Ramesh Jarkiholi CD Case: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಜೂನ್ 18ಕ್ಕೆ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

Ramesh Jarkiholi Sex CD Case | ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಸಿಬಿಐಗೆ ವಹಿಸುವ ಬಗ್ಗೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ನಡೆಸಿರುವ ಹೈಕೋರ್ಟ್​ ವಿಚಾರಣೆಯನ್ನು ಜೂನ್ 18ಕ್ಕೆ ಮುಂದೂಡಿದೆ.

ರಮೇಶ್​ ಜಾರಕಿಹೊಳಿ.

ರಮೇಶ್​ ಜಾರಕಿಹೊಳಿ.

  • Share this:
    ಬೆಂಗಳೂರು (ಮೇ 31): ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣವನ್ನು ಸಿಬಿಐ ತನಿಖೆ ನಡೆಸಬೇಕೆಂದು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಇಂದು ನಡೆಸಲಾಯಿತು. ಈ ಸಿಡಿ ಪ್ರಕರಣಕ್ಕೆ  ಸಂಬಂಧಿಸಿದಂತೆ ಇಂದು ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲು ಎಸ್​ಐಟಿಗೆ ಸೂಚಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ವಿಚಾರಣೆ ನಡೆಸಿರುವ ಹೈಕೋರ್ಟ್​ ವಿಚಾರಣೆಯನ್ನು ಜೂನ್ 18ಕ್ಕೆ ಮುಂದೂಡಿದೆ. ಜೂನ್ 17ಕ್ಕೆ ಮತ್ತೆ ವರದಿ ಸಲ್ಲಿಕೆಗೆ ಸೂಚನೆ ನೀಡಿರುವ ಹೈಕೋರ್ಟ್ ನ್ಯಾಯಮೂರ್ತಿಗಳು, ಎಸ್ಐಟಿ ಮುಖ್ಯಸ್ಥರ ಸಹಿಯೊಂದಿಗೆ ವರದಿ ಸಲ್ಲಿಸಬೇಕು. ಇಲ್ಲದೇ ಹೋದರೆ ಎಸ್ಐಟಿ ಇನ್​ಚಾರ್ಜ್ ಯಾರು ಇರುತ್ತಾರೋ ಅವರು ಸಲ್ಲಿಸಬೇಕು ಎಂದಿದ್ದಾರೆ.

    ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖಾ ಪ್ರಗತಿ ವರದಿಯನ್ನು ಎಸ್​ಐಟಿ ಹೈಕೋರ್ಟ್​ಗೆ ಮುಚ್ಚಿದ ಲಕೋಟೆಯಲ್ಲಿ ನೀಡಿದೆ. ಆರ್​ಟಿ ನಗರ ಠಾಣೆಯಲ್ಲಿ ದಾಖಲಾದ ಕಿಡ್ನಾಪ್ ಕೇಸಲ್ಲಿ ಬಿ ರಿಪೋರ್ಟ್ ಸಲ್ಲಿಸಿರುವುದಾಗಿ ಸರ್ಕಾರಿ ಪರ ವಕೀಲ ಪ್ರಭುಲಿಂಗ ನಾವಡಗಿ ಹೇಳಿಕೆ ನೀಡಿದ್ದರು. ಅತ್ಯಾಚಾರ ಪ್ರಕರಣದಲ್ಲಿ ತನಿಖೆ ಪೂರ್ಣಗೊಂಡಿದೆ ಎಂದು ಹೇಳಿಕೆ ನೀಡಿದ್ದರು.

    ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್​, ಎಸ್ಐಟಿ ಮುಖ್ಯಸ್ಥರೇ ಸಹಿ ಮಾಡಿ ವರದಿ ಸಲ್ಲಿಸಬೇಕು. ಎಸ್​ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ಮೆಡಿಕಲ್ ರಜೆಯಲ್ಲಿ ಇರೋದ್ರಿಂದ ಬೇರೆಯವರಿಗೆ ಅಧಿಕಾರ ಕೊಡಿ ಎಂದು ಮುಖ್ಯ ನ್ಯಾಯಮೂರ್ತಿ ಓಕಾ ಸೂಚಿಸಿದ್ದರು. ಇಂದು ಮೂರು ವರದಿ ಸಲ್ಲಿಕೆ ಮಾಡಿರೋ ಎಸ್ ಐ ಟಿ ಅಧಿಕಾರಿಗಳು ಸದಾಶಿವನಗರ ಠಾಣೆಯಲ್ಲಿ ದಾಖಲಾದ ಕೇಸ್ ಗೆ ಪ್ರತ್ಯೇಕ ವರದಿ ಸಲ್ಲಿಸಿದ್ದಾರೆ.

    ಇದನ್ನೂ ಓದಿ: Karnataka Lockdown: ಕರ್ನಾಟಕದಲ್ಲಿ ಮತ್ತೆ ಲಾಕ್​ಡೌನ್ ವಿಸ್ತರಣೆ?; ಸಿಎಂಗೆ ತಜ್ಞರು ನೀಡಿದ ವರದಿಯಲ್ಲೇನಿದೆ?

    ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಎಸ್​ಐಟಿ ಅಧಿಕಾರಿಗಳ ಮುಂದೆ ರಮೇಶ್ ಜಾರಕಿಹೊಳಿ ಆ ವಿಡಿಯೋದಲ್ಲಿರುವುದು ನಾನೇ ಎಂದು ಒಪ್ಪಿಕೊಂಡಿದ್ದರು. ಈ ಮೂಲಕ ಈ ಪ್ರಕರಣದಲ್ಲಿ ಆ ವಿಡಿಯೋವನ್ನಿಟ್ಟುಕೊಂಡು ನನಗೆ ಬ್ಲಾಕ್​ಮೇಲ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು. ಈ ಕೇಸಿನ ಅಂತಿಮ ವರದಿ ನೀಡಲು ಹೈಕೋರ್ಟ್​ ಮೇ 31ರವರೆಗೆ ಗಡುವು ನೀಡಿತ್ತು. ಸೌಮೇಂದು ಮುಖರ್ಜಿ ಅವರ ಅನುಪಸ್ಥಿತಿಯಲ್ಲೇ ಇಂದು ಎಸ್​ಐಟಿ ಹೈಕೋರ್ಟ್​ಗೆ ವರದಿ ಸಲ್ಲಿಸಿದೆ.

    ರಮೇಶ್ ಜಾರಕಿಹೊಳಿ ಅವರು ಯುವತಿಯೊಂದಿಗೆ ಸೆಕ್ಸ್​ ನಡೆಸುತ್ತಿದ್ದ ವಿಡಿಯೋ ಎಲ್ಲೆಡೆ ಹರಿದಾಡಿತ್ತು. ಆ ವಿಡಿಯೋದಲ್ಲಿರುವುದು ನಾನಲ್ಲ, ಯಾರೋ ನನ್ನ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎಂದು ಪೊಲೀಸರ ಮುಂದೆ ವಾದಿಸಿದ್ದ ರಮೇಶ್ ಜಾರಕಿಹೊಳಿ ಕಳೆದ ವಾರ ತನಿಖಾಧಿಕಾರಿಗಳ ಎದುರು ಆ ವಿಡಿಯೋದಲ್ಲಿರುವುದು ನಾನೇ ಎಂದು ಒಪ್ಪಿಕೊಂಡಿದ್ದಾರೆ ಎನ್ನಲಾಗಿತ್ತು.

    ಇದನ್ನೂ ಓದಿ: Ramesh Jarkiholi: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮಹತ್ವದ ತಿರುವು; ಸೆಕ್ಸ್​ ವಿಡಿಯೋದಲ್ಲಿರುವುದು ನಾನೇ ಎಂದ ಸಾಹುಕಾರ್!

    ಉತ್ತರ ಕರ್ನಾಟಕದ ಯುವತಿಯೊಬ್ಬಳ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದ ರಮೇಶ್ ಜಾರಕಿಹೊಳಿಯವರ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಕಾರ್ಯಕರ್ತ ಪೊಲೀಸರಿಗೆ ನೀಡಿದ್ದರು. ರಮೇಶ್ ಜಾರಕಿಹೊಳಿ ಆ ಯುವತಿಯನ್ನು ಹೆದರಿಸಿ, ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದು, ಈ ವಿಷಯವನ್ನು ಯಾರಿಗೂ ಹೇಳದಂತೆ ಆಕೆಗೆ ಜೀವ ಬೆದರಿಕೆಯೊಡ್ಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಬಳಿಕ ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಬಿಜೆಪಿ ಸರ್ಕಾರಕ್ಕೆ ತೀವ್ರ ಮುಜುಗರ ತಂದೊಡ್ಡಿತ್ತು. ಬಳಿಕ, ರಮೇಶ್ ಜಾರಕಿಹೊಳಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಪ್ರಕರಣವನ್ನು ಎಸ್​ಐಟಿ ತನಿಖೆಗೆ ವಹಿಸಲಾಗಿತ್ತು.

    ಸಿಡಿಯಲ್ಲಿ ಯುವತಿ ಜೊತೆಗೆ ಇರುವುದು ತಾವೇ ಎಂದು ಒಪ್ಪಿಕೊಂಡಿರುವ ರಮೇಶ್ ಜಾರಕಿಹೊಳಿ, ನನಗೆ ಆ ಯುವತಿಯ ಪರಿಚಯವಿದೆ. ಆಕೆಯ ಒಪ್ಪಿಗೆಯ ಬಳಿಕವೇ ನಾವಿಬ್ಬರೂ ಲೈಂಗಿಕ ಕ್ರಿಯೆ ನಡೆಸಿದ್ದೆವು. ಇದು ಒಮ್ಮತದ ಲೈಂಗಿಕ ಕ್ರಿಯೆ ಎಂದು ಹೇಳಿಕೆ ನೀಡಿದ್ದರು ಎಂದು ಮೂಲಗಳು ತಿಳಿಸಿದ್ದವು.

    ಗ್ರಾಫಿಕ್ಸ್​ ಬಳಸಿ ವಿಡಿಯೋವನ್ನು ತಿರುಚಲಾಗಿದೆ. ಆ ವಿಡಿಯೋದಲ್ಲಿರುವುದು ನಾನಲ್ಲ. ನನಗೂ ಆ ಸಿಡಿಗೂ ಸಂಬಂಧವಿಲ್ಲ. ಆ ಯುವತಿ ಯಾರೆಂದೇ ನನಗೆ ಗೊತ್ತಿಲ್ಲ. ನನ್ನ ವಿರುದ್ಧ ಷಡ್ಯಂತ್ರ ನಡೆಸಿ, ನಕಲಿ ವಿಡಿಯೋ ಸೃಷ್ಟಿಸಲಾಗಿದೆ. ಇದರ ಹಿಂದೆ ಅನೇಕ ಪ್ರಭಾವಿಗಳ ಕೈವಾಡವಿದೆ. ತನಿಖೆಯ ನಂತರ ಅವರು ಯಾರೆಂದು ಗೊತ್ತಾಗಲಿದೆ ಎಂದು ರಮೇಶ್ ಜಾರಕಿಹೊಳಿ ಈ ಮೊದಲು ಎಸ್​ಐಟಿ ಅಧಿಕಾರಿಗಳ ಮುಂದೆ ಹೇಳಿದ್ದರು. ಆದರೆ, ಇದೀಗ ತಮ್ಮ ಹೇಳಿಕೆಗೆ ಉಲ್ಟಾ ಹೊಡೆದಿರುವ ರಮೇಶ್ ಜಾರಕಿಹೊಳಿ, ಅದು ಒಪ್ಪಿತ ಲೈಂಗಿಕ ಕ್ರಿಯೆ. ಆ ವಿಡಿಯೋದಲ್ಲಿರುವುದು ನಾನೇ ಎಂದು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಆ ಯುವತಿಯ ಅನುಮತಿ ಪಡೆದು ಲೈಂಗಿಕ ಕ್ರಿಯೆ ನಡೆಸಿದ್ದು, ಇದನ್ನು ಯಾರೋ ದುರುದ್ದೇಶದಿಂದ ವಿಡಿಯೋ ಮಾಡಿಕೊಂಡಿದ್ದಾರೆ. ಅದನ್ನು ನನ್ನ ರಾಜಕೀಯ ಜೀವನವನ್ನು ಮುಗಿಸಲು ಬಳಸಿದ್ದಾರೆ. ಆ ಯುವತಿ ಯಾವುದೋ ಒಂದು ಪ್ರಾಜೆಕ್ಟ್ ವಿಚಾರವಾಗಿ ನನ್ನನ್ನು ಭೇಟಿ ಮಾಡಲು ಬಂದಿದ್ದಳು ಎಂದು ಮಾಜಿ ಸಚಿವ ಜಾರಕಿಹೊಳಿ ಹೇಳಿದ್ದಾರೆ ಎನ್ನಲಾಗಿದೆ.
    Published by:Sushma Chakre
    First published: