ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shivaraj Kumar) ಮತ್ತು ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ (Geeta Shivaraj Kumar) ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಕಾರ್ಯ ಮಾಡಿದ್ದರು. ಶಿವರಾಜ್ ಕುಮಾರ್ ಪ್ರಚಾರ ಮಾಡಿದ ಬಹುತೇಕ ಕಡೆಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವನ್ನು ಕಂಡಿತ್ತು. ಹೀಗಾಗಿ ನೂತನ ಸಿಎಂ ಪ್ರಮಾಣ ವಚನ ಕಾರ್ಯಕ್ರಮದಲ್ಲೂ ನಟ ಶಿವರಾಜ್ ಕುಮಾರ್ ದಂಪತಿಗೆ ಆಹ್ವಾನ ನೀಡಲಾಗಿತ್ತು.
ಇದೀಗ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ (Randeep Singh Surjewala) ಅವರು ಸ್ಯಾಂಡಲ್‌ವುಡ್ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರ ಮನೆಗೆ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ಕೆ ಶಕ್ತಿ ತುಂಬಿ ಗೆಲುವಿಗೆ ಕಾರಣರಾಗಿದ್ದಕ್ಕೆ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಅವರಿಗೆ ಸುರ್ಜೇವಾಲಾ ಅವರು ವಿಶೇಷ ಕೃತಜ್ಞತೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: Puttur BJP: ಯತ್ನಾಳ್ ಸಮ್ಮುಖದಲ್ಲೇ ಪುತ್ತೂರಿನಲ್ಲಿ ಹಿಂದೂಪರ-ಬಿಜೆಪಿ ಕಾರ್ಯಕರ್ತರ ಮಧ್ಯೆ ತಳ್ಳಾಟ!
ಈ ಬಗ್ಗೆ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು, ನಟ ಶಿವರಾಜ್‌ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದೆ. ತುಂಬಾ ಸಂತೋಷವಾಯಿತು. ನಮ್ಮ ಕಾಂಗ್ರೆಸ್ ಪಕ್ಷದ ಪ್ರಚಾರಕ್ಕೆ ಶಕ್ತಿ ತುಂಬಿದ ಮತ್ತು ಕರ್ನಾಟಕದ ಅಭಿವೃದ್ಧಿಗಾಗಿ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಿದ್ದಕ್ಕಾಗಿ ಅವರಿಗೆ ಧನ್ಯವಾದಗಳು. ಗೀತಾ ಶಿವರಾಜಕುಮಾರ್ ಅವರು ಈಗಾಗಲೇ ಕಾಂಗ್ರೆಸ್ ಕುಟುಂಬದ ಭಾಗವಾಗಿದ್ದಾರೆ. ಕರ್ನಾಟಕದ ಅಭಿವೃದ್ಧಿ ಮತ್ತು ಸಮೃದ್ಧಿಗೆ ನಾವು ಒಟ್ಟಾಗಿ ಬದ್ಧರಾಗಿದ್ದೇವೆ’ ಎಂದು ರಣದೀಪ್ ಸಿಂಗ್ ಸುರ್ಜೇವಾಲಾ ಬರೆದುಕೊಂಡಿದ್ದಾರೆ.
ಇದನ್ನೂ ಓದಿ: BK Hariprasad: ಬಿಕೆ ಹರಿಪ್ರಸಾದ್‌ರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಮಂತ್ರಿ ಮಾಡಲು ಆಗ್ರಹಿಸಿದ ಅಭಯಚಂದ್ರ ಜೈನ್
ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ?
ಇನ್ನು ಸಚಿವ ಸಂಪುಟದಲ್ಲಿ ಸ್ಥಾನ ಸಿಗದಿದ್ದಕ್ಕೆ ಮಧು ಬಂಗಾರಪ್ಪ ಬೇಸರಗೊಂಡಿದ್ದು, ಇದಕ್ಕೆ ನಟ ಶಿವರಾಜ್ ಕುಮಾರ್ ಕೂಡ ಧ್ವನಿಗೂಡಿಸಿದ್ದರು ಎನ್ನಲಾಗಿದೆ. ಅಲ್ಲದೇ ರಣದೀಪ್ ಸಿಂಗ್ ಸುರ್ಜೇವಾಲಾ ಭೇಟಿ ನೀಡಿದ ವೇಳೆ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಪರಸ್ಪರ ಚರ್ಚೆ ಮಾಡಿದ್ದಾರೆ ಎನ್ನಲಾಗಿದ್ದು, ಇದಕ್ಕೆ ಸುರ್ಜೇವಾಲ ಕೂಡ ಧನಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.
ಎಲ್ಲವೂ ಅಂದುಕೊಂಡಂತೆ ಆದರೆ ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ