• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Kalaburagi: ಸರ್ಕಾರಿ ಉದ್ಯೋಗಕ್ಕಾಗಿ ಅಡ್ಡದಾರಿ; 5 ಕೆಜಿ ಕಬ್ಬಿಣದ ಕಲ್ಲನ್ನು ಕಾಲಿಗೆ ಕಟ್ಟಿಕೊಂಡು ಬಂದು ಸಿಕ್ಕಿಬಿದ್ರು!

Kalaburagi: ಸರ್ಕಾರಿ ಉದ್ಯೋಗಕ್ಕಾಗಿ ಅಡ್ಡದಾರಿ; 5 ಕೆಜಿ ಕಬ್ಬಿಣದ ಕಲ್ಲನ್ನು ಕಾಲಿಗೆ ಕಟ್ಟಿಕೊಂಡು ಬಂದು ಸಿಕ್ಕಿಬಿದ್ರು!

ಸಿಕ್ಕಿಬಿದ್ದ ಅಭ್ಯರ್ಥಿಗಳು

ಸಿಕ್ಕಿಬಿದ್ದ ಅಭ್ಯರ್ಥಿಗಳು

ಕೆಲ ಅಭ್ಯರ್ಥಿಗಳು ಕಬ್ಬಿಣದ ಕಲ್ಲು, ಕಬ್ಬಿಣದ ಬಾರ್ ಕಟ್ಟಿಕೊಂಡು ಬಂದು ತೂಕ ಹೆಚ್ಚಿದೆ ಎಂದು ತೋರಿಸಲು ಬಂದಿದ್ದರು. ಹೀಗೆ ಬಂದ ನಾಲ್ವರ ಕಳ್ಳಾಟವನ್ನು ಪತ್ತೆ ಹಚ್ಚುವಲ್ಲಿ ಸಾರಿಗೆ ಸಂಸ್ಥೆಯ ನೇಮಕಾತಿ ವಿಭಾಗದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

  • News18 Kannada
  • 4-MIN READ
  • Last Updated :
  • Gulbarga, India
  • Share this:

ಕಲಬುರಗಿ: ರಾಜ್ಯದಲ್ಲಿ ಪಿಎಸ್ಐ ನೇಮಕಾತಿ (Karnataka PSI Scam ) ಅಕ್ರಮ ಮೊದಲು ಬೆಳಕಿಗೆ ಬಂದಿದ್ದು ಕಲಬುರಗಿಯಲ್ಲಿ (Kalaburagi). ಕಿಂಗ್ ಪಿನ್​ಗಳ ಸಹಾಯದಿಂದ ಅನೇಕ ಅಭ್ಯರ್ಥಿಗಳು ಎಲೆಕ್ಟ್ರಾನಿಕ್ ಬ್ಲೂಟೂತ್ ಡಿವೈಸ್ (Bluetooth Electronic Device ) ಇಟ್ಟುಕೊಂಡು ಪರೀಕ್ಷಾ ಕೇಂದ್ರಕ್ಕೆ ಹೋಗಿ, ಹೊರಗಿನಿಂದ ಬಂದ ಉತ್ತರವನ್ನು ಬರೆದು ಆಯ್ಕೆಯಾಗಿದ್ದು ದೊಡ್ಡ ಸುದ್ದಿಯಾಗಿತ್ತು. ಇದೀಗ ಕಲಬುರಗಿಯಲ್ಲಿ ಮತ್ತೊಂದು ಚಾಲಾಕಿತನ ಕೃತ್ಯ ಬೆಳಕಿಗೆ ಬಂದಿದೆ. ಹೌದು ದೇಹದಾರ್ಢ್ಯ ಪರೀಕ್ಷೆಯಲ್ಲಿ (Physical Examination) ನಿಗದಿತ ತೂಕವನ್ನು ತೋರಿಸಲು ಕೆಲವರು ಚಡ್ಡಿ ಹಾಗೂ ಪ್ಯಾಂಟ್ ಒಳಗೆ ತೂಕ (Weight Measurement) ಕಲ್ಲು ಹಾಗೂ ಕಬ್ಬಿಣದ ಬಾರ್ ಇಟ್ಟುಕೊಂಡು ಬಂದು ಸಿಕ್ಕಿಬಿದ್ದಿದ್ದಾರೆ.


ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 1,619 ಜನ ಕಂಡಕ್ಟರ್ ಕಂ ಡ್ರೈವರ್ ಹುದ್ದೆಗಳ ನೇಮಕಾತಿಗೆ ಈ ಹಿಂದೆ ಅರ್ಜಿ ಕರೆಯಲಾಗಿತ್ತು. ಅದಕ್ಕಾಗಿ 163 ಸೆಂಟಿ ಮೀಟರ್ ಎತ್ತರ ಮತ್ತು 55 KG ತೂಕ ಹೊಂದಿರಬೇಕಿತ್ತು. ಆದರೆ ಕೆಲವರು ಕಬ್ಬಿಣದ ಕಲ್ಲು, ಕಬ್ಬಿಣದ ಬಾರ್ ಕಟ್ಟಿಕೊಂಡು ಬಂದು ತೂಕ ಹೆಚ್ಚಿದೆ ಎಂದು ತೋರಿಸಲು ಬಂದಿದ್ದರು. ಹೀಗೆ ಬಂದ ನಾಲ್ವರ ಕಳ್ಳಾಟವನ್ನು ಪತ್ತೆ ಹಚ್ಚುವಲ್ಲಿ ಸಾರಿಗೆ ಸಂಸ್ಥೆಯ ನೇಮಕಾತಿ ವಿಭಾಗದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಅಭ್ಯರ್ಥಿಗಳು ಕಬ್ಬಿಣದ ಕಲ್ಲುಗಳನ್ನು ಕಟ್ಟಿಕೊಂಡು ಬಂದಿರುವುದನ್ನು ಪತ್ತೆ ಮಾಡಿ ಅವುಗಳನ್ನು ಬಿಚ್ಚಿಸುತ್ತಿರುವ ವಿಡಿಯೋ ಸದ್ಯ ಸಖತ್ ವೈರಲ್ ಆಗಿದೆ.


ಇದನ್ನೂ ಓದಿ: Siddaramaiah: 4 ತಿಂಗಳ ಕೂಸಿಗೆ ತನ್ನ ಹೆಸರಿಟ್ಟ ಸಿದ್ದರಾಮಯ್ಯ; ಸಿಹಿ ತಿನ್ನಿಸಿ ಶುಭ ಕೋರಿದ ಮಾಜಿ ಸಿಎಂ ಸಿದ್ದು


ನೆರೆ ಸಂತ್ರಸ್ಥರ ಗೋಳು ಕೇಳೋರ್ಯಾರು?


ನೆರೆ ನಿರಾಶ್ರಿತರು ತಾಲೂಕು ಕಚೇರಿಯಲ್ಲಿ ವಿಷ ಕುಡಿಯಲು ಮುಂದಾದ ಘಟನೆ ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ನಡೆದಿದೆ. ಮಲೆಮನೆ-ಮಧುಗುಂಡಿ ಗ್ರಾಮದ ಸಂತ್ರಸ್ಥರು, ಪೆಟ್ರೋಲ್ ಸುರಿದುಕೊಂಡು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. 2019ರ ನೆರೆಯಿಂದ 11 ಕುಟುಂಬಗಳು ಬದುಕು ಕಳೆದುಕೊಂಡಿದ್ವು. ಮನೆ, ಆಸ್ತಿ, ಹೊಲ, ಗದ್ದೆ, ತೋಟ ಎಲ್ಲವನ್ನೂ ಕಳೆದುಕೊಂಡಿದ್ದರು. ಮಲೆಮನೆಯ ಆರು ಮನೆಗಳು ಸಂಪೂರ್ಣ ನೆಲಸಮವಾಗಿದ್ದವು. ಪರ್ಯಾಯ ಜಾಗ ತೋರಿಸಿದರೂ ಆ ಜಾಗವನ್ನು ಮತ್ತೊಬ್ಬರಿಗೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.


ಕಿಚ್ಚ ಸುದೀಪ್​ ಅವರಿಗೆ ವಾಲ್ಮೀಕಿ ಜಾತ್ರೆ ಆಹ್ವಾನ ಪತ್ರಿಕೆ ನೀಡಿದ್ದ ಬಗ್ಗೆ ಹೇಳಿರಲಿಲ್ವಾ ತಂದೆ?


ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಲ್ಲಿ ವಾಲ್ಮೀಕಿ ಜಾತ್ರೆಯ ಸಮಾರಂಭಕ್ಕೆ ಗೈರಾಗಿದ್ದಕ್ಕೆ ನಟ ಕಿಚ್ಚ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ಕಾರ್ಯಕ್ರಮಕ್ಕೆ ಆಹ್ವಾನ ಇರಲಿಲ್ಲ. ನಾನು ಒಪ್ಪಿಕೊಂಡ ಕಾರ್ಯಕ್ರಮಗಳನ್ನು ತಪ್ಪಿಸಿದವನಲ್ಲ. ಆದರೂ ವಾಲ್ಮೀಕಿ ಜಾತ್ರೆಯಲ್ಲಿ ನಡೆದ ಘಟನೆಯ ಬಗ್ಗೆ ವಿಷಾದವಿದೆ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ. ಆದರೆ, ಆಯೋಜಕರು ಸುದೀಪ್ ಬದಲಿಗೆ ಅವರ ತಂದೆಯನ್ನು ಭೇಟಿಯಾಗಿ ಆಹ್ವಾನ ನೀಡಿದ್ದರು. ಸಂವಹನ ಕೊರತೆಯಿಂದ ಈ ಸಮಸ್ಯೆ ಉಂಟಾಗಿದೆ. ಸುದೀಪ್ ತಂದೆ, ಸುದೀಪ್​ ಅವರಿಗೆ ಆಹ್ವಾನದ ವಿಷಯವನ್ನೇ ಹೇಳಿರಲಿಲ್ಲವೇ ಎಂಬ ಚರ್ಚೆ ಶುರುವಾಗಿದೆ.



ಇದನ್ನೂ ಓದಿ: Bengaluru: ಮೊದಲ ಪತ್ನಿ ಕಣ್ತಪ್ಪಿಸಿ 2ನೇ ಪತ್ನಿಗೆ ಸೀಮಂತ, ಸಂಭ್ರಮ ನಡೆಯುತ್ತಿದ್ದ ಮನೆ ರಣರಂಗ! ಅಸಲಿಗೆ ಆಗಿದ್ದೇನು?


ಇನ್ನು ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಬಿಜೆಪಿ ಶಾಸಕ ರಾಜುಗೌಡ, ಸುದೀಪ್​ ಅವರಿಗೆ ಆಹ್ವಾನವನ್ನೇ ನೀಡಿರಲಿಲ್ಲ. ಆದ್ದರಿಂದ ಅವರು ಹೈದರಾಬಾದ್​ನಲ್ಲಿ ಶೂಟಿಂಗ್​ಗೆ ತೆರಳಿದ್ದರು. ಮುಂದಿನ ವರ್ಷದ ಜಾತ್ರೆ ಸಂದರ್ಭದಲ್ಲಿ ಅವರಿಗೆ ಮಾಹಿತಿ ನೀಡಿ ಕರೆತರಲಾಗುತ್ತದೆ. ಇದರಲ್ಲ ಸುದೀಪ್​ ಅವರ ಯಾವುದೇ ತಪ್ಪು ಇಲ್ಲ. ಈ ಬಗ್ಗೆ ಅಭಿಮಾನಿಗಳು ಬೇಸರ ಮಾಡಿಕೊಳ್ಳಬಾರದು ಎಂದು ಮನವಿ ಮಾಡಿದ್ದರು.

Published by:Sumanth SN
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು