ನವದೆಹಲಿ (ಸೆಪ್ಟೆಂಬರ್ 16): ಮೇಕೆದಾಟು ಯೋಜನೆಗೆ ಕೂಡಲೇ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸುವಂತೆ ರಾಜ್ಯದ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದ್ದಾರೆ. ನವದೆಹಲಿಯ ಜಲಶಕ್ತಿ ಮಂತ್ರಾಲಯದಲ್ಲಿ ನಡೆದ ಭೇಟಿಯ ವೇಳೆ ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನ ಕುರಿತು ಕೇಂದ್ರ ಸಚಿವರನ್ನು ಒತ್ತಾಯಿಸಿದರು. ಹಾಗೆಯೇ ಕೃಷ್ಣ ನದಿ ನೀರು ಹಂಚಿಕೆ ಮತ್ತು ಆಲಮಟ್ಟಿ ಅಣೆಕಟ್ಟೆ ಎತ್ತರಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸುವಂತೆಯೂ ಮನವಿ ಮಾಡಿದರು. ಅಲ್ಲದೆ, ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ ಸಚಿವ ರಮೇಶ್ ಜಾರಕಿಹೊಳಿ, ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವಂತೆ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದ್ದಾರೆ.
ಇದಲ್ಲದೆ ನಾರಾಯಣಪುರ ಎಡದಂಡೆ ಕಾಲುವೆ ಜಾಲ ಯೋಜನೆಗೆ 2020-21ನೇ ಸಾಲಿನ ಕೇಂದ್ರ ಸರ್ಕಾರದ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು. ಕೇಂದ್ರ ಸರ್ಕಾರದಿಂದ 218.97 ಕೋಟಿ ರೂಪಾಯಿ ಬಿಡುಗಡೆ ಆಗಬೇಕಿದೆ ಎಂದು ತಿಳಿಸಿದ್ದರೆ. ಸಭೆಯಲ್ಲಿ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೈಪ್ರಕಾಶ್ ಉಪಸ್ಥಿತರಿದ್ದರು.
ಕನಕಪುರದಲ್ಲಿರುವ ಮೇಕೆದಾಟಿಗೆ ಸೆಪ್ಟೆಂಬರ್ 14 ರಂದು ಭೇಟಿ ನೀಡಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, "ಬಿಜೆಪಿ ಸರ್ಕಾರದ ಅವಧಿಯಲ್ಲಿ ಮೇಕೆದಾಟು ಅಣೆಕಟ್ಟೆ ನಿರ್ಮಾಣವಾಗುವುದು ಖಚಿತ. ಇದೊಂದು ಅತ್ಯಂತ ಮಹತ್ವಾಕಾಂಕ್ಷೆ ಯೋಜನೆ. ಆದರೆ, ತಮಿಳುನಾಡಿನವರು ಅಣೆಕಟ್ಟು ನಿರ್ಮಣ ವಿರೋಧಿಸಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿರುವ ಕಾರಣ ಸ್ಥಗಿತವಾಗಿದೆ.
ಆದರೆ ಈಗ ರಾಜ್ಯ ಹಾಗೂ ಕೇಂದ್ರದಲ್ಲಿ ನಮ್ಮದೇ ಸರ್ಕಾರವಿದೆ. ಹಾಗಾಗಿ ಕೂಡಲೇ ಈ ಯೋಜನೆಯ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ. ಮುಂದಿನ ಎರಡು ದಿನಗಳಲ್ಲಿ ಕೇಂದ್ರ ಸಚಿವರು ಹಾಗೂ ಸಿಎಂ ಯಡಿಯೂರಪ್ಪ ನವರ ಜೊತೆಗೆ ಮಾತುಕತೆ ನಡೆಸಲಾಗುತ್ತದೆ" ಎಂದು ಭರವಸೆ ನೀಡಿದ್ದರು. ಅದರಂತೆ ಇಂದು ದೆಹಲಿಗೆ ತೆರಳಿ ಕೇಂದ್ರ ಸಚಿವರ ಬಳಿ ಈ ಸಂಬಂಧ ಮಾತುಕತೆ ನಡೆಸಿದ್ದಾರೆ.
ಮೇಕೆದಾಟು ಯೋಜನೆ ವಿವರ:
ಮೇಕೆದಾಟು ಪರಿಸರದಲ್ಲಿ ಜಲಾಶಯ ನಿರ್ಮಾಣಮಾಡಿ ಅಂದಾಜು 65-66 ಟಿಎಂಸಿ ಹೆಚ್ಚುವರಿ ನೀರನ್ನುಸಂಗ್ರಹಿಸಬೇಕು ಎಂಬುದು ರಾಜ್ಯ ಸರ್ಕಾರದ ಉದ್ದೇಶ. ಅಲ್ಲದೆ ಬೃಹತ್ ಪ್ರಮಾಣದ ವಿದ್ಯುತ್ ಉತ್ಪಾದನೆಗೂ ರಾಜ್ಯಸರ್ಕಾರ ಯೋಜನೆ ಹಾಕಿಕೊಂಡಿದೆ. ಮೇಕೆದಾಟುಯೋಜನೆ ಮೂಲಕ ಬೇಸಿಗೆ ಕಾಲದಲ್ಲಿ ಉಂಟಾಗುವನೀರಿನ ಕೊರತೆಯನ್ನು ನೀಗಿಸಿ, ಅಗತ್ಯಬಿದ್ದಾಗ ಕೃಷಿಗೂಬಳಸಿಕೊಳ್ಳಬಹುದು.ಜೊತೆಗೆ ಪ್ರಸ್ತುತ ಬೆಂಗಳೂರು ನಗರಕ್ಕೆ 1,350 ಮಿಲಿಯನ್‌ಲೀಟರ್ ಕಾವೇರಿ ನೀರನ್ನು ಪೂರೈಸಲಾಗುತ್ತಿದೆ.
2030ರವೇಳೆಗೆ 2285 ಮಿಲಿಯನ್ ಲೀಟರ್ ನೀರುಬೇಕಾಗುತ್ತದೆ. ಹಾಗಾಗಿ ಮೇಕೆದಾಟುವಿನಿಂದ 2030ರ ವೇಳೆಗೆಬೇಕಾಗುವಷ್ಟು ಪ್ರಮಾಣದ ನೀರನ್ನು ಬೆಂಗಳೂರು ನಗರಹಾಗೂ ಬಯಲುಸೀಮೆ ಜಿಲ್ಲೆಗಳಿಗೆ ಪೂರೈಸಿ ಸಮಸ್ಯೆಬಗೆಹರಿಸುವುದು. ತಮಿಳುನಾಡಿಗೆ ಅದರ ಪಾಲಿನ 177 ಟಿಎಂಸಿ ನೀರನ್ನು ನೀಡಿ, ಬಾಕಿ ಸಮುದ್ರಕ್ಕೆ ಹೋಗಿವ್ಯರ್ಥವಾಗುವ ನೀರನ್ನು ಮೇಕೆದಾಟುವಿನಲ್ಲಿಸಂಗ್ರಹಿಸಬಹುದು ಎಂದು ಕಳೆದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಲೆಕ್ಕಾಚಾರ ಮಾಡಲಾಗಿತ್ತು.
ಕುಡಿಯುವ ನೀರು, ನೀರಾವರಿ ಹಾಗೂ ವಿದ್ಯುತ್‌ಉತ್ಪಾದನೆ ಉದ್ದೇಶಕ್ಕಾಗಿ 5,912 ಕೋಟಿ ರುಪಾಯಿವೆಚ್ಚದಲ್ಲಿ ಮೇಕೆದಾಟು ಅಣೆಕಟ್ಟೆ ನಿರ್ಮಾಣ ಮಾಡುವುದು. ಹಾಗೆಯೇ 441.2 ಮೀಟರ್ ಎತ್ತರದ ಅಣೆಕಟ್ಟೆಯಲ್ಲಿ 66.5 ಟಿಎಂಸಿನೀರು ಸಂಗ್ರಹಿಸುವ ಯೋಜನೆ ಇದಾಗಿದೆ. 440ಮೀ.ನಲ್ಲಿ 64 ಟಿಎಂಸಿ ನೀರು ಸಂಗ್ರಹಿಸಲುಅವಕಾಶವಿದೆ. 7.7 ಟಿಎಂಸಿ ನೀರು ಅಣೆಕಟ್ಟೆಯಲ್ಲಿಡೆಡ್ ಸ್ಟೋರೇಜ್ ಇರುತ್ತದೆ. 400 ಮೆಗಾವ್ಯಾಟ್‌ವಿದ್ಯುತ್ ಉತ್ಪಾದನೆಯ ಗುರಿ ಹೊಂದಲಾಗಿತ್ತು. ಆದರೆ ಯೋಜನೆಗೆ ನಿಧಾನವಾದ ಹಿನ್ನೆಲೆ ಈ 9 ಸಾವಿರ ಚಿಲ್ಲರೆ ಕೋಟಿ ಹಣ ಬೇಕಾಗಿದೆ ಎನ್ನಲಾಗುತ್ತಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ