ರಾಮನಗರ: ಮೇಕೆದಾಟು ಯೋಜನೆಗೆ (Mekedatu Project) ಆಗ್ರಹಿಸಿ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಂಗಮದ ಬಳಿಯಿಂದ ವಿಧಾನಸೌಧದವರೆಗೆ ರೈತ ಸಂಘಟನೆ (Farmers Union) ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಆಶ್ರಯದಲ್ಲಿ ಪಾದಯಾತ್ರೆ ಹಮ್ಮಿಕೊಂಡಿವೆ. ಯೋಜನೆ ಅನುಷ್ಟಾನಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಗಮನ ಸೆಳೆಯುವ ಉದ್ದೇಶ ಮತ್ತು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪಾದಯಾತ್ರೆಗೆ ಮುಂದಾಗಿದ್ದಾರೆ. ಇದಕ್ಕೆ ಹಲವು ಮಠಾಧೀಶರು ಕೂಡ ಬೆಂಬಲ ವ್ಯಕ್ತಪಡಿಸಿ ಮೇಕೆದಾಟು ಯೋಜನೆ ನಮ್ಮ ಹಕ್ಕು ಎಂದು ಧ್ವನಿಗೂಡಿಸಿದ್ದಾರೆ.
ಮೇಕೆದಾಟು ಯೋಜನೆ ಕಾರ್ಯರೂಪಕ್ಕೆ ಬರುವವರೆಗೆ ಇಂತಹ ಹೋರಾಟಗಳು ನಿರಂತರವಾಗಿರುತ್ತವೆ. ಸರ್ಕಾರ ಕಾನೂನು ತೊಡಕುಗಳನ್ನು ಶೀಘ್ರವಾಗಿ ಬಗೆಹರಿಸಿಕೊಳ್ಳಬೇಕು. ಪ್ರತಿ ಜೀವಿಗೂ ಕುಡಿಯುವ ನೀರಿನ ಹಕ್ಕಿದೆ. ಬರದ ಬೇಗೆಯಲ್ಲಿ ಬೇಯುತ್ತಿರುವ ಬಯಲು ಸೀಮೆಯ ಹಲವು ಜಿಲ್ಲೆಗಳಿಗೆ ಕಾವೇರಿ ನೀರನ್ನು ಸದ್ಭಳಕೆ ಮಾಡಿಕೊಳ್ಳಲು ಸರ್ಕಾರ ಮುಂದಾಗಬೇಕಿದೆ ಎಂದು ಆದಿಚುಂಚನಗಿರಿ ರಾಮನಗರ ಶಾಖಾ ಮಠದ ಅನ್ನದಾನೇಶ್ವರ ಸ್ವಾಮೀಜಿ ಆಗ್ರಹಿಸಿದರು.
ಜೊತೆಗೆ ಮೇಕೆದಾಟಲ್ಲಿ ಅಣೆಕಟ್ಟು ನಿರ್ಮಿಸಬೇಕು ಎನ್ನುವುದು ಈ ಭಾಗದ ರೈತರ ಹಕ್ಕೊತ್ತಾಯವಾಗಿದೆ. ಬೇಡಿಕೆ ಈಡೇರಿಕೆಗೆ ಹಾಗೂ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ 5 ದಿನಗಳ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ. ಯೋಜನೆ ಜಾರಿಗೆ ರಾಜಕೀಯ ನಾಯಕರಿಗೆ ಇಚ್ಛಾಶಕ್ತಿಯ ಕೊರತೆ ಇದೆ. ಅಲ್ಲದೆ, ಇದಕ್ಕೆ ಸಂಬಂಧಿಸಿದಂತೆ ನಿರ್ಧಾರಗಳನ್ನು ಆಮೆಗತಿಯಲ್ಲಿ ತೆಗೆದುಕೊಳ್ಳುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಯೋಜನೆ ಶೀಘ್ರವಾಗಿ ಆಗಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಅನ್ನದಾನೇಶ್ವರ ಸ್ವಾಮೀಜಿ ಎಚ್ಚರಿಕೆ ನೀಡಿದರು.
ಇದನ್ನು ಓದಿ: Shivamogga: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು: ಕೇಂದ್ರದ ಅನುಮತಿ ಪಡೆಯಲು ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ
ಇನ್ನು ಮೇಕೆದಾಟು ಯೋಜನೆಗೆ ಒತ್ತಾಯಿಸಿ ರೈತರು ರಾಮನಗರ ಜಿಲ್ಲೆಯ ಕನಕಪುರದ ಮೇಕೆದಾಟಿಂದ ಪಾದಯಾತ್ರೆ ಕೈಗೊಂಡಿದ್ದು ಸಂಸದ ಡಿ.ಕೆ.ಸುರೇಶ್ ರೈತರ ಪಾದಯಾತ್ರೆಯಲ್ಲಿ ಭಾಗಿಯಾಗಿ ಬೆಂಬಲ ಸೂಚಿಸಿದರು. ಕನಕಪುರದ ಮೇಕೆದಾಟಿನಿಂದ ವಿಧಾನಸೌಧದವರೆಗೆ ಪಾದಯಾತ್ರೆ ನಡೆಯಲಿದ್ದು ಒಟ್ಟು5 ದಿನಗಳ ಕಾಲ ನಡೆಯಲಿದೆ. ಈ ಸಂದರ್ಭದಲ್ಲಿ ಸುರೇಶ್ ಮಾತನಾಡಿ, ಈ ಯೋಜನೆಗೆ ಸುಪ್ರೀಂ ಕೋರ್ಟ್ ಆದೇಶ ಇದೇ. ಅಣೆಕಟ್ಟು ಕಟ್ಟಬಹುದು, ಆದರೆ ತಮಿಳುನಾಡಿಗೆ ಕೊಡಬೇಕಾದ ನೀರನ್ನ ಕೊಡಿ ಎಂದು ಆದೇಶ ನೀಡಿದೆ. ಯೋಜನೆಯಿಂದ ರಾಜ್ಯಕ್ಕೆ ಬಹಳಷ್ಟು ಅನುಕೂಲ ಇದೇ. ಇದರಿಂದಾಗಿ 400 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಬಹುದು. 60 ಟಿಎಂಸಿ ಹೆಚ್ಚುವರಿ ನೀರನ್ನ ಶೇಖರಣೆ ಮಾಡಬಹುದು. ನಮ್ಮ ಭಾಗದ ರೈತರಿಗೆ ಸಾಕಷ್ಟು ಅನುಕೂಲ ಇದೇ. ಕುಡಿಯುವ ನೀರು ನಮಗೆ ಸಿಗಲಿದೆ, ಆದರೆ ಈ ವಿಚಾರವಾಗಿ ಕೇಂದ್ರ ಸ್ಪಷ್ಟ ನಿರ್ಧಾರ ತಿಳಿಸಬೇಕು. ಪ್ರಧಾನಮಂತ್ರಿಗಳು ಸ್ಪಷ್ಟ ನಿಲುವನ್ನ ಹೇಳಬೇಕು. ಚುನಾವಣೆಗಳು ಬಂದಾಗ ಮಾತನಾಡ್ತಾರೆ. ಆದರೆ ಈಗ ಯಾವುದೇ ಚುನಾವಣೆ ಇಲ್ಲ. ಹಾಗಾಗಿ ಯೋಜನೆಯ ವಿಚಾರವಾಗಿ ತೀರ್ಮಾನ ಮಾಡಬೇಕು. ಇಲ್ಲವಾದರೆ ರಾಜ್ಯದ ಜನರಿಗೆ ದೊಡ್ಡ ಮೋಸ ಮಾಡಿದಂತೆ ಆಗುತ್ತೆ. ಬಿಜೆಪಿಯವರು ಯೋಜನೆ ಮಾಡಲಿ, ಅವರಿಗೆ ಹೆಸರು ಬರಲಿ, ಒಟ್ಟಾರೆ ಯೋಜನೆ ಪ್ರಾರಂಭ ಮಾಡಲಿ ಎಂದು ಸಂಸದ ಡಿ.ಕೆ.ಸುರೇಶ್ ಪಾದಯಾತ್ರೆಯಲ್ಲಿ ಭಾಗಿಯಾಗಿ ಹೇಳಿಕೆ ನೀಡಿದರು.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಅನಗತ್ಯವಾಗಿ ಯಾರೂ ಮನೆಯಿಂದ ಹೊರಗೆ ಬಾರದೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ. ಹಾಗೂ ಗುಂಪುಗೂಡುವುದನ್ನು ಆದಷ್ಟು ನಿಯಂತ್ರಿಸಬೇಕಿದೆ. ಸರ್ಕಾರ ಕಾಲಕಾಲಕ್ಕೆ ಹೊರಡಿಸುತ್ತಿರುವ ಕೊರೋನಾ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಬೇಕಿದೆ.
ವರದಿ : ಎ.ಟಿ.ವೆಂಕಟೇಶ್
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ