ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಯಲ್ಲಿ ಬ್ಯಾಂಕಿಂಗ್​ ಪರೀಕ್ಷೆ ಬರೆಯಲು ಕೇಂದ್ರದಿಂದ ಅನುಮತಿ

Seema.R | news18
Updated:July 4, 2019, 4:23 PM IST
ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಯಲ್ಲಿ ಬ್ಯಾಂಕಿಂಗ್​ ಪರೀಕ್ಷೆ ಬರೆಯಲು ಕೇಂದ್ರದಿಂದ ಅನುಮತಿ
ಸಾಂದರ್ಭಿಕ ಚಿತ್ರ
  • News18
  • Last Updated: July 4, 2019, 4:23 PM IST
  • Share this:
ನವದೆಹಲಿ (ಜು.04): ಇನ್ಮುಂದೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಯಲ್ಲಿ ಬ್ಯಾಂಕಿಂಗ್​ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ತಿಳಿಸಿದ್ದಾರೆ. ಈ ಮೂಲಕ ಕನ್ನಡಿಗರ ಬಹುದಿನದ ಬೇಡಿಕೆಗೆ ಮನ್ನಣೆ ಸಿಕ್ಕಿದೆ.

ಲೋಕಸಭೆಯಲ್ಲಿ ಈ ಕುರಿತು ವಿಷಯ ಮಂಡಿಸಿದ ಅವರು, ಐಬಿಪಿಎಸ್​ ನಡೆಸುವ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್​ ಪರೀಕ್ಷೆಗಳನ್ನು ಇಂಗ್ಲಿಷ್​ ಮತ್ತು ಹಿಂದಿ ಭಾಷೆಯಲ್ಲಿ ನಡೆಸಲಾಗುತ್ತಿತ್ತು. ಈ ಪರೀಕ್ಷೆಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಕೂಡ ನಡೆಸುವಂತೆ ಬೇಡಿಕೆ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅನುಮತಿ ನೀಡಲಾಗುವುದು ಎಂದು ಘೋಷಿಸಿದರು.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​


ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕನ್ನಡ, ಕೊಂಕಣಿ, ಮಲಯಾಳಂ, ಮಣಿಪುರಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಮತ್ತು ಉರ್ದು ಭಾಷೆಗಳಲ್ಲಿ ಇನ್ನು ಮುಂದೆ ಬ್ಯಾಂಕಿಂಗ್​ ಪರೀಕ್ಷೆ ಬರೆಯಬಹುದಾಗಿದೆ ಎಂದು ತಿಳಿಸಿದರು.

ಪ್ರಾದೇಶಿಕ ಭಾಷೆಗಳಿಗೆ ಒತ್ತು ನೀಡುವುದರಿಂದ ಸ್ಥಳೀಯ ಯುವಜನತೆಗೆ ಉದ್ಯೋಗಾವಕಾಶ ಹೆಚ್ಚಾಗಲಿದೆ. ಸ್ಕೇಲ್​-1 ಮಟ್ಟದ ಅಧಿಕಾರಿ ಹಾಗೂ ಆರ್​ಆರ್​ಬಿಯ ಆಫೀಸ್​ ಅಸಿಸ್ಟೆಂಟ್​ ನೇರ ನೇಮಕಾತಿ ಹುದ್ದೆಗಳು ಇನ್ಮುಂದೆ ಪ್ರಾದೇಶಿಕ ಭಾಷೆಗಳಲ್ಲಿ ನಡೆಯಲಿದೆ ಎಂದರು.

ಇದನ್ನು ಓದಿ: ಉದ್ಯೋಗ ಹೆಚ್ಚಳಕ್ಕೆ ಒತ್ತು; ಪ್ರಸಕ್ತ ಸಾಲಿನ ಜಿಡಿಪಿ ದರ ಶೇ 7ರಷ್ಟು ಹೆಚ್ಚಾಗುವ ನಿರೀಕ್ಷೆ; ನಿರ್ಮಲಾ ಸೀತಾರಾಮನ್​​

ಇತ್ತೀಚಿನ ದಿನಗಳಲ್ಲಿ ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್​ ಪರೀಕ್ಷೆ ನಡೆಸಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ದೊಡ್ಡಮಟ್ಟದ ಅಭಿಯಾನ ಆರಂಭಿಸಲಾಗಿತ್ತು. ಪ್ರಾದೇಶಿಕ ಭಾಷೆಗಳಲ್ಲಿ ಕಲಿತ ಎಷ್ಟೋ ಪ್ರತಿಭಾವಂತ ವಿದ್ಯಾರ್ಥಿಗಳು ಇಂಗ್ಲಿಷ್​ ಅಥವಾ ಹಿಂದಿ ಭಾಷೆಯಲ್ಲಿ ಪರೀಕ್ಷೆ ಎದುರಿಸಬೇಕಾದ್ದರಿಂದ ಅವರು ಹಿಂದುಳಿಯುತ್ತಿದ್ದರು. ಈ ಹಿನ್ನೆಲೆಯಲ್ಲಿ ಈ ಕೂಗು ಹೆಚ್ಚಾಗಿತ್ತು. ಕರ್ನಾಟಕದಲ್ಲಿ ಕೂಡ ಈ ಕೂಗು ಕೇಳಿ ಬಂದಿತ್ತು. ಬ್ಯಾಂಕಿಂಗ್​ ಪರೀಕ್ಷೆಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಬೇಕು. ಇದಕ್ಕಾಗಿ ಐಬಿಪಿಎಸ್​ ನಿಯಮ ಸಡಿಲಗೊಳಿಸುವಂತೆ ಕೋರಿ ಉಪ ಮುಖ್ಯಮಂತ್ರಿ ಜಿ ಪರಮೇಶ್ವರ್​ ಈ ಹಿಂದೆ ಕೇಂದ್ರಕ್ಕೆ ಪತ್ರ ಬರೆದಿದ್ದರು. ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿದರೆ ಯುವಜನರಿಗೆ ಅನುಕೂಲವಾಗಲಿದೆ ಎಂದು ಮನವಿ ಮಾಡಿದ್ದರು.

First published:July 4, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ