• Home
  • »
  • News
  • »
  • state
  • »
  • Cabinet Expansion: ಸಚಿವ ಸಂಪುಟ ವಿಸ್ತರಣೆ ವೇಳೆ ಬೆಳಗಾವಿಗೆ ಬಂಪರ್‌?

Cabinet Expansion: ಸಚಿವ ಸಂಪುಟ ವಿಸ್ತರಣೆ ವೇಳೆ ಬೆಳಗಾವಿಗೆ ಬಂಪರ್‌?

ಸಿಎಂ ಬಸವರಾಜ ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ

ಬಿ ಎಸ್ ​ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಜಿಲ್ಲೆಗೆ ನಾಲ್ಕು ಸಚಿವರಿದ್ದರು. ಬಳಿಕ ಬೊಮ್ಮಾಯಿ ಸರ್ಕಾರದಲ್ಲಿ ಉಮೇಶ್ ಕತ್ತಿ, ಶಶಿಕಲಾ ಜೊಲ್ಲೆಗೆ ಅವಕಾಶ ನೀಡಲಾಗಿತ್ತು.

  • News18 Kannada
  • Last Updated :
  • Karnataka, India
  • Share this:

Belagavi Politics: ದೀಪಾವಳಿ (Deepavali 2022) ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ (Cabinet Expansion) ಎಂದು ಹೇಳಲಾಗುತ್ತಿದೆ. 2023ರ ವಿಧಾನಸಭಾ ಚುನಾವಣೆಯನ್ನು (Assembly Election) ಗಮನದಲ್ಲಿಟ್ಟುಕೊಂಡು ಬೆಳಗಾವಿ (Belagavi) ಜಿಲ್ಲೆಯ ಇಬ್ಬರು ನಾಯಕರಿಗೆ ಮಂತ್ರಿ ಸ್ಥಾನ ಸಿಗುವ ಸಾಧ್ಯತೆಗಳಿವೆ. ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳ ಪೈಕಿ ಹೆಚ್ಚು ಸ್ಥಾನ ಗೆಲ್ಲಲು ಬಿಜೆಪಿ ಪ್ಲಾನ್ ಮಾಡಿಕೊಂಡಿದೆ. ಸಂಘಟನೆಯ ದೃಷ್ಟಿಯಿಂದ ಇಬ್ಬರಿಗೆ ಸಚಿವ ಸ್ಥಾನದ ಭರವಸೆಯನ್ನು ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ಅರುಣ್ ಸಿಂಗ್ (BJP Leader Arun Singh) ಭರವಸೆ ನೀಡಿದ್ದಾರೆ. ಇಬ್ಬರಿಗೆ ಮಂತ್ರಿ ಸ್ಥಾನ ನೀಡುವ ಮೂಲಕ ಅಹಿಂದ ಮತಗಳನ್ನು ಸೆಳೆಯಲು ತಂತ್ರ ರಚನೆ ಮಾಡಿಕೊಂಡಿದೆಯಂತೆ. ಉಮೇಶ್ ಕತ್ತಿ (Umesh Katti) ಅವರ ಅಕಾಲಿಕ ನಿಧನದಿಂದಾಗಿ ಸದ್ಯ ಬೆಳಗಾವಿಯಲ್ಲಿ ಶಶಿಕಲಾ ಜೊಲ್ಲೆ (Minister Shashikala Jolle) ಒಬ್ಬರೇ ಸಚಿವರಾಗಿದ್ದಾರೆ. ಶಶಿಕಲಾ ಜೊಲ್ಲೆ ಕೇವಲ  ನಿಪ್ಪಾಣಿಗೆ ಮಾತ್ರ ಸೀಮಿತರಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆ ಮತ್ತಿಬ್ಬರು ನಾಯಕರಿಗೆ ಸಂಪುಟದಲ್ಲಿ ಸ್ಥಾನ ನೀಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.


ಕೆಲ ದಿನಗಳ ಹಿಂದೆ ಬೆಳಗಾವಿಗೆ ಆಗಮಿಸಿದ್ದ ಅರುಣ್ ಸಿಂಗ್ ಅವರು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Former Minister Ramesh Jarkiholi) ಮತ್ತು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ (Former DCM Laxman Savadi) ರಹಸ್ಯ ಮಾತುಕತೆ ನಡೆಸಿದ್ದರು. ಈ ವೇಳೆ ಇಬ್ಬರು ನಾಯಕರು ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದ್ದರು ಎನ್ನಲಾಗಿದೆ.


ಸವದಿ ಬದಲಾಗಿ ಯಾರಿಗೆ ಸಿಗುತ್ತೆ ಸ್ಥಾನ?


ಆದ್ರೆ ರಮೇಶ್ ಜಾರಕಿಹೊಳಿ ಅವರಿಗೆ ಮಾತ್ರ ಅರುಣ್ ಸಿಂಗ್ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಸವದಿ ಅವರು ಮತ್ತೆ ಸಂಪುಟ ಸೇರುವ ಸಾಧ್ಯತೆಗಳು ಕಡಿಮೆ ಇವೆ ಎನ್ನಲಾಗಿದೆ. ಲಕ್ಷ್ಮಣ್ ಸವದಿ ಬದಲಾಗಿ ಶ್ರೀಮಂತ್ ಪಾಟೀಲ್ ಅವರಿಗೆ ಸ್ಥಾನ ಸಿಗುವ ಸಾಧ್ಯತೆಗಳಿವೆ.


ramesh jarkiholi and srimanth patil likely to get minister post mrq
ರಮೇಶ್ ಜಾರಕಿಹೊಳಿ


ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರಿಗೆ ಸ್ಥಾನ ನೀಡಿ ಅಹಿಂದ ಮತಗಳು ಮತ್ತು ಶ್ರೀಮಂತ್ ಪಾಟೀಲ್ ಅವರನ್ನು ಸಂಪುಟಕ್ಕೆ ಕರೆತರುವ ಮೂಲಕ ಮರಾಠ ಸಮುದಾಯ ಸೆಳೆಯಲು ಬಿಜೆಪಿ ಪ್ಲ್ಯಾನ್ ಮಾಡಿಕೊಂಡಿದೆ ಎಂದು ತಿಳಿದು ಬಂದಿದೆ.


ಇದನ್ನೂ ಓದಿ:  Cabinet Expansion: ರಮೇಶ್ ಜಾರಕಿಹೊಳಿ, ಈಶ್ವರಪ್ಪಗೆ ಸಚಿವ ಸ್ಥಾನ ಸಿಗುತ್ತಾ? ದೆಹಲಿಯಲ್ಲಿ ಸಂಪುಟ ಕಸರತ್ತು


ಕ್ಷೇತ್ರಗಳ ಜವಾಬ್ದಾರಿ ನೀಡಲು ಚಿಂತನೆ


ರಮೇಶ್‌ ಜಾರಕಿಹೊಳಿ, ಶ್ರೀಮಂತ ಪಾಟೀಲ್‌ ಅವರಿಗೆ ಸಚಿವ ಸ್ಥಾನ ನೀಡಿ ಹಲವು ಕ್ಷೇತ್ರಗಳ ಜವಾಬ್ದಾರಿ ನೀಡಲು ಚಿಂತನೆ ನಡೆದಿವೆ. ಬೆಳಗಾವಿ ಜಿಲ್ಲೆಯ 6 ಕ್ಷೇತ್ರದಲ್ಲಿ ಮರಾಠ ಮತದಾರರು ನಿರ್ಣಾಯಕ ಸ್ಥಾನದಲ್ಲಿದ್ದಾರೆ. ಮುಂಬರುವ ಚುನಾವಣೆ ದೃಷ್ಠಿಯಿಂದ ಮತ್ತೆ ಇಬ್ಬರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆಗಳಿವೆ.


ramesh jarkiholi and srimanth patil likely to get minister post mrq
ಅರಣ್ ಸಿಂಗ್


ಬಿ ಎಸ್ ​ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಜಿಲ್ಲೆಗೆ ನಾಲ್ಕು ಸಚಿವರಿದ್ದರು. ಬಳಿಕ ಬೊಮ್ಮಾಯಿ ಸರ್ಕಾರದಲ್ಲಿ ಉಮೇಶ್ ಕತ್ತಿ, ಶಶಿಕಲಾ ಜೊಲ್ಲೆಗೆ ಅವಕಾಶ ನೀಡಲಾಗಿತ್ತು. ಉಮೇಶ್  ಕತ್ತಿ ನಿಧನ ಹಿನ್ನೆಲೆ ಶಶಿಕಲಾ ಜೊಲ್ಲೆ ಒಬ್ಬರೇ ಜಿಲ್ಲೆಯಲ್ಲಿ ಸಚಿವರಾಗಿದ್ದಾರೆ.


ಇದನ್ನೂಓದಿ: Cabinet Expansion: ಸಚಿವ ಸಂಪುಟ ವಿಸ್ತರಣೆ ಆಗುತ್ತಾ? ಅರುಣ್ ಸಿಂಗ್ ಜೊತೆ ಸವದಿ, ರಮೇಶ್ ಜಾರಕಿಹೊಳಿ ರಹಸ್ಯ ಸಭೆ


ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಚುನಾವಣೆ


ರಾಜ್ಯದಲ್ಲಿ ಆದಷ್ಟು ಬೇಗ ಸಂಪುಟದ ವಿಸ್ತರಣೆ ಆಗಲಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ನಮ್ಮ ಸ್ನೇಹಿತರಾಗಿದ್ದಾರೆ. ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಅವರೊಂದಿಗೆ ಚರ್ಚೆ ಆಗಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲುವಿನಲ್ಲಿ ರಮೇಶ್ ಜಾರಕಿಹೊಳಿ ಪಾತ್ರ ಪ್ರಮುಖವಾಗಿ ಇರಲಿದೆ ಎಂದು ಅರುಣ್ ಸಿಂಗ್ ಹೇಳಿದ್ದರು.

Published by:Mahmadrafik K
First published: