Murugha Seer: ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ, ರೇಪ್ ಆರೋಪ; ವಿದ್ಯಾರ್ಥಿನಿಯರಿಂದ ದೂರು

ಅಲ್ಲಿನ ಆಟೋ ಚಾಲಕರು ನಮ್ಮನ್ನು ಕಾಟನ್​ಪೇಟೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಪೊಲೀಸರು ನಮ್ಮನ್ನು ಪೋಷಕರ ಜೊತೆ ಕಳುಹಿಸಿದರು. ನಂತರ ಪೋಷಕರು ಈ ಸಂಬಂಧ ಜನಪ್ರತಿನಿಧಿಗಳ ಜೊತೆ ಮಾತನಾಡಿ ಒಡನಾಡಿ ಸಂಸ್ಥೆಗೆ ಬಂದು ದೂರು ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.

ಮುರುಘಾ ಸ್ವಾಮೀಜಿ

ಮುರುಘಾ ಸ್ವಾಮೀಜಿ

  • Share this:
ರಾಜ್ಯದ ಪ್ರತಿಷ್ಠಿತ ಚಿತ್ರದುರ್ಗದ ಮುರುಘಾರಾಜೇಂದ್ರ  ಬ್ರಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ (Muruga Seer) ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ದಿ ಫೈಲ್ಸ್ ವರದಿ ಮಾಡಿದೆ. ಮಠದ ಉಚಿತ ವಿದ್ಯಾರ್ಥಿ ನಿಲಯದಲ್ಲಿರುವ (Hostel) ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿವೆ ಎಂದು ವರದಿ ಮಾಡಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಎನ್ನಲಾದ ಮಕ್ಕಳೇ (Students) ಈ ಸಂಬಂಧ ಮಠದ ಸ್ವಾಮೀಜಿ ವಿರುದ್ಧ ದೂರು ಸಲ್ಲಿಸಿದ್ದಾರೆ. ಉಚಿತ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರು ಮೈಸೂರಿನ ಮಹಿಳಾ ಸಾಂತ್ವನ ಕೇಂದ್ರವಾದ ಒಡನಾಡಿ ಸಂಸ್ಥೆಗೆ ದೂರು ನೀಡಿದ್ದಾರೆ.

ಸಂಸ್ಥೆ ನೀಡಿದ ದೂರು ಆಧರಿಸಿ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಈ ಸಂಬಂಧ ಶುಕ್ರವಾರ ವಿಚಾರಣೆ ನಡೆಸಿದೆ ಎಂದು ವರದಿಯಾಗಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದ ವಿದ್ಯಾರ್ಥಿನಿಯರ ಹೇಳಿಕೆಯಲ್ಲಿ ಸತ್ಯಾಂಶ ಇದೆಯಾ ಎಂಬುದನ್ನು ಖಚಿತಪಡಿಸಿಕೊಂಡು ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಸಮಿತಿ ಪೊಲೀಸರಿಗೆ ಸೂಚನೆ ನೀಡಿದೆ.

ವಿದ್ಯಾರ್ಥಿನಿಯರ ದೂರು ಆಧರಿಸಿ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಆರಂಭದಲ್ಲಿ ಪೊಲೀಸರು ಎಫ್​ಐಆರ್ ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದರು ಎನ್ನಲಾಗಿದೆ. ನಂತರ ಪ್ರಕರಣವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದ ನಂತರ ಎಫ್​ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿನಿಯರು ನೀಡಿದ ದೂರಿನಲ್ಲಿ ಏನಿದೆ?

ವಾರಕ್ಕೊಮ್ಮೆ ಹಣ್ಣು  ಮತ್ತು ಸಿಹಿಯ ಆಶೀರ್ವಾದ ನೀಡುವ ನೆಪದಲ್ಲಿ ಸ್ವಾಮೀಜಿಗಳು ವಿದ್ಯಾರ್ಥಿನಿಯರನ್ನು ಏಕಾಂತಕ್ಕೆ ಕರೆಸಿಕೊಳ್ಳುತ್ತಾರೆ. ಈ ವೇಳೆ ಬಾಲಕಿಯರ ಜೊತೆ ಮಾತನಾಡುತ್ತಾ ಕುಟುಂಬದ ಹಿನ್ನೆಲೆ ತಿಳಿದುಕೊಳ್ಳುತ್ತಾರೆ. ನಂತರ ಸಹಾಯದ ಭರವಸೆ ನೀಡುವ ಸ್ವಾಮೀಜಿಗಳು ವಿದ್ಯಾರ್ಥಿನಿಯರನ್ನು ಲೈಂಗಿಕ ಉದ್ದೇಶಗಳಿಗಾಗಿ ಬಳಸಿಕೊಳ್ಳುತ್ತಾರೆ ಎಂದು ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ.

Rape Sexual Harassment By murugha Swamiji Complaint filed mrq
ಸಾಂದರ್ಭಿಕ ಚಿತ್ರ


ಕೊಲೆ ಮಾಡುವ ಬೆದರಿಕೆ

ಕೈ ಮುಗಿದು, ಕಾಲಿಗೆ ಬಿದ್ರೂ ಸ್ವಾಮೀಜಿಗಳು ಬಿಡಲ್ಲ. ಖಾಸಗಿ ಅಂಗಗಳನ್ನು ಮುಟ್ಟುತ್ತಾರೆ. ಈ ದೌರ್ಜನ್ಯದ ಬಗ್ಗೆ ಯಾರಿಗಾದ್ರೂ ಹೇಳಿದ್ರೆ ಕೊಲೆ ಮಾಡುವ ಬೆದರಿಕೆ ಸಹ ಹಾಕುತ್ತಾರೆ. ಕೆಲ ವಿದ್ಯಾರ್ಥಿನಿಯರು ಅನಾರೋಗ್ಯದ ನೆಪ ಹೇಳಿ ಸ್ವಾಮೀಜಿಗಳ ದೌರ್ಜನ್ಯದಿಂದ ತಪ್ಪಿಸಿಕೊಳ್ಳುತ್ತಾರೆ ಎಂದು ವಿದ್ಯಾರ್ಥಿನಿಯರು ಮಾಹಿತಿ ನೀಡಿದ್ದಾರೆ.

ಇನ್ನು ಕೆಲವು ವಿದ್ಯಾರ್ಥಿನಿಯರಿಗೆ ಹಣ್ಣು ಮತ್ತು ಸಿಹಿಯಲ್ಲಿ ಮತ್ತು ಬರುವ ಔಷಧಿ ಸೇರಿಸಿ ಕೊಡ್ತಾರೆ. ಈ ವೇಳೆ ಅರೆ ಪ್ರಜ್ಞಾ ಸ್ಥಿತಿಯಲ್ಲಿರುವಾಗ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ನಡೆಸಲಾಗುತ್ತದೆ.

ಬಲವಂತದ ಲೈಂಗಿಕ ಕ್ರಿಯೆ ಬಳಿಕ ಟಿಶ್ಯು ಬಳಕೆ

ಬಲವಂತದ ಲೈಂಗಿಕ ಕ್ರಿಯೆ ಬಳಿಕ ಸ್ವಾಮೀಜಿ ಸ್ವಚ್ಛತೆಗಾಗಿ ಟಿಶ್ಯೂ ಬಳಸುತ್ತಿದ್ದರು. ವಿದ್ಯಾರ್ಥಿನಿಯರಿಗೆ ಸ್ನಾನದ ಗೃಹ ಬಳಸುವಂತೆ ಹೇಳುತ್ತಿದ್ದರು ಎಂದು ದೂರಿನಲ್ಲಿ ವಿದ್ಯಾರ್ಥಿನಿಯರು ಉಲ್ಲೇಖಿಸಿದ್ದಾರೆ.

Rape Sexual Harassment By murugha Swamiji Complaint filed mrq
ಸಾಂದರ್ಭಿಕ ಚಿತ್ರ


ಈ ಲೈಂಗಿಕ ದೌರ್ಜನ್ಯವನ್ನು ಪ್ರಶ್ನೆ ಮಾಡಿದ್ದಕ್ಕೆ ನಮ್ಮನ್ನು ಜುಲೈನಿಂದ ಹಾಸ್ಟೆಲ್ ನಿಂದ ಹೊರಗೆ ಕಳುಹಿಸಿದ್ದಾರೆ. ನಾವು ಬೆಂಗಳೂರಿಗೆ ತೆರಳಿ ನಮ್ಮ ಸಂಬಂಧಿಕರ ಬಳಿ ಈ ವಿಷಯ ಹೇಳಲು ನಿರ್ಧರಿಸಿದೇವು, ಆದ್ರೆ ಬೆಂಗಳೂರಿಗೆ ಹೋದ ಬಳಿಕ ಸಂಬಂಧಿಕರ ಬಳಿ ಹೋಗಲಿಲ್ಲ.

ಬೆಂಗಳೂರಿಗೆ ಬಂದಿದ್ದ ವಿದ್ಯಾರ್ಥಿನಿಯರು

ಅಲ್ಲಿನ ಆಟೋ ಚಾಲಕರು ನಮ್ಮನ್ನು ಕಾಟನ್​ಪೇಟೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಪೊಲೀಸರು ನಮ್ಮನ್ನು ಪೋಷಕರ ಜೊತೆ ಕಳುಹಿಸಿದರು. ನಂತರ ಪೋಷಕರು ಈ ಸಂಬಂಧ ಜನಪ್ರತಿನಿಧಿಗಳ ಜೊತೆ ಮಾತನಾಡಿ ಒಡನಾಡಿ ಸಂಸ್ಥೆಗೆ ಬಂದು ದೂರು ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.
Published by:Mahmadrafik K
First published: