ಕಾಂಗ್ರೆಸ್ ನಿರಂತರ​ ಸೋಲಿಗೆ ರಾಹುಲ್​ ಗಾಂಧಿಯೇ ಕಾರಣ; ಮಾಜಿ‌ ಸಚಿವ ಆನಂದ್ ಅಸ್ನೋಟಿಕರ್

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಕೇವಲ ಒಂದು ಸ್ಥಾನ ಗೆದ್ದು ಹೀನಾಯ ಸೋಲು ಅನುಭವಿಸಿತ್ತು. ಈಗ ನಡೆದ ಉಪಚುನಾವಣೆಯಲ್ಲೂ ಕಾಂಗ್ರೆಸ್​​ ಬರೀ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಭಾರೀ ಮುಖಭಂಗ ಅನುಭವಿಸಿದೆ.

ಆನಂದ್ ಆಸ್ನೋಟಿಕರ್

ಆನಂದ್ ಆಸ್ನೋಟಿಕರ್

  • Share this:
ಕಾರವಾರ(ಡಿ.13): ರಾಜ್ಯದಲ್ಲಿ ನಡೆದ ಲೋಕಸಭೆ ಮತ್ತು ಉಪಚುನಾವಣೆಗಳಲ್ಲಿ ಕಾಂಗ್ರೆಸ್​​ ಸೋಲು ಅನುಭವಿಸಲು ರಾಹುಲ್​ ಗಾಂಧಿಯವರೇ ಪ್ರಮುಖ ಕಾರಣ ಎಂದು ಮಾಜಿ ಸಚಿವ ಆನಂದ್​ ಅಸ್ನೋಟಿಕರ್​ ಹೇಳಿದ್ದಾರೆ.

ಕಾರವಾರದಲ್ಲಿ ಮಾತನಾಡಿ ಅವರು, "ಇತ್ತೀಚಿನ ಕಾಂಗ್ರೆಸ್ ನಿರಂತರ ಸೋಲಿಗೆ ರಾಹುಲ್​ ಗಾಂಧಿ ಕಾರಣ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆಶಿಯಿಂದ ಕಾಂಗ್ರೆಸ್​ಗೆ ಸೋಲಾಗುತ್ತಿಲ್ಲ. ರಾಹುಲ್ ಗಾಂಧಿಯವರೇ ಕಾಂಗ್ರೆಸ್ ಸೋಲಿಗೆ ಮುಖ್ಯ ಕಾರಣ. ರಾಹುಲ್ ಗಾಂಧಿ ಯುವಕರ ಮನಸ್ಸಲ್ಲಿ ಪಪ್ಪು ಆಗಿದ್ದಾರೆ," ಎಂದು ಲೇವಡಿ ಮಾಡಿದ್ದಾರೆ.

ಆಸ್ಪತ್ರೆಯಲ್ಲಿ ಸಿದ್ದರಾಮಯ್ಯ ಜೊತೆ ರಮೇಶ್ ಜಾರಕಿಹೊಳಿ ರಹಸ್ಯ ಮಾತುಕತೆ

ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಿಂದ ಉಪ ಚುನಾವಣೆವರೆಗೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸಾಲು ಸಾಲು ಸೋಲುಗಳನ್ನು ಅನುಭವಿಸಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಕೇವಲ ಒಂದು ಸ್ಥಾನ ಗೆದ್ದು ಹೀನಾಯ ಸೋಲು ಅನುಭವಿಸಿತ್ತು. ಈಗ ನಡೆದ ಉಪಚುನಾವಣೆಯಲ್ಲೂ ಕಾಂಗ್ರೆಸ್​​ ಬರೀ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಭಾರೀ ಮುಖಭಂಗ ಅನುಭವಿಸಿದೆ.

ಸೋಲಿನ ನೈತಿಕ ಹೊಣೆ ಹೊತ್ತು ಮಾಜಿ ಸಿಎಂ ಸಿದ್ದರಾಮಯ್ಯ ವಿಪಕ್ಷ ನಾಯಕ ಸ್ಥಾನ ಹಾಗೂ ಶಾಸಕಾಂಗ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ಧಾರೆ. ಜೊತೆಗೆ ದಿನೇಶ್​ ಗುಂಡೂರಾವ್​ ಕೂಡ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಕಾಂಗ್ರೆಸ್​ ಹೈಕಮಾಂಡ್​ ಇನ್ನೂ ಸಹ ಇವರಿಬ್ಬರ ರಾಜೀನಾಮೆಯನ್ನು ಅಂಗೀಕಾರ ಮಾಡಿಲ್ಲ.

ಬಿಜೆಪಿಯೇತರ ಸಿಎಂಗಳು ಸಿಎಬಿ ಕಾಯ್ದೆ ಜಾರಿಯಾಗದಂತೆ ನೋಡಿಕೊಳ್ಳಬೇಕು; ಜೆಡಿಯು ನಾಯಕ ಪ್ರಶಾಂತ್ ಕಿಶೋರ್​ ಒತ್ತಾಯ
Published by:Latha CG
First published: