HDK: ರೆಬೆಲ್ ಸ್ಟಾರ್ ಎದುರು ಕೈಕಟ್ಟಿ ನಿಂತ ಕುಮಾರಣ್ಣ, 'ಹುಲಿ ಮುಂದೆ ಇಲಿ' ಎಂದ ಫ್ಯಾನ್ಸ್, ನಾ ಎಲ್ಲಾ ಕಡೆ ಹೀಗೇ ಎಂದ ಎಚ್ಡಿಕೆ !

HDK vs Sumalatha Ambareesh: ಇದರ ನಡುವೆ ಒಂದು ಹಳೆಯ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಿ ಟ್ರೋಲ್ ಆಗ್ತಿದೆ. ಈ ಚಿತ್ರದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ಜೊತೆಗೆ ಕೆಲವು ಆಪ್ತರು ಇದ್ದು ಎದುರಿನಲ್ಲಿ ನಿಂತಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕೈಕಟ್ಟಿಕೊಂಡು ನಿಂತಿದ್ದಾರೆ. ಈ ಚಿತ್ರ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಯಲ್ಲಿದೆ.

ಕುಮಾರಸ್ವಾಮಿ, ಸುಮಲತಾ ಅಂಬರೀಶ್

ಕುಮಾರಸ್ವಾಮಿ, ಸುಮಲತಾ ಅಂಬರೀಶ್

  • Share this:
HDK vs ಸುಮಲತಾ ಅಂಬರೀಶ್ ಈಗ ಕೆಲ ದಿನಗಳಿಂದ ನಡೆಯುತ್ತಿರುವ ಟಗ್ ಆಫ್ ವಾರ್ ಅಲ್ಲ. ಮಂಡ್ಯ ಲೋಕಸಭಾ ಚುನಾವಣೆಯ ಸಂದರ್ಭದಿಂದಲೇ ಭುಗಿಲೆದ್ದ ಈ ವೈಮನಸ್ಯ ಈಗ ರಾಜಾರೋಷವಾಗಿ ಎದ್ದು ಕಾಣುತ್ತಿದೆ. ಆಗಿನ ಸಂದರ್ಭದಲ್ಲಿ ಸುಮಲತಾ ಹೆಚ್ಚು ಪ್ರತಿಕ್ರಿಯಿಸುತ್ತಿರಲಿಲ್ಲ. ಆದರೆ ಈಗ ಇರುವ ಪರಿಸ್ಥಿತಿಯೇ ಬೇರೆಯಾಗಿದೆ. ಎರಡೂ ಬಣಗಳ ಅಭಿಮಾನಿಗಳು ಕೂಡಾ ಶತ್ರುಗಳೆಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ವಾದ ವಿವಾದ ನಡೆಸುತ್ತಿದ್ದಾರೆ. ಇದರ ನಡುವೆ ಒಂದು ಹಳೆಯ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಿ ಟ್ರೋಲ್ ಆಗ್ತಿದೆ. ಈ ಚಿತ್ರದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ಜೊತೆಗೆ ಕೆಲವು ಆಪ್ತರು ಇದ್ದು ಎದುರಿನಲ್ಲಿ ನಿಂತಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕೈಕಟ್ಟಿಕೊಂಡು ನಿಂತಿದ್ದಾರೆ. ಈ ಚಿತ್ರ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಯಲ್ಲಿದೆ.

ಎಚ್ಡಿಕೆ ಮತ್ತು ಸುಮಲತಾ ನಡುವಿನ ವಾಕ್ಸಮರ ಕೆ ಆರ್ ಎಸ್ ಡ್ಯಾಂ, ಮನ್ಮುಲ್ ಪ್ರಕರಣವನ್ನೂ ಮೀರಿ ಮುಂದಿನ ಚುನಾವಣೆಯಲ್ಲಿ ಸುಮಲತಾರನ್ನು ತಾನು ಖಂಡಿತಾ ಸೋಲಿಸುವ ಶಪಥ ಮಾಡುವ ತನಕ ಮುಂದುವರೆದಿದೆ...ಇನ್ನೂ ಮುಂದುವರೆಯುತ್ತಲೇ ಇದೆ. ಈ ನಡುವೆ ಹೊಸಾ ಚಿತ್ರವೂ ಸೇರಿಕೊಂಡು ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಎಚ್ ಡಿ ಕುಮಾರಸ್ವಾಮಿ ಮೊದಲು ಚಿತ್ರ ನಿರ್ಮಾಪಕರಾಗಿದ್ದವರು. ಬಹುಶಃ ಈ ಚಿತ್ರ ಯಾವುದೋ ಸಿನಿಮಾ ಶೂಟಿಂಗ್ ಅಥವಾ ಅಂಥಾ ವಿಚಾರಕ್ಕೆ ಸಂಬಂಧಿಸಿದ್ದೇ ಆಗಿರಬೇಕು ಎನ್ನಲಾಗುತ್ತಿದೆ.ಇದನ್ನೂ ಓದಿ: HDK: ಮಂಡ್ಯದಿಂದಲೇ ರಾಜಕೀಯ ಆರಂಭಿಸುತ್ತೇನೆ, ಅಲ್ಲೇ ಸುಮಲತಾರನ್ನು ಸೋಲಿಸುತ್ತೇನೆ: ಎಚ್ಡಿಕೆ ಶಪಥ

ರೆಬೆಲ್ ಸ್ಟಾರ್ ಅಂಬಿ ಫ್ಯಾನ್ ಕ್ಲಬ್ ಫೇಸ್​ಬುಕ್​ನಲ್ಲಿ ಹಂಚಿಕೊಂಡಿರುವ ಈ ಚಿತ್ರದಲ್ಲಿ ಅಂಬರೀಶ್ ಜೊತೆ ರಾಕ್​ಲೈನ್ ವೆಂಕಟೇಶ್, ನಟ ದೇವರಾಜ್, ನಿರ್ಮಾಪಕ ರಾಕ್​ಲೈನ್ ವೆಂಕಟೇಶ್, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಕೂಡಾ ಇದ್ದಾರೆ. ಸದ್ಯ ಭಾರೀ ಚರ್ಚೆಯಲ್ಲಿರುವ ಈ ಚಿತ್ರದ ವಿಚಾರವಾಗಿ ಮಾಜಿ ಸಿಎಂ ಎಚ್ಡಿಕೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸಾರ್ವಜನಿಕರ ಮುಂದೆ ಕೂಡ ಕೈಕಟ್ಟಿ ನಿಲ್ಲೇನೆ.. ಹಾಗಂತ ಅಂಬರೀಶ್ ಗೆ ನಾನೇನು ಗುಲಾಮನಾಗಿದ್ದೆನಾ ? ಈ ವಿಷಯಕ್ಕೆ ಮಾಧ್ಯಮದವರು ಹೆಚ್ಚಿನ ಮನ್ನಣೆ ಕೊಡುವ ಅವಶ್ಯಕತೆ ಇಲ್ಲ. ನಾನು ಕಳೆದ ಎರಡು ದಿನದ ಹಿಂದೆ ಹೇಳಿದ್ದ ಹೇಳಿಕೆಗೆ ಸ್ಕೋಪ್ ಕೊಡುವ ಅವಶ್ಯಕತೆ ಇಲ್ಲ. ದೇಶದಲ್ಲಿ ಹಾಗೂ ರಾಜ್ಯದಲ್ಲಿ ಅನೇಕ ಸಮಸ್ಯೆಗಳಿಗೆ ಅದರ ಬಗ್ಗೆ ಗಮನಹರಿಸಬೇಕು ಎಂದು ಬಿಡದಿಯಲ್ಲಿ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: HDK-BSY: ಮಾಜಿ ಸಿಎಂ ಕುಮಾರಸ್ವಾಮಿ- ಸಿಎಂ ಯಡಿಯೂರಪ್ಪ ಭೇಟಿ ಅಸಲಿಯತ್ತು ಇದೇನಾ?

ಇನ್ನು ಭ್ರಷ್ಟಾಚಾರದ ವಿಷಯದಲ್ಲಿ ಕುಮಾರಸ್ವಾಮಿ ಅಂಬಾಸಿಡರ್ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಎಚ್ಡಿಕೆ "ಹೌದು, ನಾನು ಭ್ರಷ್ಟಾಚಾರದಲ್ಲಿ ಅಂಬಾಸಿಡರ್. ಅನೇಕ ವರ್ಷಗಳಿಂದ ನಾನು ನಮ್ಮ ಕುಟುಂಬ ಭ್ರಷ್ಟಾಚಾರದ ವಿಷಯದಲ್ಲಿ ಹೋರಾಟ ಮಾಡ್ತಿದ್ದೇವೆ. ಭ್ರಷ್ಟ ಅಧಿಕಾರಿಗಳು, ಭ್ರಷ್ಟಾಚಾರದ ವಿರುದ್ದ ದಾಖಲೆ ಸಮೇತ ಹೋರಾಟ ಮಾಡಿದ್ದೇವೆ ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ ಬಗ್ಗೆ ಮಂಡ್ಯ ಸಂಸದೆ ಸುಮಲತಾ ಹೇಳಿಕೆ ವಿಚಾರವಾಗಿ ಪ್ರಶ್ನಿಸಿದಾಗ ಎಚ್ಡಿಕೆ ಸುಮಲತಾ ಬಗ್ಗೆ ಗೌರವ ತೋರಿ ಮಾತನಾಡಿದ್ದಾರೆ. ಆ ಹೆಣ್ಣು ಮಗಳ ಬಗ್ಗೆ ಇದೀಗ ಚರ್ಚೆ ಬೇಡ, ಮುಂದಿನ ಚುನಾವಣೆ ಸಂದರ್ಭದಲ್ಲಿ ನಾನು ಮಾತಾಡ್ತೇನೆ ಎಂದು ಹೇಳಿದ್ದಾರೆ.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕು. ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆ. ಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು.
Published by:Soumya KN
First published: