HOME » NEWS » State » RAMESH JARKIHOLI FANS OPPOSE HIS RESIGNATION AND RIOT AT GOKAK FORCEFUL BANDH MAK

Ramesh Jarkiholi Case: ರಮೇಶ್​ ಜಾರಕಿಹೊಳಿ ರಾಜೀನಾಮೆ ವಿರೋಧಿಸಿ ಗೋಕಾಕ್​ನಲ್ಲಿ ಗಲಾಟೆ, ಒತ್ತಾಯಪೂರ್ವಕ ಬಂದ್!

ಸೆಕ್ಸ್​ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಚಿವ ರಮೇಶ್​ ಜಾರಕಿಹೊಳಿ ಸಿಎಂ ಯಡಿಯೂರಪ್ಪ ಅವರಿಗೆ ರಾಜೀನಾಮೆ ನೀಡುತ್ತಿದ್ದಂತೆ ಬೆಳಗಾವಿಯ ಗೋಕಾಕ್​ನಲ್ಲಿ ಅವರ ಬೆಂಬಲಿಗರು ಬೀದಿಗೆ ಇಳಿದು ಪ್ರತಿಭಟಿಸುತ್ತಿದ್ದಾರೆ.

news18-kannada
Updated:March 3, 2021, 3:17 PM IST
Ramesh Jarkiholi Case: ರಮೇಶ್​ ಜಾರಕಿಹೊಳಿ ರಾಜೀನಾಮೆ ವಿರೋಧಿಸಿ ಗೋಕಾಕ್​ನಲ್ಲಿ ಗಲಾಟೆ, ಒತ್ತಾಯಪೂರ್ವಕ ಬಂದ್!
ಸಚಿವ ರಮೇಶ್​ ಜಾರಕಿಹೊಳಿ.
  • Share this:
ಗೋಕಾಕ್​ (ಮಾರ್ಚ್​ 03); ಬಿಜೆಪಿ ಪಕ್ಷದ ಕ್ಯಾಬಿನೆಟ್​ ಸಚಿವ ರಮೇಶ್​ಜಾರಕಿಹೊಳಿ ಅವರ ಅಶ್ಲೀಲ ವಿಡಿಯೋ ನಿನ್ನೆ ಸಂಜೆ 5 ಗಂಟೆಗೆ ಬಿಡುಗಡೆಯಾಗಿತ್ತು. ಎಲ್ಲಾ ಮಾಧ್ಯಮಗಳಲ್ಲೂ ಈ ಸುದ್ದಿ ದೊಡ್ಡ ಮಟ್ಟದ ಸದ್ದು ಮಾಡುತ್ತಲೇ ಇದೆ. ಹೀಗಾಗಿ ಕಾಂಗ್ರೆಸ್​ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳು ಮಹಿಳಾ ಸಂಘಟನೆಗಳೂ ಸಚಿವ ರಮೇಶ್​ ಜಾರಕಿಹೊಳಿ ಅವರ ರಾಜೀನಾಮೆಗೆ ಒತ್ತಾಯಿಸಿತ್ತು. ಡ್ಯಾಮೇಜ್​ ಕಂಟ್ರೋಲ್​ಗೆ ಮುಂದಾದ ಮುಖ್ಯಮಂತ್ರಿ ಯಡಿಯೂರಪ್ಪ ಸಹ ಸ್ವತಃ ರಮೇಶ್​ ಜಾರಕಿಹೊಳಿ ಅವರ ರಾಜೀನಾಮೆ ಕೇಳಿದ್ದಾರೆ. ಹೀಗಾಗಿ ಅನಿವಾರ್ಯವಾಗಿ ರಮೇಶ್​ ಜಾರಕಿಹೊಳಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ, ಗೋಕಾಕ್​ ಕ್ಷೇತ್ರದಲ್ಲಿ ರಮೇಶ್​ ಜಾರಕಿಹೊಳಿ ಬೆಂಬಲಿಗರು ಅವರ ರಾಜೀನಾಮೆಯನ್ನು ಖಂಡಿಸಿದ್ದಾರೆ. ಸಿಎಂ ಅವರ ರಾಜೀನಾಮೆಯನ್ನು ಅಂಗೀಕರಿಸಬಾರದು ಎಂದು ಒತ್ತಾಯಿಸಿದ್ದಾರೆ. ಅಲ್ಲದೆ, ಒತ್ತಾಯಪೂರ್ವಕವಾಗಿ ಗೋಕಾಕ್​ ಬಂದ್​ ಮಾಡಲು ಮುಂದಾಗಿದ್ದಾರೆ.

ಸೆಕ್ಸ್​ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಚಿವ ರಮೇಶ್​ ಜಾರಕಿಹೊಳಿ ಸಿಎಂ ಯಡಿಯೂರಪ್ಪ ಅವರಿಗೆ ರಾಜೀನಾಮೆ ನೀಡುತ್ತಿದ್ದಂತೆ ಬೆಳಗಾವಿಯ ಗೋಕಾಕ್​ನಲ್ಲಿ ಅವರ ಬೆಂಬಲಿಗರು ಬೀದಿಗೆ ಇಳಿದು ಪ್ರತಿಭಟಿಸುತ್ತಿದ್ದಾರೆ. ಯಡಿಯೂರಪ್ಪನವರು ಸಚಿವರ ರಾಜೀನಾಮೆ ಸ್ವೀಕರಿಸಿದರೆ ತಾವು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಕೈನಲ್ಲಿ ಪೆಟ್ರೋಲ್ ಕ್ಯಾನ್ ಹಿಡಿದು ಬೆದರಿಕೆ ಒಡ್ಡುತ್ತಿದ್ದಾರೆ.

ಇದನ್ನೂ ಓದಿ: Sidaramaiah: ಯಡಿಯೂರಪ್ಪ ಸಿಡಿ ಬಿಡುಗಡೆ ಮಾಡ್ತೀವಿ ಎಂಬ ಎಚ್ಚರಿಕೆ; ಇಂತಹ ಲಜ್ಜೆ ಗೆಟ್ಟವರು ಅಧಿಕಾರದಲ್ಲಿ ಇರಬೇಕಾ ಎಂದ ಸಿದ್ದರಾಮಯ್ಯ

ಅಲ್ಲದೆ. ಮತ್ತೆ ಕೆಲವರು ಕೈನಲ್ಲಿ ಬಡಿಗೆ-ಕಲ್ಲು ಹಿಡಿದು ಒತ್ತಾಯಪೂರ್ವಕವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿ ಬಂದ್ ಮಾಡಿಸುತ್ತಿದ್ದಾರೆ. ಇನ್ನೂ ಕೆಲವೆಡೆ ರಮೇಶ್​ ಜಾರಕಿಹೊಳಿ ಅವರ ಅಭಿಮಾನಿಗಳು ಸ್ವಯಂ ಪ್ರೇರಿತರಾಗಿ ಅಂಗಡಿಗಳನ್ನು ಮುಚ್ಚುವ ಮೂಲಕ ಅವರ ರಾಜೀನಾಮೆಯನ್ನು ವಿರೋಧಿಸಿದ್ದಾರೆ. ಒಟ್ಟಿನಲ್ಲಿ ಗೋಕಾಕ್​ನಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ರಮೇಶ್​ ಅವರ ಬೆಂಬಲಿಗರ ಆಟಾಟೋಪಗಳಿಗೆ ನಿಯಂತ್ರಣ ಹೇರುವುದೇ ಪೊಲೀಸರಿಗೆ ದೊಡ್ಡ ಸವಾಲಿನ ಕೆಲಸವಾಗಿ ಪರಿಣಮಿಸಿದೆ.

ಈಗಾಗಿ ಗೋಕಾಕ್​ಗೆ ಹೆಚ್ಚಿನ ಪೊಲೀಸ್​ ಭದ್ರತೆ ನೀಡಲು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ ಎನ್ನಲಾಗುತ್ತಿದೆ. ಒಟ್ಟಾರೆ ಸೆಕ್ಸ್​ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ರಮೇಶ್​ ಜಾರಕಿಹೊಳಿ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಪ್ರಕರಣದ ತನಿಖೆಗೆ ಆಗ್ರಹಿಸಿದ್ದಾರೆ. ಹೀಗಾಗಿ ಈ ಪ್ರಕರಣ ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ತಲುಪಲಿದೆ? ಸರ್ಕಾರ ತನ್ನ ಮುಜುರವನ್ನು ತಪ್ಪಿಸಿಕೊಳ್ಳಲು ಏನು ಕ್ರಮ ಕೈಗೊಳ್ಳಲಿದೆ? ಎಂಬುದನ್ನು ಕಾದು ನೋಡಬೇಕಿದೆ.
Published by: MAshok Kumar
First published: March 3, 2021, 3:17 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories