• Home
  • »
  • News
  • »
  • state
  • »
  • Rape And Murder: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಗೈದು ಕೊಲೆ; ಮೊಬೈಲ್​ನಲ್ಲಿ ಅಶ್ಲೀಲ ಚಿತ್ರ ನೋಡಿ ರೇಪ್​ ಮಾಡಿದ್ರಂತೆ ಬಾಲಕರು!

Rape And Murder: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಗೈದು ಕೊಲೆ; ಮೊಬೈಲ್​ನಲ್ಲಿ ಅಶ್ಲೀಲ ಚಿತ್ರ ನೋಡಿ ರೇಪ್​ ಮಾಡಿದ್ರಂತೆ ಬಾಲಕರು!

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಈ ಅಪ್ರಾಪ್ತ ಬಾಲಕರು ಹೆಚ್ಚು ಮೊಬೈಲ್ ಬಳಕೆ ಮಾಡುತ್ತಿದ್ದರು, ಮೊಬೈಲ್ ನಲ್ಲಿ ಅಶ್ಲೀಲ ದೃಶ್ಯಗಳನ್ನ ಕಂಡು ಅತ್ಯಾಚಾರ ಗೈದಿದ್ದಾರಂತೆ. ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

  • News18 Kannada
  • Last Updated :
  • Karnataka, India
  • Share this:

ಕಲಬುರಗಿ (ನ. 02): ಅಪ್ರಾಪ್ತ ಬಾಲಕಿಯ (Minor Girl) ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಅಮಾನುಷ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಳ್ಳಿ ಗ್ರಾಮದ ಹೊರವಲಯದಲ್ಲಿ ನಿನ್ನೆ (ನ.01) ಸಂಜೆ ನಡೆದಿದೆ. ಅಪ್ರಾಪ್ತ ಬಾಲಕರು ಅತ್ಯಾಚಾರವೆಸಗಿ ಕೊಲೆಗೈದಿದ್ದಾರೆ. ಅಪ್ರಾಪ್ತ ಬಾಲಕರು ಹೆಚ್ಚು ಮೊಬೈಲ್ ಬಳಕೆ ಮಾಡುತ್ತಿದ್ದರು, ಮೊಬೈಲ್ ನಲ್ಲಿ ಅಶ್ಲೀಲ ದೃಶ್ಯಗಳನ್ನ ಕಂಡು ಅತ್ಯಾಚಾರ ಗೈದಿದ್ದಾರಂತೆ. ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 


ಬಹಿರ್ದೆಸೆಗೆ ಹೋಗಿದ್ದ ಬಾಲಕಿ ಮೇಲೆ ಅತ್ಯಾಚಾರ


ಸಾಯಂಕಾಲ ಹೊತ್ತು ಬಹಿರ್ದೆಸೆಗೆಂದು ಹೊಲ ಕಡೆಗೆ ಹೋಗಿದ್ದ ವೇಳೆ ದುಷ್ಕರ್ಮಿಗಳು ಆಕೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಗ್ರಾಮದ ಹೊರವಲಯದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಆಕೆಯ ಶವ ಪತ್ತೆಯಾಗಿದ್ದು, ಆಕೆಯ ಕೈಕಾಲು ಕಟ್ಟಿ ಅತ್ಯಾಚಾರವೆಸಗಿ ಬಳಿಕ ಆರೋಪಿಗಳು ವೇಲ್​ನಿಂದ  ಕತ್ತು ಹಿಸುಕಿ ಕೊಲೆಗೈದಿರಬಹುದು ಎಂದು ಹೇಳಲಾಗುತ್ತಿದೆ.


rape and murder of 15 year old girl in kalaburagi pvn
ಸಾಂದರ್ಭಿಕ ಚಿತ್ರ


ಘಟನಾ ಸ್ಥಳಕ್ಕೆ ಕಲಬುರಗಿ ಎಸ್ಪಿ ಇಶಾ ಪಂತ್ ಭೇಟಿ


ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಆರಂಭಿಸಿದ್ದಾರೆ. ಘಟನಾ ಸ್ಥಳಕ್ಕೆ ಕಲಬುರಗಿ ಎಸ್ಪಿ ಇಶಾ ಪಂತ್, ಹೆಚ್ಚುವರಿ ಎಸ್ಪಿ ಪ್ರಸನ್ನ ದೇಸಾಯಿ ಭೇಟಿ ನೀಡಿದ್ದಾರೆ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಕುರಿತು ಬೇಸರ ವ್ಯಕ್ತಪಡಿಸಿರೋ ಕಲಬುರಗಿ ಎಸ್ಪಿ ಇಶಾ ಪಂತ್, ಕಾಮುಕರ ಬಂಧನಕ್ಕೆ ಆಳಂದ ಡಿವೈಎಸ್ಪಿ ಮತ್ತು ಅಫಜಲಪುರ ಆಳಂದ ಸಿಪಿಐ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿಸಲಾಗಿದ್ದು, ಶೀಘ್ರವೇ ಚಾರ್ಜ್‌ಶಿಟ್ ಸಲ್ಲಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದಾಗಿ ಹೇಳಿದ್ದಾರೆ.


ಇದನ್ನೂ ಓದಿ:  MLA Tippareddy: ಬಿಜೆಪಿ ಶಾಸಕ ತಿಪ್ಪಾರೆಡ್ಡಿಗೆ ಹನಿಟ್ರ್ಯಾಪ್ ಯತ್ನ; ಬೆತ್ತಲಾದ ಯುವತಿಯಿಂದ ವಿಡಿಯೋ ಕಾಲ್?


ರೇಪ್​ ಅಂಟ್ ಮರ್ಡರ್ ಕೇಸ್​ 


ಅತ್ಯಾಚಾರಕ್ಕೊಳಗಾಗಿ ಕೊಲೆಯಾದ 14 ವರ್ಷದ ಅಪ್ರಾಪ್ತ ಬಾಲಕಿ ಮೂಲತಃ ಅಫಜಲಪುರ ತಾಲ್ಲೂಕಿನವಳಾಗಿದ್ದು, ಆಳಂದ ತಾಲೂಕಿನ ಗ್ರಾಮವೊಂದರಲ್ಲಿ ವಿದ್ಯಾಭ್ಯಾಸ ಮಾಡಲು ಬಂದಿದ್ದಳು.. ಈ ವೇಳೆ ಬಹಿರ್ದೆಸೆಗೆ ಹೋಗಿದ್ದಾಗ ಕಾಮುಕರು ಅಟ್ಟಹಾಸ ಮೆರೆದಿದ್ದು, ಇಡೀ ಗ್ರಾಮವೇ ಅಲ್ಲದೇ ಜಿಲ್ಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.


ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ


ಇನ್ನೂ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಘಟನೆ ಖಂಡಿಸಿ ಆಳಂದ ಪಟ್ಟಣದಲ್ಲಿ ವಿವಿಧ ಸಂಘಟನೆಗಳು ಮತ್ತು ಕಲಬುರಗಿ ನಗರದಲ್ಲಿ ರಾಮ್ ಸೇನೆ ಸಂಘಟನೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಆರೋಪಿಗಳನ್ನ‌ ಬಂಧಿಸಿ ಗಲ್ಲುಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.


ಟ್ಯೂಷನ್​ಗೆ ತೆರಳಿದ್ದ ಬಾಲಕಿ ಶವವಾಗಿ ಪತ್ತೆ


ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದಲ್ಲಿ ನಿರ್ಮಾಣ ಹಂತದ ಮನೆಯ ಸಂಪ್​ನಲ್ಲಿ ಬಾಲಕಿ ಶವಪತ್ತೆಯಾಗಿತ್ತು. ದಿವ್ಯಾ ಮಧ್ಯಾಹ್ನ ಟ್ಯೂಷನ್​ಗೆ ತೆರಳಿದ್ದಳು. ಎಷ್ಟು ಸಮಯ ಕಳೆದರೂ ಬಾಲಕಿ ಮನೆಗೆ ಬಾರದ ಹಿನ್ನೆಲೆ ಕುಟುಂಬಸ್ಥರು ಹುಡುಕಾಡಿದ್ದಾರೆ. ಈ ವೇಳೆ ಟ್ಯೂಷನ್ ಹಿಂಭಾಗದಲ್ಲಿ ನಿರ್ಮಾಣ ಹಂತದ ಮನೆಯ ಸಂಪ್​​ನಲ್ಲಿ ಬಾಲಕಿ ಶವ ಪತ್ತೆಯಾಗಿತ್ತು.


ಸ್ಥಳಕ್ಕೆ ಮಳವಳ್ಳಿ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಮಿಮ್ಸ್ ಶವಾಗಾರಕ್ಕೆ ರವಾನಿಸಿದ್ದರು. ಇದರ ನಡುವೆ ಬಾಲಕಿಯನ್ನ ಅತ್ಯಾಚಾರವೆಸಗಿ ಕೊಲೆಗೈದಿರುವ ಬಗ್ಗೆ ಪೋಷಕರು ಆರೋಪ ಮಾಡಿದ್ದರು. ಸದ್ಯ ಈಗ ಪೊಲೀಸರ ವಿಚಾರಣೆ ವೇಳೆ ಸತ್ಯ ಬಯಲಾಗಿತ್ತು.


ಇದನ್ನೂ ಓದಿ: DK Shivakumar: ಡಿಕೆಶಿಗೆ ಕೊಂಚ ನಿರಾಳ; ದೆಹಲಿ ಹೈಕೋರ್ಟ್​​ನಿಂದ EDಗೆ ನೋಟಿಸ್





ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಟ್ಯೂಷನ್ ಶಿಕ್ಷಕನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಸದ್ಯ ಶಿಕ್ಷಕ ತಪ್ಪು ಒಪ್ಪಿಕೊಂಡಿದ್ದಾನೆ. ಹೀಗಾಗಿ ಆರೋಪಿ ವಿರುದ್ಧ ಕೊಲೆ ಕೇಸ್ ದಾಖಲಾಗಿತ್ತು.





Published by:ಪಾವನ ಎಚ್ ಎಸ್
First published: