ಸಿಎಂ ಸ್ಥಾನದಿಂದ ಕೆಳಗಿಳಿಯುವ ಮೊದಲೂ ಯಡಿಯೂರಪ್ಪ ಲೂಟಿಗೆ ಇಳಿದಿದ್ದಾರಾ: ಕುಮಾರಸ್ವಾಮಿ ಪ್ರಶ್ನೆ!

ದುಡ್ಡು ಹೊಡೆಯುವ ಯೋಜನೆ ನಿಮ್ಮದು. 2 ದಿನದಲ್ಲಿ ಸಿಎಂ‌ ಬದಲಾಗುವುದಾದರೆ ತರಾತುರಿಯಲ್ಲಿ 12ಸಾವಿರ ಕೋಟಿ ಯೋಜನೆ ಯಾಕೆ? ಅವರಿಗೆ ದರದ್ ಏನಿದೆ, ಯಾವ ಕಾರಣಕ್ಕಾಗಿ ಈ ತೀರ್ಮಾನ.? ಈಗಲೂ ದುಡ್ಡು ಹೊಡೆಯಲಿಕ್ಕಾ, ರಾಜ್ಯದ ತೆರಿಗೆ ಹಣ ಲೂಟಿ ಮಾಡಲಿಕ್ಕಾ?

ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ.

ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ.

  • Share this:
ರಾಮನಗರ: ಸಿಎಂ ಬಿ.ಎಸ್​.ಯಡಿಯೂರಪ್ಪ ಬದಲಾವಣೆ ಸಂಬಂಧ ನಡೆಯುತ್ತಿರುವ ರಾಜಕೀಯದ ಬಗ್ಗೆ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು. ಕಳೆದ ಎರಡು ದಿನಗಳಿಂದ ಈ ಚಟುವಟಿಕೆ ನಡೆಯುತ್ತಿದೆ. ರಾಜ್ಯದಲ್ಲಿ ಇದೊಂದು ಹೊಸ ಬೆಳವಣಿಗೆ ಪ್ರಾರಂಭವಾಗಿದೆ ಆದರೆ ರಾಜಕೀಯದಲ್ಲಿ ಈ ಬೆಳವಣಿಗೆ ಸರಿಯಲ್ಲ ಎಂದು ಚನ್ನಪಟ್ಟಣದಲ್ಲಿ ಮಾತನಾಡಿದ ಎಚ್​ಡಿಕೆ ಆಕ್ಷೇಪ ವ್ಯಕ್ತಪಡಿಸಿದರು. ಮಠಾಧೀಶರು ಯಡಿಯೂರಪ್ಪ ಮುಂದುವರೆಯಲಿ ಎಂದು ಅಭಿಪ್ರಾಯಪಟ್ಟಿದ್ದಾರೆ, ಅದರ ಬಗ್ಗೆ ಬಿಜೆಪಿ ಪಕ್ಷದವರು ನಿರ್ಧಾರ ಮಾಡ್ತಾರೆ. ಈ ಬೆಳವಣಿಗೆಯ ಬಗ್ಗೆ ಮುಂದೆ ರಾಜ್ಯದ ಜನರು ನಿರ್ಧಾರ ಮಾಡ್ತಾರೆ  ಆದರೆ ಇದರಲ್ಲಿ ನಮಗೆ ಯಾವ ಲಾಭವೂ ಬೇಡ, ಬೆಂದ ಮನೆಯಲ್ಲಿ ಗಳ ಇರಿಯುವ ಕೆಲಸ ಮಾಡಲ್ಲ ಎಂದರು.

ಸಿಎಂ ತರಾತುರಿಯಲ್ಲಿ ಸಾವಿರಾರು ಕೋಟಿಗಳ ಯೋಜನೆಗೆ ಅನುಮತಿ ನೀಡ್ತಿದ್ದಾರೆ. ನೀರಾವರಿ ಇಲಾಖೆಯ 4 ನಿಗಮಗಳಲ್ಲಿ 12 ಸಾವಿರ ಕೋಟಿ ಯೋಜನೆಗೆ ಅನುಮತಿ ನೀಡ್ತಿದ್ದಾರೆ. 12 ಸಾವಿರ ಕೋಟಿ ಯೋಜನೆಯಲ್ಲಿ ಕಾವೇರಿ ನಿಗಮಕ್ಕೆ ಕೇವಲ 1 ಸಾವಿರ ಕೋಟಿ. ಸರ್ಕಾರಕ್ಕೆ ಹೆಚ್ಚಿನ ತೆರಿಗೆ ಹಳೇ ಕರ್ನಾಟಕ ಭಾಗದಿಂದ ಹೋಗುತ್ತಿದೆ. ನನಗೆ ಹಳೇ ಕರ್ನಾಟಕ ಹೊಸ ಕರ್ನಾಟಕದ ಪ್ರಶ್ನೆ ಅಲ್ಲ. ಆ ಭಾಗಕ್ಕೆ ನೀಡುವ ಆದ್ಯತೆಯನ್ನ ಈ ಭಾಗಕ್ಕೂ ನೀಡಿ. ಇಲ್ಲಿನ ಜ‌ನ ನಿಮಗೇನು ದ್ರೋಹ ಮಾಡಿದ್ದಾರೆ? ಈ ಭಾಗಕ್ಕೆ 1ಸಾವಿರ ಕೋಟಿ ಆ ಭಾಗಕ್ಕೆ 11ಸಾವಿರ ಕೋಟಿ ಯೋಜನೆ. ನಿಜವಾಗಲೂ ಆ ಭಾಗದ ಜನರಿಗೆ ನೀರು ಕೊಡಲು ಯೋಜನೆ ರೂಪಿಸಿದ್ದೀರಾ.? ದುಡ್ಡು ಹೊಡೆಯುವ ಯೋಜನೆ ನಿಮ್ಮದು. 2 ದಿನದಲ್ಲಿ ಸಿಎಂ‌ ಬದಲಾಗುವುದಾದರೆ ತರಾತುರಿಯಲ್ಲಿ 12ಸಾವಿರ ಕೋಟಿ ಯೋಜನೆ ಯಾಕೆ? ಅವರಿಗೆ ದರದ್ ಏನಿದೆ, ಯಾವ ಕಾರಣಕ್ಕಾಗಿ ಈ ತೀರ್ಮಾನ.? ಈಗಲೂ ದುಡ್ಡು ಹೊಡೆಯಲಿಕ್ಕಾ, ರಾಜ್ಯದ ತೆರಿಗೆ ಹಣ ಲೂಟಿ ಮಾಡಲಿಕ್ಕಾ ಎಂದು ಸಿಎಂ ಬಿಎಸ್‌ವೈ‌ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದರು.

ಮೈತ್ರಿ ಸರ್ಕಾರ ಕೆಡವಿ ಬಂದವರಿಗೆ ಹೇಳಲು ಬಯಸುತ್ತೇನೆ, ಈಗ ರಾಜ್ಯದಲ್ಲಿ ಇರುವ ಸಂಕಷ್ಟಕ್ಕೆ ಪರಿಹಾರ ನೀಡಿ . ರಾಜ್ಯದ ಜನರ ಪರವಾಗಿ ಕೆಲಸ ಮಾಡಿ ಎಂದರು. ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಿಂಗಾಯಿತ ಸಮುದಾಯದವರ ಆಯ್ಕೆ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ,  ಸಮುದಾಯದ ಹೆಸರಿನಲ್ಲಿ ಮತಗಳನ್ನ ಸೆಳೆಯುವ ಪ್ರಯತ್ನ‌ ನಡೆಯುತ್ತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: ಯಡಿಯೂರಪ್ಪ ರಾಜೀನಾಮೆ ಫಿಕ್ಸ್‌..? ಜುಲೈ 25 ರಂದು ಹೈಕಮಾಂಡ್‌ನಿಂದ ಬರುವ ಸಂದೇಶಕ್ಕಾಗಿ ಕಾಯುತ್ತಿರುವ ಸಿಎಂ..!

ರಾಷ್ಟ್ರೀಯ ಪಕ್ಷಗಳಲ್ಲಿ ಈ ಬೆಳವಣಿಗೆ ನಡೆಯುತ್ತಿದೆ, ಮುಂದೆ ರಾಜ್ಯದ ಜನರು ಈ ಬಗ್ಗೆ ನಿರ್ಧಾರ ಮಾಡ್ತಾರೆ. ಯಡಿಯೂರಪ್ಪ ನವರ 2 ವರ್ಷದ ಸಾಧನೆ ಬಗ್ಗೆ ನಾನು ಹೇಳಲ್ಲ. ನಾನು ಅವರಿಗೆ ಮಾರ್ಕ್ಸ್ ಕೊಡಲು ಲೆಕ್ಚರರ್ ಅಲ್ಲ. ನನಗೆ ಸಂಬಂಧಿಸಿದ ವಿಷಯ ಅಲ್ಲ, ಅದು ಬಿಜೆಪಿ ಆಂತರಿಕ ವಿಚಾರ‌. ಅವರ ಪಕ್ಷದ ನಿರ್ಧಾರದಲ್ಲಿ ನಾನು ಮೂಗು ತೂರಿಸುವುದು ಶೋಭೆ ತರುವುದಿಲ್ಲ ಎಂದರು.

ಇನ್ನು ಬಿಎಸ್‌ವೈಗೆ ಮಠಾಧೀಶರ ಬೆಂಬಲ ವಿಚಾರಕ್ಕೆ ನಾನು ಮಹತ್ವ ಕೊಡುವುದಿಲ್ಲ. ಒಬ್ಬೊಬ್ಬರಲ್ಲಿ ಒಂದೊಂದು ಭಾವನೆ ಇದೆ, ಅವರ ಭಾವನೆ ವ್ಯಕ್ತಪಡಿಸಿದ್ದಾರೆ. ಅವರ ಭಾವನೆ ಸರಿಯೋ ತಪ್ಪೋ ನಿರ್ಧಾರ ಜನರದ್ದು. ಬಿಜೆಪಿಯಲ್ಲಿ ಸಿಎಂ ಬದಲಾವಣೆ ವಿಚಾರ 2 ವರ್ಷಗಳಿಂದ ನಡೆಯುತ್ತಿದೆ. ಸದ್ಯ ಜನರು ಹಲವಾರು ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ. ಇಂತಹ ವಿಷಯಗಳಿಗೆ ನಿಮ್ಮ ಸಮಯ ವ್ಯರ್ಥ ಮಾಡಬೇಡಿ. ಆದಷ್ಟು ಬೇಗ ಈ ವಾತಾವರಣ ತಿಳಿಗೊಳಿಸಿ ಉತ್ತಮ ಆಡಳಿತ ನೀಡಿ ಎಂದು ಬಿಜೆಪಿ ಹೈಕಮಾಂಡ್‌ಗೆ ಸಲಹೆ ನೀಡಿದರು.
Published by:Kavya V
First published: