HOME » NEWS » State » RAVI KUMAR IAS SENIOR IAS OFFICER P RAVI KUMAR APPOINTED AS NEW CHIEF SECRETORY OF KARNATAKA SCT

Ravi Kumar IAS: ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ IAS ಅಧಿಕಾರಿ ಪಿ. ರವಿಕುಮಾರ್ ನೇಮಕ

P Ravi Kumar: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ನಿವೃತ್ತರಾಗಿರುವ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಹಿರಿಯ IAS​ ಅಧಿಕಾರಿ ಪಿ. ರವಿಕುಮಾರ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಇಂದು ವಿಜಯಭಾಸ್ಕರ್ P Ravi Kumar ಅವರಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.

Sushma Chakre | news18-kannada
Updated:December 31, 2020, 11:31 AM IST
Ravi Kumar IAS: ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ IAS ಅಧಿಕಾರಿ ಪಿ. ರವಿಕುಮಾರ್ ನೇಮಕ
ಪಿ. ರವಿಕುಮಾರ್
  • Share this:
ಬೆಂಗಳೂರು (ಡಿ. 31): ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ಇಂದು ನಿವೃತ್ತಿಯಾಗುತ್ತಿದ್ದಾರೆ. ಹೀಗಾಗಿ, ಅವರ ಜಾಗಕ್ಕೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ನಿನ್ನೆ ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯ ಕಾರ್ಯದರ್ಶಿ ಹುದ್ದೆಗೆ ಹಲವು IAS​ ಅಧಿಕಾರಿಗಳು ಲಾಬಿ ನಡೆಸಿದ್ದರು. ಅವರಲ್ಲಿ ರವಿಕುಮಾರ್ ಹೆಸರು ಮುಂಚೂಣಿಯಲ್ಲಿತ್ತು. ಅವರು ಇಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

1984ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ರವಿಕುಮಾರ್ ಕರ್ನಾಟಕ ಕೇಡರ್​ನಲ್ಲಿ ಎರಡನೇ ಅತಿ ಹಿರಿಯ ಐಎಎಸ್ ಅಧಿಕಾರಿಯಾಗಿದ್ದಾರೆ. ಇವರು ಮುಖ್ಯಮಂತ್ರಿಗಳ ಹೆಚ್ಚುವರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅತ್ಯಂತ ಹಿರಿಯ ಐಎಎಸ್ ಅಧಿಕಾರಿಯಾಗಿರುವ ರವಿಕುಮಾರ್ ಅವರನ್ನು ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಇದನ್ನೂ ಓದಿ: New Year 2021: ಬೆಂಗಳೂರಿಗರೇ ಎಚ್ಚರ!; ಸಿಲಿಕಾನ್ ಸಿಟಿಯಲ್ಲಿ ಇಂದು ಮಧ್ಯಾಹ್ನದಿಂದಲೇ ನಿಷೇಧಾಜ್ಞೆ ಜಾರಿ

ನಿನ್ನೆ ವಿಧಾನಸೌಧದಲ್ಲಿ ಟಿಎಂ ವಿಜಯಭಾಸ್ಕರ್ ಅವರಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬೀಳ್ಕೊಡುಗೆ ನೀಡಿದರು. ಈ ವೇಳೆ ಸಚಿವರೆಲ್ಲರೂ ಉಪಸ್ಥಿತರಿದ್ದರು. ಇಂದು ವಿಜಯಭಾಸ್ಕರ್ ಅವರು ರವಿಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ. ಕರ್ನಾಟಕದ ಅನೇಕ ಇಲಾಖೆಗಳಲ್ಲಿ ಸೇವೆ ಸಲ್ಲಿಸಿರುವ ರವಿಕುಮಾರ್ ಅವರು ರಾಜ್ಯದ 38ನೇ ಮುಖ್ಯ ಕಾರ್ಯದರ್ಶಿಯಾಗಿ ಇಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಉತ್ತರ ಕನ್ನಡ ಜಿಲ್ಲಾಧಿಕಾರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕ, ಸಹಕಾರ ಇಲಾಖೆ, ಸಾರಿಗೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ರವಿಕುಮಾರ್ ಸೇವೆ ಸಲ್ಲಿಸಿದ್ದರು. 2022ರ ಮೇ ತಿಂಗಳಲ್ಲಿ ರವಿಕುಮಾರ್ ಅವರ ಅಧಿಕಾರಾವಧಿ ಅಂತ್ಯವಾಗಲಿದೆ.
Published by: Sushma Chakre
First published: December 31, 2020, 11:31 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories