ಬೆಂಗಳೂರು(ಫೆ. 28): ಮಹದಾಯಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಕೊನೆಗೂ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಮಹದಾಯಿ ನ್ಯಾಯಾಧಿಕರಣದ ಐತೀರ್ಪು ಪ್ರಕಟವಾಗಿದ್ದು, ಕರ್ನಾಟಕಕ್ಕೆ ಒಟ್ಟು 13.05 ಟಿಎಂಸಿ ನೀರನ್ನು ಹಂಚಿಕೆ ಮಾಡಿದೆ. ಕೇಂದ್ರ ಸರ್ಕಾರದ ಅಧಿಸೂಚನೆಗೆ ರಾಜ್ಯ ಸಚಿವರು ಹಾಗೂ ಜನರು ಸಂತಸ ವ್ಯಕ್ತಪಡಿಸಿದ್ದಾರೆ. ವಿರೋಧದ ನಡುವೆಯೂ ರಮೇಶ್ ಜಾರಕಿಹೊಳಿ ನೀರಾವರಿ ಖಾತೆ ವಹಿಸಿಕೊಂಡಿರುವ ಹೊತ್ತಲ್ಲೇ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿರುವುದು ಇನ್ನೂ ಮಹತ್ವ ಪಡೆದಿದೆ. ಈ ಬೆನ್ನಲ್ಲೇ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕಾವೇರಿ ನೀರಾವರಿ ನಿಗಮದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.
ಮಹದಾಯಿ ನದಿ ನೀರು ವಿಚಾರವಾಗಿ ಹಿರಿಯ ಸಚಿವರು ಮತ್ತು ಉತ್ತರ ಕರ್ನಾಟಕ ಭಾಗದ ಶಾಸಕರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೆವು. ಕೇಂದ್ರ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿದೆ. ಹಾಗಾಗಿ ಪ್ರಧಾನಿ ಮೋದಿ ಸರ್ಕಾರಕ್ಕೆ ಮತ್ತು ನಮ್ಮ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ ಎಂದರು.
ಟ್ರಿಬ್ಯೂನಲ್ ಆದೇಶದಂತೆ ಜಾರಿ ಮಾಡುತ್ತೇವೆ. ಶೀಘ್ರವಾಗಿ ಕಾಮಗಾರಿ ಮುಂದುವರಿಸುತ್ತೇವೆ. ಸುಪ್ರೀಂ ಕೋರ್ಟ್ ಆದೇಶಕ್ಕೆ ಮೊದಲೇ ಮಹದಾಯಿಗೆ 200 ಕೋಟಿ ರೂಪಾಯಿ ಮೀಸಲಿಡಲು ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ಮನವಿ ಮಾಡಿದ್ದೇವೆ. ಇನ್ನೂ ಹದಿನೈದು ದಿನಗಳ ಕಾಲ ಕೆಲವೊಂದು ವಿಷಯಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಜಾರಕಿಹೊಳಿ ಹೇಳಿದರು.
ಮಹದಾಯಿ ನದಿ ನೀರು ಹಂಚಿಕೆ ವಿಚಾರ; ಕೊನೆಗೂ ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ
ಕುಡಿಯುವ ನೀರಿಗೆ ಕೇಂದ್ರ ಪರಿಸರ ಇಲಾಖೆಯ ಅನುಮತಿ ಬೇಕಾಗಿಲ್ಲ. ಈ ಸಂದರ್ಭದಲ್ಲಿ ವಿಜಯೋತ್ಸವ ಬೇಡ. ಎಲ್ಲಾ ವಿಚಾರಗಳನ್ನು ಅಧ್ಯಯನ ಮಾಡಿ ನಂತರ ಮಾತನಾಡುತ್ತೇನೆ ಎಂದರು.
ಇದೇ ವೇಳೆ, ಜಲಸಂಪನ್ಮೂಲ ಇಲಾಖೆಗೆ
ಸಿಎಂ ಬಿಎಸ್ವೈ ಹೆಚ್ಚಿನ ಅನುದಾನ ನೀಡುವ ವಿಶ್ವಾಸವಿದೆ ಎಂದು ರಮೇಶ್ ಜಾರಕಿಹೊಳಿ ಆಶಯ ವ್ಯಕ್ತಪಡಿಸಿದರು. ಮಹದಾಯಿ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಶೀಘ್ರದಲ್ಲೇ ವಾಪಸ್ ಪಡೆಯುವ ಬಗ್ಗೆ ಸಿಎಂ ಜೊತೆ ಚರ್ಚಿಸುತ್ತೇನೆ ಎಂದು ಹೇಳಿದರು.
ಮೇಕೆದಾಟು ವಿಚಾರವಾಗಿ ನಿನ್ನೆ ಜಲಶಕ್ತಿ ಸಚಿವರಿಗೆ ಮನವಿ ಮಾಡಿದ್ದೇವೆ. ಶೀಘ್ರದಲ್ಲೇ ಮತ್ತೊಮ್ಮೆ ದೆಹಲಿಗೆ ಹೋಗಿ ಮನವಿ ಮಾಡುತ್ತೇವೆ ಎಂದರು.
ದೊರೆಸ್ವಾಮಿಯವರ ಬಳಿ ಯತ್ನಾಳ್ ಕ್ಷಮೆ ಕೇಳದಿದ್ದರೆ ಪರಿಣಾಮ ಎದುರಿಸಬೇಕಾಗುತ್ತೆ: ಎಚ್.ಕೆ. ಪಾಟೀಲ್
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ