುತ್ತಾಗಿದ್ದರು.

ಧರ್ಮಸಿಂಗ್ ಸರಕಾರ ಇದ್ದಾಗಲೂ ಪಕ್ಷವನ್ನು ಒಡೆಯುವ ಪ್ರಯತ್ನ ನಡೆಯಿತು. ಪಕ್ಷವನ್ನು ಉಳಿಸಿಕೊಳ್ಳುವ ಉದ್ದೇಶದಿಂದ ಬಿಜೆಪಿ ಜತೆ ಕೈ ಜೋಡಿಸಿ ಸರಕಾರ ರಚನೆ ಮಾಡಲಾಯಿತು. ಆದರೆ, ಆ ಪಕ್ಷಕ್ಕೆ ತನ್ನ ಹಿಡನ್ ಅಜೆಂಡಾವನ್ನು ಜಾರಿ ಮಾಡಲು ನಾವು ಅವಕಾಶ ನೀಡಲಿಲ್ಲ ಎಂದು ಹೇಳಿದರು.

  • Share this:

ಬೆಂಗಳೂರು: ರಾಜ್ಯದ ಜನರ ಉಸಿರಿನಲ್ಲಿ ಉಸಿರಾಗಿರುವ ಜೆಡಿಎಸ್ (JDS) ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯ ಅವರಿಂದ ಮಾತ್ರವಲ್ಲ ಯಾರಿಂದಲೂ ಸಾಧ್ಯವಿಲ್ಲ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ಮಾಜಿ ಪ್ರಧಾನಮಂತ್ರಿಗಳ ಹೆಚ್.ಡಿ.ದೇವೇಗೌಡರು (HD Devegowda) ಹೇಳಿದರು. 2023ಕ್ಕೆ ಜಾತ್ಯತೀತ ಜನತಾದಳದ ಹಾಗೂ ಹೆಚ್.ಡಿ.ಕುಮಾರಸ್ವಾಮಿ ನಾಯಕತ್ವದ ಜನತಾ ಸರಕಾರ ರಚನೆ ಮಾಡುವ ಗುರಿಯೊಂದಿಗೆ ಬಿಡದಿ ಫಾರ್ಮ್ ಹೌಸ್ ನಲ್ಲಿ ಆರಂಭವಾದ 4 ದಿನಗಳ 'ಜನತಾ ಪರ್ವ 1.O'  (Janata Parva 1.0) ಕಾರ್ಯಗಾರವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು. 


ಅಪಪ್ರಚಾರ ಮಾಡುವುದಕ್ಕೂ ಒಂದು ಮಿತಿ ಬೇಡವೇ. ತಾವು ನಾಯಕರಾಗಿ ಬಂದಿದ್ದು ಎಲ್ಲಿಂದ, ಬೆಳೆದದ್ದು ಎಲ್ಲಿ? ಎಂಬುದನ್ನು ಅರಿತು ಮಾತನಾಡಬೇಕು. ಅವರ ಜತೆ ಇವರ ಜತೆ ಹೋಗುವ ಪಕ್ಷ ಎಂದು ದೂರುವ ಮುನ್ನ ಸಮ್ಮಿಶ್ರ ಸರಕಾರ ರಚನೆ ಮಾಡುವುದಕ್ಕೆ ಯಾರು ಯಾರ ನಮ್ಮ ಮನೆ ಬಾಗಿಲಿಗೆ ಬಂದರು ಎನ್ನುವುದು ನನಗೆ, ನಿಮಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ- ದೇಶಕ್ಕೆ ಗೊತ್ತಿದೆ ಎಂದು ಹೇಳಿದರು.


ಅಪಮಾನಗಳನ್ನು ಸಹಿಸಿದ್ದೇನೆ, ಎದುರಿಸಿದ್ದೇನೆ. ಅಪಾರ ಕಾರ್ಯಕರ್ತರ ಜತೆ ಅಂತ ಎಲ್ಲ ನೋವುಗಳನ್ನು ನುಂಗಿದ್ದೇನೆ ಎಂದ ಗೌಡರು, ನಮ್ಮನ್ನು ನೋಡಿ ಅಪಹಾಸ್ಯ ಮಾಡುವವರಿಗೆ 2023 ರಲ್ಲೀ ಉತ್ತರ ನೀಡೋಣ ಎಂದರು.


ಹೈಟೆಕ್ ಕಾರ್ಯಗಾರ , ಹೊಸತನಕ್ಕೆ ಮುನ್ನುಡಿ:


ಇರುವುದು ಒಂದೇ ಪರಿಹಾರ, ಪ್ರಾದೇಶಿಕ ಪಕ್ಷಕ್ಕೆ ಅಧಿಕಾರ ಎನ್ನುವ ಘೋಷವಾಕ್ಯ ಹಾಗೂ 2023ಕ್ಕೇ ಜೆಡಿಎಸ್ ಎನ್ನುವ ಗುರಿಯೊಂದಿಗೆ ಆರಂಭವಾದ ಕಾರ್ಯಾಗಾರವೂ ಕರ್ನಾಟಕ ರಾಜಕೀಯದಲ್ಲಿ ಅತ್ಯಂತ ವಿಶೇಷ. ಪಕ್ಷದ ಗುರಿ ಮತ್ತು ದಾರಿಯ ಬಗ್ಗೆ ಸ್ಪಷ್ಟತೆ ಮೂಡಿಸುವುದರ ಜತೆಗೆ, ಮುಂದಿನ ಚುನಾವಣೆಯಲ್ಲಿ ಕಣಕ್ಕೆ ಇಳಿಯಲಿರುವ ಅಭ್ಯರ್ಥಿಗಳಿಗೆ ನಿರ್ದಿಷ್ಟ ಗುರಿಗಳನ್ನು ನಿಗದಿ ಮಾಡಲಾಗುವುದು. ಅದಕ್ಕೆ ಅಗತ್ಯವಾದ ತರಬೇತಿಯನ್ನು ಕೊಡಲಾಗುವುದು  ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.


ಮಿಷನ್ 123 ಎಂಬ ಗುರಿಯೊಂದಿಗೆ ನಾವು ತಯಾರಿ ಆರಂಭ ಮಾಡಿದ್ದೇವೆ. ಈ ಗುರಿ ತಲುಪಲು ನಾವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇವೆ. ಸಮರ್ಥರಾದ ಅಭ್ಯರ್ಥಿಗಳನ್ನು ಮಾತ್ರ ಕಣಕ್ಕೆ ಇಳಿಸುತ್ತೇವೆ. ನಮ್ಮನ್ನು ಹಗುರವಾಗಿ ಕಾಣುವ ಕೆಲವರಿಗೆ ತಕ್ಕ ಉತ್ತರ ನೀಡುತ್ತೇವೆ. 30 ಸೀಟುಗಳ ಪಕ್ಷ ಎಂದು ಜೆಡಿಎಸ್ ಪಕ್ಷವನ್ನು ಲಘುವಾಗಿ ಪರಿಗಣಿಸುವವರಿಗೆ ಮುಂದೆ ಶಕ್ತಿ ಏನೆಂಬುದನ್ನು ತೋರಿಸುತ್ತೇವೆ ಎಂದು ಗುಡುಗಿದರು.


ಜೆಡಿಎಸ್ 30 ಸೀಟಿನ ಪಕ್ಷವಲ್ಲ. ಹಾಗೆಂದು ಹಾದಿ ಬೀದಿಯಲ್ಲಿ ಹೇಳಿಕೊಂಡು ಓಡಾಡುತ್ತಿರುವ ಸಿದ್ದರಾಮಯ್ಯರಂಥ ನಾಯಕರಿಗೆ ಉತ್ತರ ಕೊಡುವ ಕಾಲ ದೂರವಿಲ್ಲ. 30 ಸೀಟಿನ ಪಕ್ಷ ಎಂದವರು ರಾಜಕೀಯವಾಗಿ ಮೂರಾಬಟ್ಟೆ ಆಗುವುದು ಗ್ಯಾರಂಟಿ. ಕಾಂಗ್ರೆಸ್ ನಮ್ಮ ಜೆಡಿಎಸ್ ಬೆನ್ನಿಗೆ ಇರಿಯುವ ಕೆಲಸ ಮಾಡಿದೆ. ಸಮ್ಮಿಶ್ರ ಸರಕಾರ ರಚನೆಯಾದ ಮೇಲೆಯೂ ನಮ್ಮ ಪಕ್ಷವನ್ನು ಮುಗಿಸಲು ಆ ಪಕ್ಷದ ಕೆಲ ನಾಯಕರು ದುಷ್ಪ್ರಯತ್ನ ನಡೆಸಿದರು. ಅದು ಫಲಕಾರಿ ಆಗದಿದ್ದಾಗ ಸರಕಾರವನ್ನು ಬೀಳಿಸಿದರು.  ಧರ್ಮಸಿಂಗ್ ಸರಕಾರ ಇದ್ದಾಗಲೂ ಪಕ್ಷವನ್ನು ಒಡೆಯುವ ಪ್ರಯತ್ನ ನಡೆಯಿತು. ಪಕ್ಷವನ್ನು ಉಳಿಸಿಕೊಳ್ಳುವ ಉದ್ದೇಶದಿಂದ ಬಿಜೆಪಿ ಜತೆ ಕೈ ಜೋಡಿಸಿ ಸರಕಾರ ರಚನೆ ಮಾಡಲಾಯಿತು. ಆದರೆ, ಆ ಪಕ್ಷಕ್ಕೆ ತನ್ನ ಹಿಡನ್ ಅಜೆಂಡಾವನ್ನು ಜಾರಿ ಮಾಡಲು ನಾವು ಅವಕಾಶ ನೀಡಲಿಲ್ಲ ಎಂದು ಹೇಳಿದರು.


ಇದನ್ನು ಓದಿ: Rakesh Tikait| ರೈತರ ಹೋರಾಟ 10 ತಿಂಗಳಲ್ಲ 10 ವರ್ಷವಾದರೂ ಮುಂದುವರೆಯುತ್ತದೆ; ರೈತ ಮುಖಂಡ ರಾಕೇಶ್ ಟಿಕಾಯತ್


ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ವೇದಿಕೆಯಲ್ಲಿದ್ದರು. ಇಡೀ ವೇಳೆ ಮಾಜಿ ಶಾಸಕ ವೈಎಸ್​ವಿ ದತ್ತ ಅವರು ' ಪಕ್ಷ ಸಂಘಟನೆ ಹಾಗೂ ಪಕ್ಷದ ಪರಂಪರೆ ' ಎಂಬ ವಿಷಯದ ಬಗ್ಗೆ ಮಾತನಾಡಿದರು.ಪಕ್ಷದ ಹಾಲಿ ಶಾಸಕರು, ಮಾಜಿ ಶಾಸಕರು, ಹಿಂದಿನ ಚುನಾವಣೆಯಲ್ಲಿ ಪರಾಜಿತರಾಗಿದ್ದ ಅಭ್ಯರ್ಥಿಗಳು, ಮಾಜಿ ಸಚಿವರು ಸೇರಿದಂತೆ 200ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿಯಾಗಿದ್ದರು.


ಸಭೆಯ ಮುಖ್ಯಾಂಶಗಳು


* ಪಕ್ಷದ ದ್ವಜಾರೋಹಣ ನೆರವೇರಿಸಿದ ದೇವೇಗೌಡರು
* ಸಾಮಾನ್ಯ ಕಾರ್ಯಕರ್ತರ ಹಾಗೆ ನೋಂದಣಿ ಮಾಡಿಸಿಕೊಂಡ ಹೆಚ್.ಡಿ. ಕುಮಾರಸ್ವಾಮಿ
* ನಾಯಕನ ಹಾದಿಯಲ್ಲೇ ನೋಂದಣಿ ಮಾಡಿಸಿಕೊಂಡ ಶಾಸಕರು
* ಹಸಿರುಮಯ ವೇದಿಕೆಗೆ ಹೈಟೆಕ್ ಸ್ಪರ್ಶ, ಜನತಾ ಪರಿವಾರದ ಇತಿಹಾಸ ಹೇಳುವ ಚಿತ್ರಗಳ ಅನಾವರಣ
* ಪಕ್ಷದ ಟವೆಲ್ ಧರಿಸಿದ ಮುಖಂಡರಿಂದ ಸಕ್ರಿಯ ಭಾಗಿ

Published by:HR Ramesh
First published: