Ramesh Jarkiholi Sex Scandal: ರಾಸಲೀಲೆ ಪ್ರಕರಣ; ರಮೇಶ್ ಜಾರಕಿಹೊಳಿ ವಿರುದ್ಧ ದಾಖಲಾಗುತ್ತಾ ಎಫ್​ಐಆರ್​?

Ramesh Jarkiholi Sex Scandal: ಕೋರ್ಟ್ ನಲ್ಲಿ ಯಾರಾದರೂ ಪ್ರಶ್ನೆ ಮಾಡಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದರೆ ಪೊಲೀಸರಿಗೆ ಸಂಕಷ್ಟ ಎದುರಾಗಲಿದೆ. ಹೀಗಾಗಿ ರಮೇಶ್ ಜಾರಕಿಹೊಳಿ ವಿರುದ್ಧ ಎಫ್​ಐಆರ್ ದಾಖಲಿಸಲು ಪೊಲೀಸ್ ಅಧಿಕಾರಿಗಳು ಮುಂದಾಗಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ

ಮಾಜಿ ಸಚಿವ ರಮೇಶ್ ಜಾರಕಿಹೊಳಿ

 • Share this:
  ಬೆಂಗಳೂರು (ಮಾ. 5): ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆಯ ಸಿಡಿ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿತ್ತು. ಸಚಿವರ ಯುವತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ವಿಡಿಯೋ ಸಿಡಿ ರಿಲೀಸ್ ಆದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷಕ್ಕೆ ಭಾರೀ ಮುಜುಗರ ಉಂಟಾಗಿತ್ತು. ಇದರಿಂದ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಈ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗುವ ಸಾಧ್ಯತೆ ಇದೆ.

  ಈಗಾಗಲೇ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ, ಕಾನೂನು ತಜ್ಞರ ಸಲಹೆ ಪಡೆದಿರುವ ತನಿಖಾಧಿಕಾರಿಗಳು‌‌ ಐಪಿಸಿ ಸೆಕ್ಷನ್ ವಂಚನೆ (420), ಜೀವ ಬೆದರಿಕೆ (506) ಅಡಿ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ. ಒಂದು ವೇಳೆ ಎಫ್​ಐಆರ್ ದಾಖಲಿಸಿದೆ ಇದ್ದರೆ ಪೊಲೀಸರಿಗೆ ಸಮಸ್ಯೆಯಾಗಲಿದೆ. ಕೋರ್ಟ್ ನಲ್ಲಿ ಯಾರಾದರೂ ಪ್ರಶ್ನೆ ಮಾಡಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದರೆ ಪೊಲೀಸರಿಗೆ ಸಂಕಷ್ಟ ಎದುರಾಗಲಿದೆ. ಹೀಗಾಗಿ ಎಫ್​ಐಆರ್ ದಾಖಲಿಸಲು ಪೊಲೀಸ್ ಅಧಿಕಾರಿಗಳು ಮುಂದಾಗಿದ್ದಾರೆ.

  ಸರ್ಕಾರದ ಪ್ರಭಾವಿ ವ್ಯಕ್ತಿ ವಿರುದ್ದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ. ಹೀಗಾಗಿ ಎಫ್ ಐಆರ್ ದಾಖಲಿಸುವುದು ಅತ್ಯವಶ್ಯವಾಗಿದೆ. ಮೊದಲು ಎಫ್ ಐಆರ್ ಮಾಡಿ, ಬಳಿಕ ಸಂತ್ರಸ್ಥ ಯುವತಿಯ ಹೇಳಿಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ಸದ್ಯ ದಿನೇಶ್ ಕಲ್ಲಹಳ್ಳಿ ಕೊಟ್ಟಿರುವ ದೂರಿನ‌ ಆಧಾರದ ಮೇಲೆ ತನಿಖಾಧಿಕಾರಿ ಯಾವ ಸೆಕ್ಷನ್ ಹಾಕುತ್ತಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

  ಇನ್ನು, ಯುವತಿಗೆ ಕೆಲಸ ಮಾಡಿಸಿಕೊಡುವುದಾಗಿ ಹೇಳಿ ಆಕೆಯನ್ನು ರಮೇಶ್ ಜಾರಕಿಹೊಳಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ, ಆಕೆಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ನೀಡಿದ್ದರು. ಆ ದೂರುದಾರ ದಿನೇಶ್ ಕಲ್ಲಹಳ್ಳಿ ನಿನ್ನೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ, ತಮಗೆ ಜೀವ ಬೆದರಿಕೆ ಇದೆ ಎಂದು ತನಿಖಾಧಿಕಾರಿಗೆ ಪತ್ರ ಕಳುಹಿಸಿದ್ದ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಆ ವಿಡಿಯೋದಲ್ಲಿದ್ದ ಸಂತ್ರಸ್ಥೆ ಯಾರೆಂದು ಪತ್ತೆ ಹಚ್ಚಿ ಆಕೆಯ ಹೇಳಿಕೆ ಪಡೆಯಲು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದುವರೆಗೂ ಆಕೆಯ ಸುಳಿವು ಸಿಕ್ಕಿಲ್ಲ.
  Published by:Sushma Chakre
  First published: